ಯಾದಗಿರಿ | ಟಿ ಶಶಿಧರ್ ಭೋಧಿಮಂಡಲ ಕಲಾ ಮತ್ತು ಶಿಕ್ಷಣ ಸಂಸ್ಥೆ ವತಿಯಿಂದ ಸಂಗೀತ ಕಲಾವಿದರ ಸಂಭ್ರಮ

Date:

“ಕಲಾವಿದರ ಸಂಗೀತ ಉಳಿವಿಗಾಗಿ” ಸಂಗೀತ ಕಲಾವಿದರ ಸಂಭ್ರಮ ಕಾರ್ಯಕ್ರಮವನ್ನು ಟಿ ಶಶಿಧರ್ ಭೋಧಿಮಂಡಲ ಕಲಾ ಮತ್ತು ಶಿಕ್ಷಣ ಸಂಸ್ಥೆ ವತಿಯಿಂದ ಸೋಮವಾರ ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದ ಕಿತ್ತುರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಹಮ್ಮಿಕೊಳ್ಳಲಾಯಿತು.

- Advertisement -

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ಅವರು ಮಾತನಾಡಿ, ‘ದಿವಂಗತ ಟಿ ಶಶಿಧರ್ ಅವರು ಅತ್ಯಂತ ಒಳ್ಳೆಯ ವ್ಯಕ್ತಿಯಾಗಿದ್ದರು. ಅವರ ಸವಿ ನೆನಪಿಗಾಗಿ ಅವರ ಅಳಿಯರಾದ ರಂಗನಾಥ ಬಾಗಲಿ ಅವರು ಶಶಿಧರ್ ಅವರ ಹೆಸರಿನಲ್ಲಿ ಸಂಸ್ಥೆಯನ್ನು ಸ್ಥಾಪಿಸಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಸಂತಸದ ವಿಷಯ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

‘ಈ ಸಂದರ್ಭದಲ್ಲಿ ಶಶಿಧರ್ ಅವರು ನಮ್ಮ ನಡುವೆ ಇರಬೇಕಿತ್ತು. ಅವರು ಬದುಕಿದ್ದರೆ ಸರ್ಕಾರದಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಗಿಟ್ಟಿಸಿಕೊಳ್ಳುತ್ತಿದ್ದರು. ಅವರ ವ್ಯಕ್ತಿತ್ವದ ಗತ್ತು, ಗಮ್ಮತ್ತು ಬೇರೆಯದೇ ಇತ್ತು ಎಂದು ಭಾವುಕರಾಗಿ ನುಡಿದರು. ಜೊತೆಗೆ ಅವರ ಹೆಸರನ್ನು ಉಳಿಸಬೇಕಾದರೆ ಉತ್ತಮ ಸಮಾಜ ಸೇವೆ ಮಾಡಬೇಕು’ ಎಂದು ರಂಗನಾಥ ಬಾಗಲಿ ಅವರಿಗೆ ಕಿವಿಮಾತು ಹೇಳಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟಿ ಶಶಿಧರ್ ಭೋಧಿಮಂಡಲ ಕಲಾ ಮತ್ತು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಂಗನಾಥ ಬಾಗಲಿ ಅವರು ವಹಿಸಿದ್ದರು. ಸುಗಮ ಸಂಗೀತ ಹಾಗೂ ವಚನ ಗಾಯನವನ್ನು ಮರೆಪ್ಪ ಶಿರವಾಳ, ಶರಣು ಕೋಲಕುಂದ, ತತ್ವಪದವನ್ನು ಸಾಬಯ್ಯ ದೇಸಾಯಿ, ಭರತನಾಟ್ಯವನ್ನು ಸಾನ್ವಿ, ಭಜನೆ ಗೀತೆಗಳನ್ನು ಶರಣಮ್ಮ ದೊಡ್ಡಮನಿ, ಜಾನಪದ ಗಾಯನವನ್ನು ತಿರುಪತಿ ವೈದ್ಯ ಹಾಗೂ ಮಹೇಶ್ ಶಿರವಾಳ ಸೇರಿದಂತೆ ಇನ್ನಿತರ ಕಲಾವಿದರು ಪ್ರಸ್ತುತಪಡಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಎಐಕೆಕೆಎಂಎಸ್ ಪ್ರತಿಭಟನೆ

ಕಾರ್ಯಕ್ರಮದ ನಿರೂಪಣೆಯನ್ನು ವೀರೇಶ ಕೊಂಕಲ್ ಹಾಗೂ ಮಲ್ಲಿಕಾರ್ಜುನ್ ಶಹಾಪುರ ಅವರು ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಖ್ಯಾತ ಹಾಸ್ಯ ಕಲಾವಿದರಾದ ಬಸವರಾಜ ಮಹಾಮಾನಿ, ಕಾಲಿಂಗಪ್ಪ ಹೊಸಮನಿ, ಕೃಷ್ಣಮೂರ್ತಿ ಕುಲಕರ್ಣಿ, ಗೋಪಾಲ ಗಿರೆಪ್ಪನೋರ್, ಶರಣುಕುಮಾರ್ ವಠಾರ, ವೀರೇಶ, ವೆಂಕಟೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...