ಉಡುಪಿ | 6 ನೇ ದಿನಕ್ಕೆ ಕಾಲಿಟ್ಟ ಕೊರಗ ಸಮುದಾಯದ ಅಹೋರಾತ್ರಿ ಧರಣಿ, ಶಾಸಕ ಯಶ್‌ಪಾಲ್ ಸುವರ್ಣ ಭೇಟಿ

Date:

ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮುಂಭಾಗದಲ್ಲಿ ಕೊರಗ ಸಮುದಾಯದ ಯುವಜನರಿಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ನೀಡುವಂತೆ ಆಗ್ರಹಿಸಿ ಕಳೆದ ಆರು ದಿನಗಳಿಂದ ನಡೆಯುತ್ತಿರುವ ನಿರಂತರ ಅಹೋರಾತ್ರಿ ಧರಣಿ–ಸತ್ಯಾಗ್ರಹ ಸ್ಥಳಕ್ಕೆ ಉಡುಪಿ ಶಾಸಕ ಯಶ್‌ಪಾಲ್ ಆನಂದ್ ಸುವರ್ಣ ಅವರು ಭೇಟಿ ನೀಡಿ, ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

- Advertisement -

ಇದನ್ನು ಓದಿ : ಕೊರಗ ಸಮುದಾಯಕ್ಕೆ ಸರ್ಕಾರಿ ಉದ್ಯೋಗ : ಬರೀ ಕನಸು ಮಾತ್ರ ! https://eedina.com/karnataka/udupi-koraga-community-protest-at-dc-office/2025-12-19/

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಜಿಲ್ಲೆಯ ಮೂಲ ನಿವಾಸಿಗಳಾಗಿ ಗುರುತಿಸಿಕೊಂಡಿರುವ ಕೊರಗ ಸಮುದಾಯ ಅತ್ಯಂತ ಹಿಂದುಳಿದ ಸಮುದಾಯವಾಗಿದ್ದು, ಸಮಾಜದ ಮುಖ್ಯವಾಹಿನಿಗೆ ಬರಲು ಯುವಜನತೆ ಶಿಕ್ಷಣದ ಮೂಲಕ ಗಮನಾರ್ಹ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು. ಇಂತಹ ಪ್ರತಿಭಾವಂತ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ನೀಡುವ ಕುರಿತು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಒತ್ತಾಯಿಸಿದರು. ಈ ಸಂಬಂಧ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಇಲಾಖಾ ಸಚಿವರಿಗೆ ಪತ್ರ ಬರೆದು ಮನವಿ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ–ಕೇರಳ ಅಧ್ಯಕ್ಷ ಸುಶೀಲ ನಾಡ, ಮುಖಂಡರಾದ ಶೇಖರ ಕೆಂಜೂರು, ಕುಮಾರ ಕೆಂಜೂರು, ಪುತ್ರನ್ ಹೆಬ್ರಿ, ಪುನಿತ್ ಕಾರ್ಕಳ, ರೇಖಾ ಆತ್ರಾಡಿ, ತ್ರಿವೇಣಿ ಕಟಪಾಡಿ, ಪ್ರಜ್ಞಾ ಶಂಕರ ನಾರಾಯಣ, ಶೀನಾ ಬೆಳ್ಮಣ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ...

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...

ಕೋಲಾರ | ಜಿಲ್ಲೆಗೆ ₹600 ಕೋಟಿ‌ ಬರ ಪರಿಹಾರ ನೀಡಲು ಜೆಡಿಎಸ್ ಆಗ್ರಹ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಬರ ಪರಿಹಾರ...