ಮಂಗಳೂರು | ಯಕ್ಷಗಾನ ಕಲಾವಿದರಿಗೆ ಆರ್ಥಿಕ ರಕ್ಷಣೆ ಬೇಕು : ದಯಾನಂದ ಪೈ

Date:

ಯಕ್ಷಗಾನ ಹಲವು ಕಲೆಗಳಿಂದ ಪೋಷಿತಗೊಂಡು ರೂಪುಗೊಂಡ ಶ್ರೇಷ್ಠವಾದ ಸಂಪದ್ಭರಿತ ಕಲೆಯಾದರೂ ಕಲಾವಿದರ ಬದುಕು ಮಾತ್ರ ಕಷ್ಟದಲ್ಲಿಯೇ ಇದೆ. ಬಹಳಷ್ಟು ಕಲಾವಿದರಿಗೆ ನಾನು ಮಾಸಾಶನ ಕೊಡುತ್ತಾ ಬಂದಿದ್ದೇನೆ. ಸರಕಾರ ವಿಸ್ತೃತ ಯೋಜನೆಯನ್ನು ಕಲಾವಿದರಿಗೆ ಆರ್ಥಿಕ ರಕ್ಷಣೆ ನೀಡಬೇಕು. ಆಗ ಕಲಾಸೇವೆಯನ್ನು ಗೌರವಿಸಿದಂತಾಗುತ್ತದೆ ಹಣ ಸಂಪಾದನೆ ಮಾಡುತ್ತಾ ಹೋಗುವುದು ಶ್ರೀಮಂತಿಕೆ ಅಲ್ಲ. ನಾನಂತೂ ಜನರಿಗೆ ಸಮಾಜಕ್ಕೆ ನಮ್ಮಿಂದಾದ ಸೇವೆ ಮಾಡುತ್ತೇನೆ. ದೇವರು ಕೊಟ್ಟಿದ್ದನ್ನು ಸಮಾಜಕ್ಕೆ ಕೊಡುತ್ತಾ ಬಂದಿದ್ದೇನೆ. ಹಾಗೆಯೇ ಇತರ ಕ್ಷೇತ್ರಗಳಿಗೂ ಅನುದಾನ ನೀಡುತ್ತಾ ಬಂದಿರುವುದು ಮನಸ್ಸಿಗೆ ಸಂತಸ ಕೊಟ್ಟಿದೆ ಎಂದು ಯಕ್ಷಗಾನ ಅಧ್ಯಯನ ಕೇಂದ್ರದ ಪ್ರಾಯೋಜಕರಾದ ಡಾ.ಪಿ. ದಯಾನಂದ ಪೈ ಅವರು ಹೇಳಿದರು.

- Advertisement -

ಅವರು ಶನಿವಾರ‌ ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ. ದಯಾನಂದ ಪೈ ಮತ್ತು ಶ್ರೀ‌ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಯಕ್ಷಗಾನ ರಂಗದ ಹಿರಿಯ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತ( ಅವರ ಅನುಪಸ್ಥಿತಿಯಲ್ಲಿ ಸಹೋದರ ಮಹಾಬಲ ಹೆಗಡೆ), ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಅವರಿಗೆ ಯಕ್ಷಮಂಗಳ ಪ್ರಶಸ್ತಿ ಹಾಗೂ ಕೃಷ್ಣಪ್ರಕಾಶ್ ಉಳಿತ್ತಾಯ ಅವರಿಗೆ ಕೃತಿ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಯಕ್ಷಗಾನ ನಮ್ಮ ನಾಡಿನ ವೈಶಿಷ್ಟ್ಯಪೂರ್ಣವಾದ ಕಲೆಯಾಗಿದೆ. ನನಗೆ ಮತ್ತು ಯಕ್ಷಗಾನ ನಡುವೆ ಅವಿನಾಭಾವ ಸಂಬಂಧವಿದೆ. ನನ್ನ ಬದುಕಿನುದ್ದಕ್ಕೂ ಮಂಗಳೂರಿನ ಹಿಂದಿನ ಸರಕಾರಿ ಕಾಲೇಜು ಹಳೆ ವಿದ್ಯಾರ್ಥಿಯಾಗಿದ್ದು ಮಂಗಳೂರು ಮಣ್ಣಿನ ಋಣ ಮರೆಯಲು ಯಾವತ್ತೂ ಸಾಧ್ಯವಿಲ್ಲ. ಸರಕಾರಿ ಕಾಲೇಜಿನಲ್ಲಿ ಸಿಕ್ಕಿದ ಆ ಶಿಕ್ಷಣ ನನ್ನ ಬದುಕನ್ನು ಸಮಗ್ರವಾಗಿ ರೂಪಿಸಿತು. ಮಂಗಳೂರು ವಿವಿಯ ಯಕ್ಷಗಾನ ಅಧ್ಯಯನ ಕೇಂದ್ರವು ಯಕ್ಷಗಾನ ಅಧ್ಯಯನಕ್ಕೆ ಪೂರಕವಾಗಿ ಉತ್ತಮ‌ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಸಂತಸ ತಂದಿದೆ ಎಂದರು.

ಅಧ್ಯಕ್ಷತೆ ವಹಿಸಿದ ವಿವಿಯ ಕುಲಪತಿ ಪ್ರೊ. ಪಿ. ಎಲ್. ಧರ್ಮ ಅವರು ಮಾತನಾಡಿ ಹಿಂದಿನ ಮಂಗಳೂರು ಸರಕಾರಿ ಕಾಲೇಜು ವಿಶ್ವವಿದ್ಯಾಲಯ ಕಾಲೇಜು ಆಗಿ ರೂಪು ಗೊಂಡ ಬಳಿಕ ಕಳೆದ ಕೆಲವು ವರ್ಷಗಳಿಂದ ಆಗುತ್ತಿರುವ ಪ್ರಮಾದಕ್ಕೆ ಕ್ಷಮೆ ಕೇಳುತ್ತಾ ಅದಕ್ಕೆ ಮತ್ತೆ ಗತ ವೈಭವ ಸಾರುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಹಾಗೆಯೇ ಮಂಗಳೂರು ವಿವಿಯು ಯಕ್ಷಗಾನದಲ್ಲಿ ಭರತನಾಟ್ಯ ಶೈಲಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ವಿಶೇಷ ಪರೀಕ್ಷೆಯನ್ನು ನಡೆಸಿ ಯಕ್ಷಗಾನಕ್ಕೆ ಒಂದು ಶೈಕ್ಷಣಿಕ ಆಯಾಮವನ್ನು ನೀಡಲು ಚಿಂತನೆಗಳು ನಡೆದಿವೆ ಎಂದರು.

ಹಾವೇರಿ ವಿವಿ ವಿಶ್ರಾಂತ ಕುಲಪತಿ ಪ್ರೊ. ಕೆ. ಚಿನ್ನಪ್ಪ ಗೌಡ ಪ್ರಶಸ್ತಿ ಪುರಸ್ಕೃತರ ಅಭಿನಂದನೆ ಭಾಷಣ ಮಾಡುತ್ತಾ ಮೂವರು ಪ್ರಶಸ್ತಿ ಪುರಸ್ಕೃತರು ಕೂಡಾ‌ ಯಕ್ಷಗಾನದ ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವ ಕಲಾವಿದರಾಗಿದ್ದಾರೆ. ಡಾ.ದಯಾನಂದ‌ ಪೈ ಅವರು ಕಲೆ,‌ಆರೋಗ್ಯ, ಶೈಕ್ಷಣಿಕ ಕ್ಷೇತ್ರಗಳಿಗೆ ಕೊಡುಗೆ ನೀಡಿದ ಹೃದಯ ಶ್ರೀಮಂತಿಕೆಯ ವ್ಯಕ್ತಿಯಾಗಿದ್ದಾರೆ ಎಂದರು.

ಸಮಾರಂಭದಲ್ಲಿ ಡಾ. ಪಿ. ದಯಾನಂದ ಪೈ ಪತ್ನಿ ಮೋಹಿನಿ ದಯಾನಂದ ಪೈ, ಮಂಗಳೂರು ವಿವಿ ಕುಲಸಚಿವ ಪ್ರೊ. ಗಣೇಶ್ ಸಂಜೀವ್ ಹಾಗೂ ಪರೀಕ್ಷಾoಗ ಕುಲಸಚಿವ ದೇವೇಂದ್ರಪ್ಪ ಉಪಸ್ಥಿತರಿದ್ದರು.
ಡಾ. ಶಶಿರೇಖ , ಯಕ್ಷಗುರು ದೀವಿತ್ ಕೋಟ್ಯಾನ್ ಡಾ. ಶ್ರೀ ದೇವಿ ಕಲ್ಲಡ್ಕ ಅವರು ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಹಾಗೂ ಕೃಷ್ಣ ಪ್ರಕಾಶ್ ಉಳಿತ್ತಾಯ ಅವರು ಅನಿಸಿಕೆ‌ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು.

ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಧನಂಜಯ ಕುಂಬ್ಳೆ ಸ್ವಾಗತಿಸಿದರು. ಯಕ್ಷಗಾನ ಅಧ್ಯಯನ ಕೇಂದ್ರದ ಸಂಶೋಧನಾಧಿಕಾರಿ ಡಾ. ಸತೀಶ್ ಕೊಣಾಜೆ ವಂದಿಸಿದರು.
ಕಲಾವಿದೆ ಸಾಯಿಸುಮ ನಾವಡ ಕಾರ್ಯಕ್ರಮ ನಿರೂಪಿಸಿದರು.

ವಿಶೇಷವೆಂದರೆ ಕಾರ್ಯಕ್ರಮ ನಿರೂಪಣೆ, ಸನ್ಮಾನ, ಗಾನ ಅಭಿನಂದನೆ ಎಲ್ಲವೂ ಯಕ್ಷಗಾನ ಶೈಲಿಯಲ್ಲಿ ನಿರೂಪಣೆಗೊಂಡಿದ್ದು ಸೇರಿದ ಕಲಾಸಕ್ತರ ಮನಗೆಲ್ಲುವಲ್ಲಿ ಯಶಸ್ವಿಯಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...

ಕೋಲಾರ | ಆಗ್ನೇಯ ಪದವೀಧರರ ಕ್ಷೇತ್ರ : ಕೋಲಾರ ಜಿಲ್ಲೆಯಲ್ಲಿ ಶೇ. 76.99 ರಷ್ಟು ಮತದಾನ : ಚುನಾವಣಾಧಿಕಾರಿ ಎಂ.ಆರ್. ರವಿಕುಮಾರ್

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕೋಲಾರ ಜಿಲ್ಲೆಯಲ್ಲಿ...

ನಾಡ ದೇವತೆಯ ಬಳಿ ನನ್ನ ಅಳಲು; ವಿವೇಕಾನಂದ ಎಚ್. ಕೆ

ನಾಡ ದೇವಿ ತಾಯಿ ಚಾಮುಂಡೇಶ್ವರಿ, ನಿನಗೆ ತುಂಬು ಹೃದಯದ ಧನ್ಯವಾದಗಳು. ನಿನ್ನ...