ಯಾದಗಿರಿ | ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಸ್ವಚ್ಛತೆ; ಸ್ವಚ್ಛತೆಗೆ ಕರ್ನಾಟಕ ಸೇನೆ ಆಗ್ರಹ

Date:

ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರವನ್ನು ಕೂಡಲೇ ಸ್ವಚ್ಛಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಸೇನೆ ಮುಖಂಡರು ಮಂಗಳವಾರ ವೈದ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಸಮುದಾಯ ಆರೋಗ್ಯ ಕೇಂದ್ರದಿಂದ ಹೊರಬರುವ ಕಲುಷಿತ ನೀರು ಯಾವುದೇ ಸಂಸ್ಕರಣೆ ಇಲ್ಲದೆ ಸಾರ್ವಜನಿಕ ಚರಂಡಿಗಳಿಗೆ ಹರಿಯುತ್ತಿದ್ದು, ಇದರಿಂದ ಸ್ಥಳೀಯ ನಿವಾಸಿಗಳ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಕರ್ನಾಟಕ ಸೇನೆಯ ಕೆಂಭಾವಿ ಹೋಬಳಿ ಕಾರ್ಮಿಕ ಘಟಕ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮನವಿ ಸಲ್ಲಿಸಿ ಕರ್ನಾಟಕ ಸೇನೆಯ ಅಧ್ಯಕ್ಷ ಗುರುರಾಜ ಎಸ್. ಅಂಗಡಿ ಮಾತನಾಡಿ, ‘ಕೆಂಭಾವಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವ್ಯಾಪಕ ಅಸ್ವಚ್ಛತೆ, ಆಸ್ಪತ್ರೆಯಿಂದ ಹೊರಬರುವ ಕಲುಷಿತ ನೀರು ಹಾಗೂ ಮಲ–ಮೂತ್ರ ವಿಸರ್ಜನೆಯು ನೇರವಾಗಿ ಸಾರ್ವಜನಿಕ ಚರಂಡಿಗಳಿಗೆ ಸೇರುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದೆ. ಈ ಸಮಸ್ಯೆಯನ್ನು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ವಚ್ಛತೆಯ ಜವಾಬ್ದಾರಿ ಹೊತ್ತಿರುವ ಗುತ್ತಿಗೆದಾರರು ಹಾಗೂ ಸಿಬ್ಬಂದಿಗಳ ನಿಷ್ಕಾಳಜಿಯಿಂದ ಆಸ್ಪತ್ರೆಯ ಸುತ್ತಮುತ್ತಲಿನ ಪರಿಸರ ದಿನೇದಿನೇ ಅಪಾಯಕಾರಿಯಾಗಿ ಮಾರ್ಪಡುತ್ತಿದೆ ಎಂದು ಆರೋಪಿಸಿದ ಅವರು, ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಬೇಕು. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿಗಳು ಹಾಗೂ ವಿಫಲ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಆಸ್ಪತ್ರೆಯ ಕಲುಷಿತ ನೀರು ಸುರಕ್ಷಿತವಾಗಿ ಹರಿದು ಹೋಗಲು ಶಾಶ್ವತ ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಸರ್ಕಾರಿ ಶಾಲೆಯ ಶಿಕ್ಷಕಿಯಿಂದ ಹಲ್ಲೆ ಆರೋಪ: ವಿದ್ಯಾರ್ಥಿಗೆ ಗಾಯ

ಒಂದು ವೇಳೆ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ಸಾರ್ವಜನಿಕರೊಂದಿಗೆ ಸೇರಿ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ತೀವ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನಾರಾಯಣ ಸ್ಯೂರವಂಶಿ, ಕೃಷ್ಣ ಮಾಸ್ಟರ್, ಸೋಮನಾಥ ಗೊಬ್ಯಾಡ್ ಸೇರಿದಂತೆ ಕರ್ನಾಟಕ ಸೇನೆಯ ಇತರ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...