ಯಾದಗಿರಿ | ಗ್ರಾಮೀಣ ಮಕ್ಕಳಿಗೆ ಉತ್ತಮ ಕನಸು ಕಾಣಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು: ಅನಿಲ್ ತೇಜಪ್ಪ ಬಲ್ಲೂರ್ಕರ್

Date:

ಗ್ರಾಮೀಣ ಮಕ್ಕಳಿಗೆ ಉತ್ತಮ ಕನಸು ಕಾಣಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಅನಿಲ್ ತೇಜಪ್ಪ ಬಲ್ಲೂರ್ಕರ್ ಹೇಳಿದರು.

- Advertisement -

ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ವತಿಯಿಂದ ಆಯೋಜಿಸಿದ್ದ “ಜೀವನ ಶಾಲೆ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಲ್ಲಿ ಉತ್ತಮ ಗುರಿ ರೂಪಿಸಿ ಅದನ್ನು ಸಾಧಿಸಲು ಸತತ ಮತ್ತು ಪ್ರಾಮಾಣಿಕ ಪ್ರಯತ್ನ ಅಗತ್ಯವೆಂದು ತಿಳಿಸಿದರು. ಹಾಡು ಹಾಗೂ ಕಥೆಗಳ ಮೂಲಕ ಮಕ್ಕಳಿಗೆ ಜೀವನ ಮೌಲ್ಯಗಳ ಬಗ್ಗೆ ಅರಿವು ಮೂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಿಗಣ್ಣ ನಾಟೇಕರ್, ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಪ್ಪ ದೊರೆ, ಆಶಾ ಕಾರ್ಯಕರ್ತೆ ಗುರುಶೀಲಾ ಹಾಗೂ ಕನ್ನೆಕೊಳೂರಿನ ಗಣ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದ ಉದ್ದೇಶ ಮಕ್ಕಳಲ್ಲಿ ಜೀವನ ಕೌಶಲ್ಯಗಳನ್ನು ಬೆಳೆಸುವುದು, ಆತ್ಮವಿಶ್ವಾಸ ಹೆಚ್ಚಿಸುವುದು, ನಾಯಕತ್ವ ಗುಣಗಳನ್ನು ಉತ್ತೇಜಿಸುವುದು ಮತ್ತು ಶಿಕ್ಷಣದ ಮಹತ್ವ ತಿಳಿಸುವುದಾಗಿತ್ತು. ಮಕ್ಕಳಿಗೆ ಆರೋಗ್ಯ, ಸ್ವಚ್ಛತೆ, ಶಿಸ್ತು, ಸಮಯದ ಮೌಲ್ಯ ಹಾಗೂ ಉತ್ತಮ ಅಭ್ಯಾಸಗಳ ಕುರಿತು ಮಾಹಿತಿ ನೀಡಲಾಯಿತು.

ವಿವಿಧ ಆಟಗಳು, ಗುಂಪು ಚರ್ಚೆಗಳು, ಹಾಡುಗಳು ಹಾಗೂ ಪ್ರೇರಣಾದಾಯಕ ಚಟುವಟಿಕೆಗಳ ಮೂಲಕ ಮಕ್ಕಳನ್ನು ಸಕ್ರಿಯವಾಗಿ ಭಾಗವಹಿಸಲು ಉತ್ತೇಜಿಸಲಾಯಿತು. ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಶಿಕ್ಷಣ ಮತ್ತು ಮೌಲ್ಯಾಧಾರಿತ ತರಬೇತಿ ಅತ್ಯಗತ್ಯ ಎಂದು ಮುಖ್ಯ ಅತಿಥಿಗಳು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಕೋಳೂರಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಗ್ರ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಶಾಲು, ಹೂವು ಮತ್ತು ಬಹುಮಾನ ನೀಡಿ ಸನ್ಮಾನಿಸಲಾಯಿತು. ಅರ್ಚನಾ ನಿಂಗಪ್ಪ (93.76%), ಪ್ರಿಯಾಂಕಾ (86.20%), ಮೈಬೀ ಲಾಲ್ ಅಹ್ಮದ್ (84.96%), ಶೃತಿ (82.56%) ಮತ್ತು ಭಾಗ್ಯಶ್ರೀ (82.24%) ಸಾಧನೆಗೆ ಅಭಿನಂದಿಸಲಾಯಿತು.

ಪ್ರಾಯೋಜಕತ್ವ ಯೋಜನೆಯಡಿ 10 ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಬಾಟಲಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ವಿಶೇಷ ಊಟದ ವ್ಯವಸ್ಥೆ ಮಾಡಲಾಗಿತ್ತು.

ಇದನ್ನು ಓದಿದ್ದೀರಾ? ಎಸ್ಸೆಸ್ಸೆಲ್ಸಿ ಫಲಿತಾಂಶ | ಕಲಬುರಗಿ ಜಿಲ್ಲೆಗೆ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

ಎರಡು ನೂರಕ್ಕೂ ಹೆಚ್ಚು ಮಕ್ಕಳು, ಪೋಷಕರು ಹಾಗೂ ಗ್ರಾಮದ ಹಿರಿಯರು ಭಾಗವಹಿಸಿದ್ದರು. ಸಂಸ್ಥೆಯ ಸಿಬ್ಬಂದಿಯಾದ ಮಿಖಾಯಲ್, ರಾಬರ್ಟ್, ಸಿದ್ದಮ್ಮ, ಮೇನಕ, ರೇಖಾ ಮತ್ತು ವಿಜಯಲಕ್ಷ್ಮಿ ಉಪಸ್ಥಿತರಿದ್ದರು. ಮಾರ್ಟಿನ್ ಕಾರ್ಯಕ್ರಮ ನಿರೂಪಿಸಿದರು. ಮೋಹನ್ ಕುಮಾರ್ ಹೊಸಮನಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಯಾದಗಿರಿ | ಶಾಸಕರ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ: 200ಕ್ಕೂ ಹೆಚ್ಚು ಟಿಪ್ಪರ್‌ಗಳ ಮೆರವಣಿಗೆ

ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಟಿಪ್ಪರ್‌ಗಳಿಗೆ ಬೆಂಕಿ ಹಚ್ಚುವುದಾಗಿ ನೀಡಿರುವ...

ಯಾದಗಿರಿ | ಭತ್ತದ ಬೆಳೆ ಉಳಿಸಲು ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ರೈತರ ಧರಣಿ

ಈಗಾಗಲೇ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಭತ್ತದ ಬೆಳೆ ಉಳಿಸಲು ತಕ್ಷಣ...