ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಾನೂರು ಜಲಪಾತದಲ್ಲಿ ಬಿದ್ದು, ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರುಪಾಲಾದ ಘಟನೆ ನಡೆದಿದೆ. ಧಾರವಾಡದ ಕೆ.ಯು.ಡಿ ಸಮೀಪದ ಸುಹೇಲ್ ಸಯ್ಯದ್ ಅಲಿ ಶೇಖ್ (21) ನೀರಿನಲ್ಲಿ ಕೊಚ್ಚಿಹೋದ ಯುವಕ.
ಹಳಿಯಾಳ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದ ಸುಹೇಲ್, ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕಾಗಿ ಕಾನೂರು ಜಲಪಾತಕ್ಕೆ ತೆರಳಿದ್ದ. ಜಲಪಾತದ ಬಳಿ ಫೋಟೋ ತೆಗೆಸಿಕೊಳ್ಳುವಾಗ ಆಯತಪ್ಪಿ ಬಿದ್ದು, ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ ಎನ್ನಲಾಗಿದೆ.
ಮಾಹಿತಿ ತಿಳಿದ ಕೂಡಲೇ ಡಿವೈಎಸ್‌ಪಿ ಗೀತಾ ಪಾಟೀಲ್ ಹಾಗೂ ಯಲ್ಲಾಪುರ ಸಿಪಿಐ ರಮೇಶ್ ಹರಗಾಪುರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಹಕಾರದೊಂದಿಗೆ ಸುಹೇಲ್ ಶೇಖ್ ಅವರ ಪತ್ತೆಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.
ಇದನ್ನೂ ಓದಿ: ಉತ್ತರ ಕನ್ನಡ | ಭೂಮಿಗಾಗಿ ದಶಕಗಳ ಹೋರಾಟ; ಸೂರಿನ ನಿರೀಕ್ಷೆಯಲ್ಲಿ ಅರಣ್ಯ ವಾಸಿಗಳು
ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.