ಯಾದಗಿರಿ | ಮಾರಾಕಾಸ್ತ್ರಗಳಿಂದ ಇರಿದು ಯುವತಿ ಕೊಲೆ; ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ

Date:

ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿರುವ ಘಟನೆ ಯಾದಗಿರಿ ತಾಲೂಕಿನಲ್ಲಿ ನಡೆದಿದೆ. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಅತ್ಯಾಚಾರ ನಡೆದಿದೆಯೇ ಇಲ್ಲವೇ ಎಂಬುದು ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾದಗಿರಿ ತಾಲೂಕು ಕಂಚಗಾರಹಳ್ಳಿ ಕ್ರಾಸ್ ಸಮೀಪ ಈ ಕೊಲೆ ನಡೆದಿದ್ದು, ಸವಿತಾ ರಾಠೋಡ್ (35) ಕೊಲೆಯಾದ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಯಾದಗಿರಿ ತಾಲೂಕಿನ ಮುದ್ನಾಳ್ ತಾಂಡಾದ ನಿವಾಸಿಯಾದ ಯುವತಿಯ ಕುತ್ತಿಗೆ ಹಾಗೂ ಕಿವಿಗೆ ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹೆತ್ತವರು ಇಲ್ಲದ ಕಾರಣ ವಿಕಲಚೇತನ ಸಹೋದರನ ಜೊತೆ ವಾಸವಾಗಿದ್ದ ಸವಿತಾಗೆ ನಾಲ್ಕೈದು ದಿನಗಳ ಹಿಂದೆಯಷ್ಟೆ ನಿಶ್ಚಿತಾರ್ಥವಾಗಿತ್ತು. ಎಂದಿನಂತೆ ಶನಿವಾರ ಕೂಡ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗಂಭೀರ ಗಾಯಗೊಂಡಿದ್ದ ಸವಿತಾ ಅವರನ್ನು ಗ್ರಾಮಸ್ಥರು ಕಲಬುರಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಸೋಮವಾರ ಮುಂಜಾನೆ ಆಕೆ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ಅಬ್ಬಿ ಫಾಲ್ಸ್‌ಗೆ ಬಂದಾಕೆ ಬೆಂಗಳೂರಿನಲ್ಲಿ ಪತ್ತೆ

ಸಚಿನ್ ಎಂಬ ಯುವಕ ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದು, ಆತನನ್ನು ಬಂಧಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಯಾದಗಿರಿ ಗ್ರಾಮೀಣ ಠಾಣೆ ಪಿಎಸ್‌ಐ ಅವರನ್ನು ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ್ದು, “ಅತ್ಯಾಚಾರ ಎಸಗಿರುವ ಕುರಿತು ಯಾವುದೇ ನಿಖರ ಮಾಹಿತಿ ಇಲ್ಲ.ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕವೇ ಅತ್ಯಾಚಾರ ನಡೆದಿರುವ ಕುರಿತು ಸ್ಪಷ್ಟವಾಗುತ್ತದೆ. ಸದ್ಯ ಆರೋಪಿಯ ಬಂಧನವಾಗಿದೆ. ಯಾವ ವಿಚಾರಕ್ಕೆ ಕೊಲೆ ನಡೆದಿದೆ ಎಂಬುದು ತನಿಖೆ ಬಳಿಕ ಗೊತ್ತಾಗುತ್ತದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯಿಂದ ಗ್ರಾಜುಯೇಷನ್ ಡೇ ಕಾರ್ಯಕ್ರಮ

ಕಲಬುರಗಿ ಜಿಲ್ಲೆ ಶಹಾಪುರ ತಾಲೂಕಿನ ಹೋತಪೇಟೆ ಗ್ರಾಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ...

ಯಾದಗಿರಿ | ಸಂವಿಧಾನ, ಪ್ರಜಾಪ್ರಭುತ್ವ ಉಳುವಿಗಾಗಿ ಕಾಂಗ್ರೆಸ್‌ಗೆ ಬೆಂಬಲ; ದಸಂಸ ತೀರ್ಮಾನ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳುವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ...

ಯಾದಗಿರಿ | ಅಂಬೇಡ್ಕ‌ರ್ ಜಯಂತಿ ಅಂಗವಾಗಿ ಸಾಮೂಹಿಕ ವಿವಾಹ; ನವಜೀವನಕ್ಕೆ ಕಾಲಿಟ್ಟ 25 ಜೋಡಿ

ಸನಾತನ ಪರಂಪರೆಯ ವಿವಾಹಗಳು ಅಸ್ಪೃಶ್ಯತೆಯಿಂದ ಕೂಡಿವೆ. ಮೂಢನಂಬಿಕೆ, ಅಂಧಶ್ರದ್ದೆ ಗಾಢವಾಗಿ ಬೇರೂರಿರುತ್ತದೆ....

ಕಲಬುರಗಿ | ಎದೆಯ ಮೇಲೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್‌ ಖರ್ಗೆ ಟ್ಯಾಟೂ

ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಅಭಿಮಾನ ತೋರಿಸಿಕೊಳ್ಳಲು ಅಭಿಮಾನಿಗಳು ನಾನಾ...