ಯಾದಗಿರಿ | ಚಂದ್ರಕಾಂತ ಕರದಳ್ಳಿ ಬದುಕು, ಬರಹ ಕುರಿತು ವಿಚಾರ ಸಂಕಿರಣ; ತಾಲೂಕು ಮಟ್ಟದ ಕವಿಗೋಷ್ಠಿ

Date:

ಸಿದ್ಧಾರೂಢ ವೀರುಪಾಕ್ಷ ಹಾಗೂ ಶ್ರವಣ ಬಸವರಾಜ ಆನೇಗುಂದಿ ಅವರ ಸ್ಮರಣಾರ್ಥವಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶಾಹಪುರ ವತಿಯಿಂದ ಖ್ಯಾತ ಸಾಹಿತಿ ಚಂದ್ರಕಾಂತ ಕರದಳ್ಳಿ ಅವರ ಬದುಕು, ಬರಹ ಕುರಿತು ವಿಚಾರ ಸಂಕಿರಣ ಹಾಗೂ ತಾಲ್ಲೂಕು ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ಭಾನುವಾರ ಅರ್ಥಪೂರ್ಣವಾಗಿ ನಡೆಸಲಾಯಿತು.

- Advertisement -

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದಪ್ಪ ಹೊಟ್ಟಿ, ‘ಸಾಹಿತ್ಯವು ಸಮಾಜದ ಅಂತರಂಗವನ್ನು ಸ್ಪರ್ಶಿಸಬೇಕು ಹಾಗೂ ಇಂದಿನ ತಲೆಮಾರಿಗೆ ಮೌಲ್ಯಾಧಾರಿತ ಬದುಕಿನ ಪಾಠ ಕಲಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
1321068

ಕಾರ್ಯಕ್ರಮದಲ್ಲಿ ವಿಷಯ ಮಂಡನೆ ಮಾಡಿದ ಸಾಹಿತಿ ಗವಿಸಿದ್ದಪ್ಪ ಪಾಟೀಲ್, ‘ಚಂದ್ರಕಾಂತ ಕರದಳ್ಳಿ ಅವರ ಬದುಕು ಮತ್ತು ಬರಹಗಳನ್ನು ಸ್ಮರಿಸಿ, ಅವರು ಕಾಲಪ್ರಜ್ಞೆ ಹೊಂದಿದ ಶಿಸ್ತುಬದ್ಧ ಲೇಖಕರಾಗಿದ್ದು, ಪುಸ್ತಕಗಳ ಮೌಲ್ಯವನ್ನು ಅರಿತ ವೇಗದ ಬರವಣಿಗೆಯ ಮೂಲಕ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು. ಯಾದಗಿರಿ ಜಿಲ್ಲೆಯ ಕರದಳ್ಳಿ ಗ್ರಾಮದಲ್ಲಿ ಜನಿಸಿದ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಅಲ್ಲಿಯೇ ಪಡೆದು, ಜೀವನದ ಏರಿಳಿತಗಳನ್ನು ಎದುರಿಸಿ ಛಲದಿಂದ ಮುಂದುವರೆದವರು’ ಎಂದು ಹೇಳಿದರು.

‘ಗಾಂಧಿ ಚೌಕ್’ ಕವನದ ಮೂಲಕ ಸಾಹಿತ್ಯ ಲೋಕದಲ್ಲಿ ಗುರುತಿಸಿಕೊಂಡ ಕರದಳ್ಳಿ ಅವರು, ‘1983ರಲ್ಲಿ ಚಿಗರಹಳ್ಳಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಆರಂಭಿಸಿದರು. ಬಸವ ಸಾಂಸ್ಕೃತಿ ಮೌಲ್ಯಗಳು ಹಾಗೂ ಶಾಹಪುರದ ಸ್ಥಳೀಯ ಸಮಸ್ಯೆಗಳ ಕುರಿತು ಸಾಹಿತ್ಯ ರಚನೆಯ ಮೂಲಕ ಬೆಳಕು ಚೆಲ್ಲಿದರು. 2022ರಲ್ಲಿ ಅವರು ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದರು’ ಎಂದು ಹೇಳಿದರು.

ಅವರು ಮುಂದುವರೆದು ‘ ಕೇವಲ 23 ವರ್ಷಗಳ ಕಾಲಾವಧಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಕರದಳ್ಳಿ ಅವರನ್ನು ಮಕ್ಕಳ ಸಾಹಿತಿಯಾಗಿ ಗುರುತಿಸಲಾಗುತ್ತದೆ. ಅವರಿಗೆ ಜಿಲ್ಲಾ, ರಾಜ್ಯ, ರಾಷ್ಟ್ರ ಮಟ್ಟದ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಲಭಿಸಿವೆ’ ಎಂದು ತಿಳಿಸಿದರು.

ಆಶಯ ನುಡಿಗಳನ್ನು ನೀಡಿದ ಡಾ. ಜಯದೇವಿ ಗಾಯಕವಾಡ, ‘ಕಲ್ಯಾಣ ಕರ್ನಾಟಕದ ದಾಸ ಸಾಹಿತ್ಯ ಪರಂಪರೆಯ ಮಹತ್ವವನ್ನು ವಿವರಿಸಿದರು.
ಚನ್ನಣ್ಣ ವಾಲಿಕರ್, ಜಂಬಣ್ಣ ಅಮರಚಿಂತನ, ಗೀತಾ ನಾಗಭೂಷಣ, ಚಂದ್ರಶೇಖರ ಪಾಟೀಲ್, ಬಿಟಿ ಲಲಿತ ನಾಯಕ್ ಅವರ ಬರಹಗಳನ್ನು ಬಗ್ಗೆ ತಿಳಿಸುತ್ತಾ, ಕಾವ್ಯವು ಜನಸಾಮಾನ್ಯರ ಬದುಕಿಗೆ ತಲುಪಬೇಕು ಹಾಗೂ ಸಾಮಾಜಿಕ ಸಂವೇದನೆಯಿಂದ ಕೂಡಿರಬೇಕು ಎಂದು ಅಭಿಪ್ರಾಯಪಟ್ಟರು.
ಜಾತಿ ವ್ಯವಸ್ಥೆ ಸಂಪೂರ್ಣವಾಗಿ ನಿರ್ಮೂಲನೆ ಆಗಿಲ್ಲವೆಂದು ಬೆಸರ್ ವ್ಯಕ್ತಪಡಿಸಿದರು. ಬುದ್ಧ ಬಸವ ಅಂಬೇಡ್ಕರ್ ಅವರ ಸಮಾನತೆಯ ಸಮಾಜ ನಿರ್ಮಾಣದ ಕನಸು ನನಸಾಗಬೇಕು’ ಎಂದು ಹೇಳಿದರು.

1321059

ಕಾರ್ಯಕ್ರಮದಲ್ಲಿ ಹಿರಿಯ ದಲಿತ ಮುಖಂಡ ನೀಲಕಂಠ ಬಡಿಗೇರ್ ಡಾ ಜಯದೇವಿ ಗಾಯಕವಾಡ ಅವರ ಸಾಹಿತ್ಯವನ್ನು ಹಾಡಿನ ಮೂಲಕ ಪ್ರಸ್ತುತ ಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ರವೀಂದ್ರನಾಥ ಹೊಸ್ಮನಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಸಿದ್ಧಲಿಂಗಣ್ಣ ಆನೇಗುಂದಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ವಿವಿಧ ಗಣ್ಯರು ಹಾಗೂ ಸಾಹಿತರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಹಲವಾರು ಕವಿಗಳು ಕಾವ್ಯ ವಾಚನ ಮಾಡಿದರು.

1321088

ಇದನ್ನು ಓದಿದ್ದೀರಾ? ಯಾದಗಿರಿ | ಕಾಟಾಚಾರ ರಸ್ತೆ ದುರಸ್ತಿ; ದಸಂಸ ಆಕ್ರೋಶ

ಕಾರ್ಯಕ್ರಮವನ್ನು ಪ್ರಕಾಶ ದೊರೆ ಸ್ವಾಗತಿಸಿದರು. ಸುರೇಶ್‌ಬಾಬು ಕೆ. ಅರಣಿ ಹಾಗೂ ಚಂದ್ರಕಲಾ ನಿರೂಪಿಸಿದರು. ನಿಂಗಣ್ಣ ತಿಪ್ಪನಹಳ್ಳಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...