ಯಾದಗಿರಿ | ಹೋರಾಟ ಫಲ: ಕಟ್ಟಡ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

Date:

ಹಲವು ವರ್ಷಗಳಿಂದ ವಿಳಂಬವಾಗಿದ್ದ ಕಟ್ಟಡ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ಸೇನೆ ನಡೆಸಿದ ನಿರಂತರ ಹೋರಾಟ ಫಲ ನೀಡಿದ್ದು, ಶನಿವಾರ ಕೆಂಭಾವಿ ಪಟ್ಟಣದಲ್ಲಿ ನೂರಾರು ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

- Advertisement -

ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಮ್ಮ ಕರ್ನಾಟಕ ಸೇನೆ ಕಟ್ಟಡ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷ ಗುರು ದೊಡ್ಮನಿ ಕಾರ್ಮಿಕರಿಗೆ ಕಾರ್ಡ್‌ಗಳನ್ನು ಹಸ್ತಾಂತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಈ ವೇಳೆ ಮಾತನಾಡಿದ ಅವರು, ಕಾರ್ಮಿಕರ ಹಿತರಕ್ಷಣೆ ಹಾಗೂ ಸರ್ಕಾರದ ಸೌಲಭ್ಯಗಳು ಪ್ರತಿಯೊಬ್ಬ ಅರ್ಹ ಕಾರ್ಮಿಕನಿಗೂ ತಲುಪುವಂತೆ ಮಾಡಲು ಸಂಘಟನೆ ಶ್ರಮಿಸುತ್ತಿದೆ ಎಂದರು.

ಕೆಂಭಾವಿ ಹೋಬಳಿ ಕಾರ್ಮಿಕ ಘಟಕದ ಅಧ್ಯಕ್ಷ ಗುರುರಾಜ ಎಸ್. ಅಂಗಡಿ ಮಾತನಾಡಿ, ‘ಸ್ಮಾರ್ಟ್ ಕಾರ್ಡ್‌ಗಳಿಗಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಹೋರಾಟದ ಎಚ್ಚರಿಕೆಯ ನಂತರ ಇಲಾಖೆ ಕ್ರಮ ಕೈಗೊಂಡಿದ್ದು, ಇದು ಕಾರ್ಮಿಕರ ಏಕತೆಯ ಗೆಲುವಾಗಿದೆ,’ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಎಸ್‌ಐಆರ್ ಕುರಿತು ಸಂವಾದ ಗೋಷ್ಠಿ: ಪೌರತ್ವ ಪ್ರಶ್ನೆ, ಪ್ರಭುತ್ವದ ಹುನ್ನಾರಗಳ ವಿರುದ್ಧ ತೀವ್ರ ಚರ್ಚೆ

ಕಾರ್ಯಕ್ರಮದಲ್ಲಿ ಶರಣು ಎಸ್. ದೇವರಮನಿ, ರಫೀಕ ಮುಜವಾರ, ಹನುಮಂತ, ಮುರ್ತುಜಾ ಸುರಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಕಟ್ಟಡ ಕಾರ್ಮಿಕರು ತಮ್ಮ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಎಕರೆಗೆ ₹25 ಸಾವಿರ ಬರ ಪರಿಹಾರ, ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ರೈತರ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...

ಯಾದಗಿರಿ | ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...