ಯಾದಗಿರಿ | ಉದ್ಯೋಗ ಖಾತ್ರಿ ಕೆಲಸದ ಸ್ಥಳದಲ್ಲಿ ಮಹಿಳೆ ಸಾವು: ಪರಿಹಾರಕ್ಕೆ ಆಗ್ರಹ

Date:

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದ ಮಹೇಶ್ವರಿ (38) ಎಂಬ ಮಹಿಳೆ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿದ್ದ ಕೆಲಸದ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಅತ್ಯಂತ ದುಃಖಕರವಾಗಿದೆ. ಮೃತ ಮಹೇಶ್ವರಿ ಅವರು ಮೂವರು ಮಕ್ಕಳನ್ನು ಹೊಂದಿದ್ದು, ತಾಯಿಯನ್ನು ಕಳೆದುಕೊಂಡಿರುವ ಮಕ್ಕಳ ಭವಿಷ್ಯ ಈಗ ಅತಂತ್ರವಾಗಿದೆ. ಈ ಕುಟುಂಬಕ್ಕೆ ಸರ್ಕಾರ ಹೆಚ್ಚಿನ ಪರಿಹಾರ ನೀಡುವುದರ ಜೊತೆಗೆ, ಮೂರು ಮಕ್ಕಳ ಶಿಕ್ಷಣ ಮತ್ತು ಜೀವನ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ನಾಗೇಶ್ ಗದ್ದಿಗಿ ಆಗ್ರಹಿಸಿದ್ದಾರೆ.

ತಾಯಿಯನ್ನು ಕಳೆದುಕೊಂಡ ಮೂವರು ಮಕ್ಕಳಿಗೆ ಸರ್ಕಾರ ಆಸರೆಯಾಗಲಿ!

“ಮಹೇಶ್ವರಿ ಅವರು ಕೂಲಿ ಕೆಲಸದ ಮೂಲಕ ಕುಟುಂಬವನ್ನು ನಿರ್ವಹಿಸುತ್ತಿದ್ದರು. ಇದೀಗ ಅವರ ಅಕಾಲಿಕ ಸಾವಿನಿಂದ ಮೂವರು ಮಕ್ಕಳು ತಾಯಿಯ ಆಸರೆಯನ್ನು ಕಳೆದುಕೊಂಡಿದ್ದಾರೆ. ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ವಿಶೇಷ ಆರ್ಥಿಕ ನೆರವು ನೀಡಬೇಕು. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ಉಚಿತ ಶಿಕ್ಷಣ, ಪೋಷಣೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಮೃತ ಕುಟುಂಬಕ್ಕೆ ಕೇವಲ ಸಾಂತ್ವನ ಹೇಳುವುದಷ್ಟೇ ಅಲ್ಲದೆ, ಸೂಕ್ತ ಪರಿಹಾರ ನೀಡಿ ಮಕ್ಕಳ ಬದುಕಿಗೆ ಭದ್ರತೆ ಒದಗಿಸಬೇಕು” ಎಂದು ಒತ್ತಾಯಿಸಿದರು.

ಉದ್ಯೋಗ ಖಾತ್ರಿ ಕೆಲಸದ ಸ್ಥಳದಲ್ಲಿ ಕಾರ್ಮಿಕರಿಗೆ ಮೂಲಭೂತ ಸೌಲಭ್ಯ ಕಡ್ಡಾಯ!

“ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರಿಗೆ ಸರ್ಕಾರದ ನಿಯಮಗಳ ಪ್ರಕಾರ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ವಿಶ್ರಾಂತಿ ಸ್ಥಳ ಹಾಗೂ ಪ್ರಥಮ ಚಿಕಿತ್ಸೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಡ್ಡಾಯವಾಗಿ ಕಲ್ಪಿಸಬೇಕು. ಮಹಿಳಾ ಕಾರ್ಮಿಕರು ಸೇರಿದಂತೆ ಎಲ್ಲ ಕಾರ್ಮಿಕರ ಸುರಕ್ಷತೆಗೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು. ಕೆಲಸದ ಸ್ಥಳದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ತಾಕೀತು ಮಾಡಿದರು.

ಮಹೇಶ್ವರಿ ಅವರ ಸಾವಿನ ಕುರಿತು ಸೂಕ್ತ ತನಿಖೆ ನಡೆಸಿ, ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಮೃತ ಮಹಿಳೆಯ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಮಂಜೂರು ಮಾಡಿ, ಮೂವರು ಮಕ್ಕಳ ಭವಿಷ್ಯಕ್ಕೆ ಸರ್ಕಾರ ನೆರವಾಗಬೇಕು. ಇಂತಹ ದುರ್ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ನಾಗೇಶ್ ಗದ್ದಿಗಿ ಅವರು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳು ಪೋಲಿಸ್ ಇಲಾಖೆ ಅಧಿಕಾರಿಗಳು ಮತ್ತು ನರಸಿಂಹಲು ಗಂಗನೋಳ ಯುವ ಮುಖಂಡ ಬಸವಂತರೆಡ್ಡಿ ಚೆಪೆಟ್ಲ, ಶರಣು, ಮಹೇಶ್ ಸೇರಿದಂತೆ ಕಾಕಲವಾರ ಮತ್ತು ಚೆಪೆಟ್ಲಾ ಗ್ರಾಮದ ಹಿರಿಯ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ |ನ. 26ರಂದು ಸಂವಿಧಾನ ದಿನಾಚರಣೆ : ಜನರ ಧ್ವನಿ ಕಾರ್ಯಕ್ರಮ

ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಚಾಲನಾ ಸಮಿತಿ ಮತ್ತು...

ಹಾವೇರಿ | ಶಾಸಕರಿಂದ ವರ್ದಿ ಗ್ರಾಮದ ಸರ್ಕಾರಿ ಶಾಲೆಗೆ ₹2.8 ಲಕ್ಷದ ಸಾಮಗ್ರಿ ವಿತರಣೆ

ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಶ್ರೀನಿವಾಸ ಮಾನೆ ಅವರ...

ಪಶ್ಚಿಮ ಬಂಗಾಳ | ಮತಪಟ್ಟಿಯಲ್ಲಿ ತಂದೆ ಹೆಸರಿಲ್ಲವೆಂದು ಹಸುಗೂಸಿಗೆ ಜನನ ಪ್ರಮಾಣಪತ್ರ ನಿರಾಕರಣೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ತಂದೆಯ ಹೆಸರು...

ಮಂಗಳೂರು l ಮನೆ ಮನೆ ಬ್ಯಾರಿ ಕವಿಗೋಷ್ಠಿ

ರಾಷ್ಟ್ರ ಮತ್ತು ರಾಜ್ಯದ ಹಲವು ಭಾಷೆಗಳಿಗೆ ಬ್ಯಾರಿ ಸಾಹಿತ್ಯ ಕೃತಿಗಳು ಭಾಷಾಂತರವಾಗುವ...