ಯಾದಗಿರಿ | ಬಟ್ಟೆ ತೊಳೆಯಲು ಹೋದ ಮೂವರು ನೀರಿನಲ್ಲಿ ಮುಳುಗಿ ಸಾವು

Date:

ಮರಮ್ ಕ್ವಾರಿಯ ಗುಂಡಿಯಲ್ಲಿ ಬಟ್ಟೆ ತೊಳೆಯಲು ಹೋದ ಮೂವರು ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬಸವನಗರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

- Advertisement -

ಬಸವನಗರ ಗ್ರಾಮದ ಗುಂಡಮ್ಮ (35), ಸುಜಾತಾ (9) ಶಿವಲೀಲಾ (ಶಿವಕಾಂತಮ್ಮ) (10) ಮೃತರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಗ್ರಾಮದಲ್ಲಿ ಸಮರ್ಪಕವಾಗಿ ನೀರು ಬಾರದ ಕಾರಣ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಒಟ್ಟೆ ತೊಳೆಯಲೆಂದು ಗುಂಡಮ್ಮ, ಸುಜಾತಾ ಹಾಗೂ ಶಿವಲೀಲಾ ಕ್ವಾರಿ ಗುಂಡಿಗೆ ಹೋಗಿದ್ದಾರೆ. ಬಟ್ಟೆ ತೊಳೆಯುವಾಗ ಸುಜಾತಾ ಮತ್ತು ಶಿವಲೀಲಾ ಕಾಲುಜಾರಿ ಗುಂಡಿಯಲ್ಲಿ ಬಿದ್ದಿದ್ದಾರೆ. ಗುಂಡಮ್ಮ ನೀರಿಗೆ ಜಿಗಿದು ಇಬ್ಬರು ಬಾಲಕಿಯರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಸಾಧ್ಯವಾಗದೇ ಮೂವರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಕುರಿತು ವಡಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಬಲಗೊಳ್ಳುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌, ಪುಟಿದೇಳಲು ಸಕಾಲ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ...

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ...