ಯಲ್ಲಾಪುರ | ಆರತಿಬೈಲು ಬಳಿ ಭೀಕರ ಅಪಘಾತ; ಪ್ರವಾಸಕ್ಕೆ ಹೊರಟಿದ್ದ ಧಾರವಾಡದ ಆರು ಮಂದಿ ದುರ್ಮರಣ

Date:

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ 9) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕರ್ಣ–ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿದ್ದ ಧಾರವಾಡ ಮೂಲದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

ಧಾರವಾಡದಿಂದ ತೂಫಾನ್ ಕ್ರೂಸರ್ ವಾಹನದಲ್ಲಿ ಒಟ್ಟು ಒಂಬತ್ತು ಮಂದಿ ಸ್ನೇಹಿತರು ಧರ್ಮಸ್ಥಳ ಹಾಗೂ ಗೋಕರ್ಣ ಪ್ರವಾಸಕ್ಕೆ ತೆರಳುತ್ತಿದ್ದರು. ಬೆಳಗಿನ ಜಾವ ಸುಮಾರು 1.30 ಗಂಟೆ ಸುಮಾರಿಗೆ ಆರತಿಬೈಲು ಬಳಗಾರ ಕ್ರಾಸ್ ಸಮೀಪ ತಲುಪಿದ ವೇಳೆ, ಅಂಕೋಲಾದಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಲಾರಿ ಗೆ ಕ್ರೂಸರ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಡಿಕ್ಕಿಯ ರಭಸಕ್ಕೆ ಕ್ರೂಸರ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಕ್ರೂಸರ್ ಚಾಲಕ ಸಂಜೀವ್ ಮೈಲಾರ ಅಂಗಡಿ ವಾಹನವನ್ನು ರಸ್ತೆಯ ಬಲಭಾಗಕ್ಕೆ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಅಂಕೋಲಾ | ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ; ಯುವಕನಿಗೆ ಗಂಭೀರ ಗಾಯ

ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಅವರಲ್ಲಿ ಕೆಲವರು ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್‌ಟೈಮ್ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತರ ವಿವರ: ಸಂಜೀವ್ ಮೈಲಾರ ಅಂಗಡಿ (33), ಕುರುಬಗಟ್ಟಿ, ಧಾರವಾಡ, ಅಕ್ಷಯ್ ತೇಜಪ್ಪ ಮುರಳವರ (26), ಸಾಧನಕೇರಿ, ಧಾರವಾಡ, ಅಭಿಷೇಕ್ ಈಶ್ವರ (28), ಜಯನಗರ, ಧಾರವಾಡ, ಅಭಿಷೇಕ್ ಮಲ್ಲೇಶ ಮಡಬಾವಿ (27), ಜನತಾ ಪ್ಲಾಟ್, ಸಪ್ತಾಪುರ, ಧಾರವಾಡ, ಬಸಪ್ಪ ದೇವಪ್ಪ ಕನಕನವರ (38), ಜೆಎಸ್‌ಎಸ್ ಕ್ಯಾಂಪಸ್, ಧಾರವಾಡ ಹಾಗೂ ಮಂಜುನಾಥ ಅಶೋಕ ಚುಳಕಿ (33), ಮುರಘಾಮಠ, ಧಾರವಾಡ.

ಗಾಯಾಳುಗಳು: ಶಿವರಾಜ್ ಗುರಪ್ಪ ಮಡಿವಾಳ (22), ತುಪ್ಪದಕುರಹಟ್ಟಿ, ನರಗುಂದ, ಸಚಿನ್ (26), ಮೆಹಬೂಬ್ ನಗರ, ಧಾರವಾಡ ಹಾಗೂ ಚನ್ನಬಸು ಬಸಲಿಂಗಯ್ಯ ಸಂಪಗಾಂವಿಮಠ (28), ಕಲಘಟಗಿ, ಧಾರವಾಡ.ಗಾಯಾಳುಗಳನ್ನು ತಕ್ಷಣ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೆಎಂಸಿ ಆಸ್ಪತ್ರೆ, ಹುಬ್ಬಳ್ಳಿಗೆ ರವಾನಿಸಲಾಗಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಯಲ್ಲಾಪುರ ಪೊಲೀಸರು, ಹೆದ್ದಾರಿ ಗಸ್ತು ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮೃತದೇಹಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಈ ಭೀಕರ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಉನ್ನತ ಶಿಕ್ಷಣದಿಂದ ಮಹಿಳಾ ಸಬಲೀಕರಣ ಸಾಧ್ಯ; ಪ್ರೊ. ಶಾಂತಾದೇವಿ

ಶಿಕ್ಷಣವು ಕೇವಲ ಪ್ರಮಾಣಪತ್ರಕ್ಕೆ ಸೀಮಿತವಾಗದೆ, ಜ್ಞಾನ ಮತ್ತು ಕೌಶಲ್ಯ ಬೆಳೆಸುವ ಸಾಧನವಾಗಬೇಕು....

ಮಂಡ್ಯ | ಭಾರತಕ್ಕಾಗಿ ಯುವಶಕ್ತಿ ಧ್ಯೇಯದಡಿ ಎನ್ಎಸ್ಎಸ್ ಶಿಬಿರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ಮುಂಡಗೋಡ | ನೀರು ಕೇಳುವ ನೆಪದಲ್ಲಿ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿ

ಅಂಗಡಿಗೆ ಬಂದು ವಿಮಲ್ ಹಾಗೂ ಕುಡಿಯುವ ನೀರು ಕೇಳುವ ನೆಪದಲ್ಲಿ ಮಹಿಳೆಯ...

ಶಿರಸಿ | ಮೊಗೇರರಿಗೆ ಎಸ್‌ಸಿ ಪ್ರಮಾಣಪತ್ರ ನೀಡಬೇಡಿ: ಅರ್ಜುನ್ ಮಿಂಟಿ

ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರ್ ಸಮುದಾಯಕ್ಕೆ ಪರಿಶಿಷ್ಟ ಜಾತಿ (ಎಸ್‌ಸಿ)...