ರಾಜ್ಯದ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಹಿತಾಸಕ್ತಿಗಳ ರಕ್ಷಣೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಅದೇ ಖಾತೆಯನ್ನು ಮುಂದುವರಿಸಬೇಕು ಎಂದು ಕೆಪಿಸಿಸಿ ಪದವೀಧರ ವಿಭಾಗದ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ ಮರಿಲಿಂಗ ಸಾವೂರ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ಸಂತೋಷ ಲಾಡ್ ಅವರು ಕಾರ್ಮಿಕರ ನೋವು-ನಲಿವಿನಲ್ಲಿ ಸದಾ ಭಾಗಿಯಾಗಿರುವ ಜನನಾಯಕರಾಗಿದ್ದು, ಕಾರ್ಮಿಕ ವರ್ಗದ ಸಂಕಷ್ಟಗಳಿಗೆ ಮಾನವೀಯ ಸ್ಪಂದನೆ ನೀಡುವ ಮೂಲಕ ರಾಜ್ಯದಾದ್ಯಂತ ಕಾರ್ಮಿಕರ ವಿಶ್ವಾಸ ಗಳಿಸಿದ್ದಾರೆ’ ಎಂದು ತಿಳಿಸಿದ್ದಾರೆ.
‘ಕಾರ್ಮಿಕರ ಹಕ್ಕುಗಳ ರಕ್ಷಣೆ, ವಿವಿಧ ಕಲ್ಯಾಣ ಯೋಜನೆಗಳ ಅನುಷ್ಠಾನ ಹಾಗೂ ಕಾರ್ಮಿಕ ಸ್ನೇಹಿ ಆಡಳಿತ ನೀಡುವಲ್ಲಿ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ನಾಯಕತ್ವದಲ್ಲಿ ಕಾರ್ಮಿಕ ಇಲಾಖೆಯು ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಕಾರ್ಮಿಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರೆಯುತ್ತಿದೆ’ ಎಂದು ಹೇಳಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಬಾಲಕ ದಾರುಣ ಸಾವು!
‘ಆದ್ದರಿಂದ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಹೈಕಮಾಂಡ್, ಸಂತೋಷ ಲಾಡ್ ಅವರಿಗೆ ಕಾರ್ಮಿಕ ಖಾತೆಯನ್ನು ಮುಂದುವರಿಸಿ ರಾಜ್ಯದ ಕಾರ್ಮಿಕರ ಸೇವೆ ಮಾಡಲು ಮತ್ತಷ್ಟು ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದ್ದಾರೆ.





