ಯಾದಗಿರಿ | ಮೋದಿ ಸೆಲ್ಫಿ ಪಾಯಿಂಟ್ ಸ್ಥಾಪನೆಗೆ ಯುಜಿಸಿ ಸೂಚನೆ; ಎಐಡಿಎಸ್ಒ ಆಕ್ಷೇಪ

Date:

ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಲ್ಫಿ ಪಾಯಿಂಟ್ ಸ್ಥಾಪಿಸಲು ಯುಜಿಸಿಯು ಸೂಚನೆ ನೀಡಿದ್ದು, ಈ ಸೂಚನೆ ಖಂಡನೀಯ ಎಂದು ಎಐಡಿಎಸ್ಒ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ ಕೆ ಆಕ್ಷೇಪ ವ್ಯಕ್ತಪಡಿಸಿದರು.

- Advertisement -

ಯಾದಗಿರಿ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿದ ಇವರು, “ಆಡಳಿತ ಪಕ್ಷದ ನಾಯಕರನ್ನು ಬಿಂಬಿಸುವ ಯುಜಿಸಿಯ ಈ ಸೂಚನೆಯು ಅಪ್ರಜಾತಾಂತ್ರಿಕವಾಗಿದೆ. ದೇಶದ ಶೈಕ್ಷಣಿಕ ವ್ಯವಸ್ಥೆಯು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದರ ಬದಲು, ವ್ಯಕ್ತಿಪೂಜೆ, ಒಂದು ವಿಚಾರಧಾರೆ, ಸೇರಿದಂತೆ ಏಕಮುಖ ಚಿಂತನೆಯಲ್ಲಿ ದೇಶದ ವಿದ್ಯಾರ್ಥಿ ಯುವಜನತೆಯನ್ನು ಮುಳುಗಿಸುವ ಅಪಾಯಕಾರಿ ಫ್ಯಾಸಿಸಂ ನಡೆ ಇದಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸೆಲ್ಫಿ ಪಾಯಿಂಟ್‌ಗಳ ಬದಲಾಗಿ, ಶಿಕ್ಷಣದ ವ್ಯಾಪಾರೀಕರಣ, ಖಾಸಗೀಕರಣ, ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಮುಚ್ಚುವಿಕೆ ಸೇರಿದಂತೆ ದೇಶದ ಶಿಕ್ಷಣ ವ್ಯವಸ್ಥೆಯು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯುಜಿಸಿಯು ಕಾರ್ಯಪ್ರವೃತ್ತವಾಗಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ಸೌಲಭ್ಯ ಕಲ್ಪಿಸಲು ಮಹಿಳಾ ವಿವಿ ವಿಫಲ; ಡಿವಿಪಿ ಆರೋಪ

“ಯಾವುದೋ ಒಬ್ಬ ರಾಜಕೀಯ ನಾಯಕರನ್ನು ಬಿಂಬಿಸುವ ಬದಲಿಗೆ ದೇಶದ ಶಿಕ್ಷಣದ ಏಳಿಗೆಗೆ ಶ್ರಮಿಸಿದ ನವೋದಯ ಹರಿಕಾರ ಈಶ್ವರ ಚಂದ್ರ ವಿದ್ಯಾಸಾಗರ್, ರಾಜಾರಾಮ್ ಮೋಹನ ರಾಯ್, ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಹಾಗೂ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರಬೋಸ್ ಮುಂತಾದವರ ಚಿಂತನೆಗಳನ್ನು ವಿದ್ಯಾರ್ಥಿಗಳ ನಡುವೆ ಹರಡುವ ಪ್ರಯತ್ನ ಮಾಡಬೇಕು” ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...