ಉಡುಪಿ | ಕೆಲಸದ ಒತ್ತಡ ನಿವಾರಣೆಗೆ ಕ್ರೀಡಾಕೂಟ ಸಹಕಾರಿ : ಶಾಸಕ ಯಶ್‌ಪಾಲ್ ಸುವರ್ಣ

Date:

ಸರಕಾರಿ ನೌಕರರು ಸಮಯದ ಚೌಕಟ್ಟಿನಲ್ಲಿ ದುಡಿಯುವ ಸಂದರ್ಭದಲ್ಲಿ ಹೆಚ್ಚಿನ ಒತ್ತಡವನ್ನು ಅನುಭವಿಸುತ್ತಾರೆ. ಮಾನಸಿಕ ಹಾಗೂ ದೈಹಿಕ ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ದಿನನಿತ್ಯ ಕ್ರೀಡೆ, ಯೋಗ ಹಾಗೂ ವ್ಯಾಯಾಮದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘವು ಸರ್ಕಾರಿ ನೌಕರರಿಗೆ ಆಯೋಜಿಸಿರುವ ಕ್ರೀಡಾಕೂಟವು ಅರ್ಥಪೂರ್ಣವಾಗಿದ್ದು ನೌಕರರ ಒತ್ತಡ ನಿವಾರಣೆಗೆ ಸಹಕಾರಿಯಾಗಿದೆ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.

- Advertisement -

ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಕೆಲಸ-ಕಾರ್ಯಗಳಲ್ಲಿ ಒತ್ತಡವಿದ್ದಾಗ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಏರು ಪೇರಾಗುತ್ತದೆ. ಇದರಿಂದಾಗಿ ದಿನನಿತ್ಯದ ಕಾರ್ಯಗಳಲ್ಲಿ ವ್ಯತ್ಯಾಸವಾಗುತ್ತದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಂದ ಮನಸ್ಸು ಚೇತೋಹಾರಿಯಾಗಿರುತ್ತದೆ. ಸರ್ಕಾರಿ ನೌಕರರ ಸಂಘವು ಸದಸ್ಯರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕೆಲಸಮಾಡುತ್ತಿದ್ದು ಕ್ರೀಡಾ ಕಾರ್ಯಕ್ರಮವನ್ನು ಅಭೂತಪೂರ್ವವಾಗಿ ಸಂಘಟಿಸಿದೆ ಎಂದು ಸಂಘದ ಪ್ರಯತ್ನವನ್ನು ಅಭಿನಂದಿಸಿದ ಅವರು, ಸಂಘದ ಬಹುಕಾಲದ ಸ್ವಂತ ಕಟ್ಟಡದ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದರು.

1009206934

ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಸರ್ಕಾರಿ ನೌಕರರು ಮತ್ತು ಜನಪ್ರತಿನಿಧಿಗಳು ಜೊತೆಯಾಗಿ ಪ್ರಜಾಪ್ರಭುತ್ವಕ್ಕೆ ಶಕ್ತಿ ನೀಡುವ ಕಾರ್ಯ ಮಾಡಬೇಕು. ಸರ್ಕಾರಿ ನೌಕರರು ಶೃದ್ದೆ ಮತ್ತು ಪ್ರಾಮಾಣಿಕತೆಯಿಂದ ಜನರ ಸೇವೆ ಮಾಡಿದಾಗ ಸರಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ತಮ್ಮ ದಿನನಿತ್ಯದ ಜಂಜಾಟಗಳ ಮಧ್ಯೆಯೂ ಸರ್ಕಾರಿ ನೌಕರರು ಆಟೋಟಗಳಲ್ಲಿ ತೊಡಗಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ಕ್ರೀಡೆ ಮೂಲಕ ಸಮಾಜವನ್ನು ಕಟ್ಟುವ ಕೆಲಸವಾಗಬೇಕು. ಜಿಲ್ಲೆಯ ಕ್ರೀಡಾಳುಗಳು ರಾಜ್ಯ ಮತ್ತು ರಾಷ್ಟç ಮಟ್ಟದ ಸ್ಪರ್ಧೆಗಳಲ್ಲೂ ಅತ್ಯುತ್ತಮ ಸಾಧನೆ ಮಾಡಿ ಕೀರ್ತಿ ತರಬೇಕು ಎಂದರು.

ಜಿಲ್ಲೆಯಲ್ಲಿ 4 ಸಾವಿರಕ್ಕೂ ಮಿಕ್ಕಿ ಸರ್ಕಾರಿ ನೌಕರರು ದುಡಿಯುತ್ತಿದ್ದಾರೆ. ಸರ್ಕಾರಿ ನೌಕರರು ಸಮಾಜ ಸೇವೆಯಲ್ಲಿ ನಿರತರಾಗಿದ್ದು, ಇವರ ಸೇವೆ ರಾಜ್ಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ. ಪಕ್ಷ, ರಾಜಕಾರಣಿ ಹಾಗೂ ಜನರಿಂದ ಒತ್ತಡಕ್ಕೆ ಒಳಗಾಗುವ ಅಧಿಕಾರಿಗಳು ಜಾಗರೂಕರಾಗಿ ತಮ್ಮ ಬಗ್ಗೆ ತಪ್ಪು ಅಭಿಪ್ರಾಯ ಮೂಡದಂತೆ ಕೆಲಸ ನಿರ್ವಹಿಸಿ ಮೆಚ್ಚುಗೆ ಪಡೆಯಬೇಕು ಎಂದ ಅವರು ಉಡುಪಿಯ ಪರ್ಯಾಯ ಮಹೋತ್ಸವವನ್ನು ಅಚ್ಚುಕಟ್ಟಾಗಿ ಆಯೋಜಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಕೊರತೆ ಇದ್ದರೂ ಸರ್ಕರಿ ನೌಕರರು ನೂರು ಪ್ರತಿಶತದಷ್ಟು ಕಾರ್ಯದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತಾರೆ. ಈ ಸಂದರ್ಭದಲ್ಲಿ ಒತ್ತಡಕ್ಕೊಳಗಾಗುವುದು ಸಹಜ. ಒತ್ತಡವನ್ನು ನಿಭಾಯಿಸಲು ಖಡ್ಡಾಯವಾಗಿ ದಿನನಿತ್ಯ ಒಂದು ಗಂಟೆ ಕ್ರೀಡೆ ಅಥವಾ ವ್ಯಾಯಾಮದಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ದೇಹದ ಆರೋಗ್ಯದ ಜೊತೆಗೆ ಮಾನಸಿಕವಾಗಿಯೂ ಸಂತೋಷದಿಂದಿರಲು ಸಾಧ್ಯ ಎಂದರು.

ಕ್ರೀಡಾ ಕಾರ್ಯದರ್ಶಿಗಳಾದ ದಿನಕರ್ ನಾಯ್ಕ್ ಹಾಗೂ ದೀಪಾ ಕ್ರೀಡಾ ಪ್ರತಿಜ್ಷಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಆನಂದ ಜತ್ತಣ್ಣ, ಜಿಲ್ಲಾ ಖಜಾಂಜಿ ದಯಾನಂದ ಬೆನ್ನೂರು, ಪ್ರಧಾನ ಕಾರ್ಯದರ್ಶಿ ರಾಜೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ಸಂಘದ ಪದಾಧಿಕಾರಿಗಳು ಮತ್ತಿರರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಸ್ವಾಗತಿಸಿ, ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಹಾಗೂ ಎಳ್ಳಂಪಳ್ಳಿ ಸಂತೋಷ್ ಶೆಟ್ಟಿ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...