ಯಾದಗಿರಿ | ಅನವಾರ ಗ್ರಾಮದಲ್ಲಿ ಸಾರಿಗೆ ಬಸ್ ನಿಲುಗಡೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಮನವಿ

Date:

ಯಾದಗಿರಿ ಜಿಲ್ಲೆಯ ಅನವಾರ ಗ್ರಾಮದಲ್ಲಿ ಸಾರಿಗೆ ಬಸ್ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಜಿಲ್ಲಾ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿಯ ಅಧ್ಯಕ್ಷ ಹತ್ತಿಗೂಡೂರ್ ಶರಣರೆಡ್ಡಿ ಮಾತನಾಡಿ, ‘ಸುರಪುರ-ಯಾದಗಿರಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಅನವಾರ ಗ್ರಾಮದಲ್ಲಿ ಸಾರಿಗೆ ಬಸ್‌ಗಳು ನಿಲುಗಡೆ ಆಗದೇ ಇರುವುದರಿಂದ ವಿದ್ಯಾರ್ಥಿಗಳು ಪ್ರತಿದಿನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು. ಈ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

‘ಅನವಾರ ಗ್ರಾಮದಿಂದ ಹತ್ತಿಗೂಡೂರ್ ಸರ್ಕಾರಿ ಪ್ರೌಢಶಾಲೆ, ಶಹಾಪುರ ಕಾಲೇಜು ಹಾಗೂ ಯಾದಗಿರಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಬಸ್ ನಿಲುಗಡೆ ಇಲ್ಲದ ಕಾರಣ ಬಹಳಷ್ಟು ದೂರ ನಡೆದುಕೊಂಡು ಹೋಗುವ ಅನಿವಾರ್ಯತೆಗೆ ಒಳಗಾಗಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಸಮಯ, ಸುರಕ್ಷತೆ ಹಾಗೂ ವಿದ್ಯಾಭ್ಯಾಸದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ’ ಎಂದು ಅವರು ಹೇಳಿದರು.

‘ತಕ್ಷಣವೇ ಅನವಾರ ಗ್ರಾಮದಲ್ಲಿ ಸಾರಿಗೆ ಬಸ್ ನಿಲುಗಡೆ ವ್ಯವಸ್ಥೆಯನ್ನು ಕಲ್ಪಿಸಬೇಕು. ಇಲ್ಲದಿದ್ದಲ್ಲಿ ಅನವಾರ ಗ್ರಾಮದ ವಿದ್ಯಾರ್ಥಿಗಳು ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ರಸ್ತೆ ತಡೆ ಸೇರಿದಂತೆ ತೀವ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಲಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಎಐಡಿವೈಒ ಸಹಿ ಸಂಗ್ರಹ ಅಭಿಯಾನ

ಈ ಸಂದರ್ಭದಲ್ಲಿ ಸಿದ್ದಪ್ಪ ಹೊಸ್ಮನಿ ಹಾಗೂ ವಿದ್ಯಾರ್ಥಿಗಳಾದ ಆಕಾಶ ದೊಡ್ಮನಿ, ರಾಮ ಪೂಜಾರಿ, ಸಾಬು ಗುತ್ತೇದಾರ್, ರಾಜು ಗುತ್ತೇದಾರ್, ಜೈ ಭೀಮ್ ಹೊಸಮನಿ, ಬೀರಲಿಂಗ ಪೂಜಾರಿ, ಅಯ್ಯಾಳಪ್ಪ, ಸೌಂದರ್ಯ, ಯಶೋಧ, ಸಾನಿಯಾ, ಅನುಶಿಯ, ಸವಿತಾ, ಅಕ್ಷತಾ, ಶ್ರೀದೇವಿ, ಮಹಾಲಿಂಗಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸರ್ಕಾರಿ ನಿವೇಶನದಲ್ಲಿ ದೇವಸ್ಥಾನ ನಿರ್ಮಾಣ ಆರೋಪ: ತೆರವಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯ ಸರ್ಕಾರಿ ಉದ್ದೇಶಕ್ಕಾಗಿ ಮೀಸಲಿಟ್ಟ ಸಿ.ಎ....

ಯಾದಗಿರಿ | ಮಕ್ಕಳ ಸುರಕ್ಷತೆ ಸಮಾಜದ ಹೊಣೆ: ಪೋಕ್ಸೋ, ಬಾಲ್ಯವಿವಾಹ ತಡೆಗೆ ಕಾನೂನು ಅರಿವು ಅಭಿಯಾನ

ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸುರಕ್ಷಿತ...

ಯಾದಗಿರಿ | ಚಾಕೋಲೆಟ್ ಆಮಿಷವೊಡ್ಡಿ ಅಪ್ರಾಪ್ತತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಪ್ರಕರಣ ದಾಖಲು

ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 12 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದು ಲೈಂಗಿಕ...