ಯಾದಗಿರಿ | ಅಕ್ರಮ ಮರಳು ಸಾಗಣೆ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ; 7 ವಾಹನ ವಶ, ₹2.78 ಲಕ್ಷ ದಂಡ

Date:

ಸುರಪುರ ಹಾಗೂ ಶಹಾಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಅನಧಿಕೃತ ಹಾಗೂ ಅಧಿಕ ಭಾರದ ಮರಳು ಸಾಗಣೆ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ ನೇತೃತ್ವದಲ್ಲಿ ಕಠಿಣ ಕಾರ್ಯಾಚರಣೆ ನಡೆಸಲಾಗಿದ್ದು, ಮರಳು ತುಂಬಿದ 7 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಭೂವಿಜ್ಞಾನಿ ವೀರೇಶ ಶಾಂತಪ್ಪ ತಿಳಿಸಿದ್ದಾರೆ.

- Advertisement -

ಜಿಲ್ಲಾ ಮರಳು ನಿಯಂತ್ರಣ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರ ಸೂಚನೆಯಂತೆ ಈ ದಾಳಿ ನಡೆಸಲಾಗಿದೆ. ಸುರಪುರ, ಶಹಾಪುರ ತಾಲ್ಲೂಕುಗಳಲ್ಲಿ ಅನಧಿಕೃತ ಹಾಗೂ ಅಧಿಕ ಭಾರದ ಮರಳು ಸಾಗಣೆ ನಡೆಯುತ್ತಿದೆ ಎಂಬ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ರಾತ್ರಿ ಗಸ್ತು ನಡೆಸಿ ವಾಹನಗಳನ್ನು ಪರಿಶೀಲಿಸಿದ ಪರಿಣಾಮ 7 ಮರಳು ತುಂಬಿದ ವಾಹನಗಳನ್ನು ವಶಕ್ಕೆ ಪಡೆದು ಒಟ್ಟು ₹2.78 ಲಕ್ಷ ದಂಡ ವಿಧಿಸಲಾಗಿದೆ. ಜೊತೆಗೆ, ಸಂಬಂಧಿಸಿದ ವಾಹನಗಳ ನೋಂದಣಿಯನ್ನು ರದ್ದುಪಡಿಸುವಂತೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಕಂಠಪೂರ್ತಿ ಮದ್ಯ ಕುಡಿಸಿ ಮುಖ್ಯ ಕಾಲುವೆಗೆ ತಳ್ಳಿ ಕೊಲೆ; ಪತ್ನಿ ದೂರು

ಜಿಲ್ಲೆಯಲ್ಲಿ ಅನಧಿಕೃತ ಹಾಗೂ ಅಧಿಕ ಭಾರದ ಮರಳು ಸೇರಿದಂತೆ ಇತರೆ ಉಪಖನಿಜಗಳ ಸಾಗಣೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮರಳು ನಿಯಂತ್ರಣ ಸಮಿತಿ ಸದಸ್ಯರನ್ನೊಳಗೊಂಡ ತಂಡಗಳನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ವಾಹನ ಪರಿಶೀಲನೆ ಹಾಗೂ ಕಠಿಣ ಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...

ಯಾದಗಿರಿ | ಪೌಷ್ಟಿಕ ಆಹಾರದಿಂದ ಮಕ್ಕಳ ಆರೋಗ್ಯಕರ ಬೆಳವಣಿಗೆ: ಮಹಾದೇವಮ್ಮ ಕುರ್ಕುಂದಿ

ಮಕ್ಕಳ ಆರೋಗ್ಯಕರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕ ಮತ್ತು ಸಮತೋಲಿತ...