ಸಿದ್ದರಾಮಯ್ಯರನ್ನು ಕೆಳಗಿಳಿಸಲು ʼಆಪರೇಷನ್‌ ಹಸ್ತʼಕ್ಕೆ ಮುಂದಾದ ಡಿಕೆ ಶಿವಕುಮಾರ್:‌ ಯತ್ನಾಳ್‌ ಆರೋಪ

Date:

  • ಸಿದ್ದರಾಮಯ್ಯನವರ ವರ್ಚಸ್ಸು ಕಡಿಮೆ ಮಾಡಲು ಪಕ್ಷಾಂತರದ ಹೊಸ ಗೇಮ್
  • ‘ಸಿದ್ದರಾಮಯ್ಯರವರನ್ನು ಕೆಳಗೆ ಇಳಿಸುವುದಕ್ಕೆ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದಾರೆ’

ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ನಲ್ಲಿ ಹೆಚ್ಚಿನ ಶಾಸಕರ ಬೆಂಬಲವಿದೆ. ಆದರೆ, ಡಿಕೆ ಶಿವಕುಮಾರ್​​ಗೆ ಶಾಸಕರ ಬೆಂಬಲವಿಲ್ಲ. ಹೀಗಾಗಿ ಸಿದ್ದರಾಮಯ್ಯನವರ ವರ್ಚಸ್ಸು ಕಡಿಮೆ ಮಾಡಲು ಪಕ್ಷಾಂತರದ ಹೊಸ ಗೇಮ್ ಆಡುತ್ತಿದ್ದಾರೆ. ಇದು ಸಿಎಂ ಪಟ್ಟವೇರಲು ಡಿಕೆ ಶಿವಕುಮಾರ್ ಮಾಡಿರುವ ತಂತ್ರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಿಸಿದರು.

ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ಧರಾಮಯ್ಯನವರನ್ನು ಮುಖ್ಯಮಂತ್ರಿ ಪಟ್ಟದಿಂದ ಕೆಳಗಿಳಿಸಿ ರಾಜ್ಯದ ಸೂಪರ್ ಸಿಎಂ ಆಗಲು ತೆರೆಮರೆಯಲ್ಲಿ ಡಿಕೆ ಶಿವಕುಮಾರ್ ಯತ್ನಿಸುತ್ತಿದ್ದಾರೆ” ಎಂದು ದೂರಿದರು.

“ದೆಹಲಿಯಲ್ಲಿ ಡಿಕೆ ಶಿವಕುಮಾರ್ ಅವರು ಯಾರ್‍ಯಾರ ಮನೆಗೆ ತೆರಳಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದಾರೆ ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯಿದೆ. ಸಿದ್ದರಾಮಯ್ಯರವರನ್ನು ಕೆಳಗೆ ಇಳಿಸುವುದಕ್ಕೆ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ಎಲ್ಲ ಮಾಹಿತಿ ಬಿಡುಗಡೆ ಮಾಡುತ್ತೇನೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಶಾಲಾ‌ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆಗೆ ಚಾಲನೆ ನೀಡಿದ ಸಚಿವರು

ಸಿದ್ದರಾಮಯ್ಯ ವಿರುದ್ಧ ಇರುವ ಶಾಸಕರನ್ನು ಪಕ್ಷಕ್ಕೆ ವಾಪಸ್ ಕರೆಸಿ ತಮ್ಮ ಶಾಸಕಾಂಗ ಬೆಂಬಲವನ್ನು ಹೆಚ್ಚಿಸಿಕೊಳ್ಳುವ ಗುರಿ ಹೊಂದಿದ್ದಾರೆ. ಈ ಬೆಳವಣಿಗೆಯ ಕುರಿತು ಸಿದ್ದರಾಮಯ್ಯರವರಿಗೆ ನೋವಿದೆ. ಆದರೆ ಯಾವುದೇ ಕಾರಣಕ್ಕೂ ಅವರು ಸಿಎಂ ಹುದ್ದೆಯನ್ನು ಬಿಟ್ಟುಕೊಡುವುದಿಲ್ಲ. 5 ವರ್ಷದ ಸರ್ಕಾರವಾಗಲಿ 5 ತಿಂಗಳ ಸರ್ಕಾರವಾಗಲಿ ಸಿದ್ದರಾಮಯ್ಯರವರೇ ಕೊನೆಯ ಮುಖ್ಯಮಂತ್ರಿಯಾಗಿರುತ್ತಾರೆ” ಎಂದು ಭವಿಷ್ಯ ನುಡಿದರು.

“ರಾಜ್ಯದ ಮುಖ್ಯಮಂತ್ರಿಗಳಿಗೆ ಮಾತ್ರ ಎಲ್ಲ ಇಲಾಖೆಗಳ ಸಭೆ ಕರೆಯಲು ಅವಕಾಶವಿದೆ. ಉಪಮುಖ್ಯಮಂತ್ರಿಗೆ ಆ ಅಧಿಕಾರ ಇಲ್ಲ. ಸಿಎಂ ಹುದ್ದೆಯಲ್ಲಿ ಸಿದ್ದರಾಮಯ್ಯ ಸುಮ್ಮನೆ ಕುಳಿತಿದ್ದಾರಷ್ಟೇ, ಅವರದ್ದೇನು ನಡೆಯುತ್ತಿಲ್ಲ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಚಲೋ | ದೇವರೇ ಕಳಿಸಿದ ಮೋದಿ ಅವರೇ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸಿ: ಮಾವಳ್ಳಿ ಶಂಕರ್

ನಾಡಿನ ಜನರ ಪರವಾಗಿ ಧನಿ ಎತ್ತಿದ್ದ ಹಾಸನ ಜಿಲ್ಲೆಯಲ್ಲಿ ಇಂದು ಬೃಹತ್...

ಝಾರ್ಖಂಡದ ಜೆಎಂಎಂನಲ್ಲಿ ಕಲ್ಪನಾ ಎಂಬ ಬುಡಕಟ್ಟು ನಾಯಕಿಯ ಉದಯ

ಝಾರ್ಖಂಡ್ ಮುಕ್ತಿ ಮೋರ್ಚಾ ಎಂಬ ಆದಿವಾಸಿ ಪಕ್ಷದ ಸಾಂಪ್ರದಾಯಿಕ ಭದ್ರಕೋಟೆ ದುಮ್ಕಾ...

ಹಾಸನ ಚಲೋ | ಪ್ರಜ್ವಲ್‌ನನ್ನು 54ನೇ ಭಯೋತ್ಪಾದಕನೆಂದು ಹೆಸರಿಸಬೇಕು: ವಕೀಲ ಎಸ್‌ ಬಾಲನ್

ಭಾರತದಲ್ಲಿ 53 ಮಂದಿಯನ್ನು ಭಯೋತ್ಪಾದಕರು ಎಂದು ಸರ್ಕಾರ ಪಟ್ಟಿಮಾಡಿದೆ. ಪ್ರಜ್ವಲ್ ರೇವಣ್ಣ...

ಹಾಸನ ಚಲೋ | ಬಳ್ಳಾರಿ ರೀತಿಯಲ್ಲಿ ಹಾಸನದಲ್ಲಿರುವ ಪಾಳೆಗಾರಿಕೆಯನ್ನು ಬಗ್ಗುಬಡಿಯಬೇಕು: ಎಸ್‌.ಆರ್ ಹಿರೇಮಠ್‌

ದೇಶದಲ್ಲಿ ಮೂರು ಉತ್ಕೃಷ್ಟ ಸತ್ಯಾಗ್ರಹಗಳು ನಡೆದಿವೆ. ಒಂದು, ಅಂಬೇಡ್ಕರ್ ನೇತೃತ್ವದ ಮಹಾರ್...