ಯಾದಗಿರಿ | ದಲಿತರ ಕೇರಿಗೆ ರಸ್ತೆ ವಿವಾದ: ಕಾಂಕ್ರೀಟ್ ರಸ್ತೆಯಲ್ಲೇ ಧರಣಿ

Date:

ಶಾಹಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ವಿಚಾರವಾಗಿ ಉದ್ಭವಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಮಸ್ಯೆ ಶೀಘ್ರ ಬಗೆಹರಿಸಬೇಕು ಎಂದು ಆಗ್ರಹಿಸಿ ದಲಿತ ಮುಖಂಡರು ಹಾಗೂ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು.

- Advertisement -

ಕೆಕೆಆರ್‌ಡಿಬಿ ಅನುದಾನದಲ್ಲಿ ಸುಮಾರು ₹20 ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಮಂಜೂರಾತಿ ದೊರೆತಿತ್ತು. ಗ್ರಾಮದಲ್ಲಿನ ದಲಿತರ ಕೇರಿಗೆ ಸಮರ್ಪಕ ರಸ್ತೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಕಾಮಗಾರಿ ಆರಂಭಿಸಲಾಗಿತ್ತು. ಆದರೆ ಕೆಲ ಮೇಲ್ವರ್ಗದ ಸಮುದಾಯದವರು ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಿದ್ದರಿಂದ ಕಾಮಗಾರಿ ಕೆಲಕಾಲ ಸ್ಥಗಿತಗೊಂಡಿತ್ತು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಬಳಿಕ ನ್ಯಾಯಾಲಯದಿಂದ ತಡೆಯಾಜ್ಞೆ ತೆರವಾದ ನಂತರ ರಸ್ತೆ ಕಾಮಗಾರಿಯನ್ನು ಪುನರಾರಂಭಿಸಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಮುಂದಾದಾಗ ಮತ್ತೆ ತಕರಾರು ಉಂಟಾಯಿತು. ಇದರಿಂದ ಆಕ್ರೋಶಗೊಂಡ ದಲಿತ ಮುಖಂಡರು ಹಾಗೂ ಸ್ಥಳೀಯರು ರಸ್ತೆ ಸ್ಥಳದಲ್ಲೇ ಸೇರಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಕಾಂಕ್ರೀಟ್ ರಸ್ತೆಯ ಮೇಲೆಯೇ ಕುಳಿತು ಸರ್ಕಾರ ಹಾಗೂ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ದಲಿತರ ಕೇರಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೂ ಅಡ್ಡಿಪಡಿಸಲಾಗುತ್ತಿದೆ. ಇದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡೆ. ಹಲವು ವರ್ಷಗಳಿಂದ ಗ್ರಾಮದಲ್ಲಿನ ದಲಿತರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ,” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈ ವೇಳೆ ಕದಸಂಸ ‘ಅಂಬೇಡ್ಕರ್ ಮಾರ್ಗ’ ಜಿಲ್ಲಾ ಸಂಚಾಲಕ ವಿಶ್ವ ನಾಟೇಕಾರ್ ಮಾತನಾಡಿ, “ರಸ್ತೆ ನಿರ್ಮಾಣ ಕಾರ್ಯವನ್ನು ತಕ್ಷಣ ಪೂರ್ಣಗೊಳಿಸಬೇಕು. ಸಮಸ್ಯೆಯನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ. ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು,” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆ ಮಾಹಿತಿ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸಿ ರಸ್ತೆ ಸಂಚಾರಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಕಳಪೆ ಬೀಜ, ರಸಗೊಬ್ಬರ ಮಾರಾಟ ಆರೋಪ: ಕ್ರಮಕ್ಕೆ ಕೆಪಿಆರ್‌ಎಸ್‌ ಆಗ್ರಹ

ಪೊಲೀಸರ ಭರವಸೆಯ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು. ಆದರೆ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ದಲಿತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಯಾದಗಿರಿ | ಎಕರೆಗೆ ₹25 ಸಾವಿರ ಬರ ಪರಿಹಾರ, ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ರೈತರ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...