ಯಲ್ಲಾಪುರ | ಇನ್‌ಫ್ಲುಯೆಂಜಾ-ಎ ಸೋಂಕಿಗೆ 41 ವರ್ಷದ ವ್ಯಕ್ತಿ ಮೃತ್ಯು

Date:

ಯಲ್ಲಾಪುರ: ತಾಲೂಕಿನ ಚವತಿ ಗ್ರಾಮದ 41 ವರ್ಷದ ವ್ಯಕ್ತಿಯೊಬ್ಬರು ಇನ್‌ಫ್ಲುಯೆಂಜಾ-ಎ (Influenza A) ವೈರಲ್ ಸೋಂಕಿನಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ರಾಜು ಮಂಜಾ ಗೌಡ ಎಂದು ಗುರುತಿಸಲಾಗಿದೆ.

- Advertisement -

ಅವರಿಗೆ ಜೂನ್ 10ರಂದು ಜ್ವರ ಕಾಣಿಸಿಕೊಂಡಿದ್ದು, ಆರಂಭದಲ್ಲಿ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಜೂನ್ 16ರಂದು ಜ್ವರ ಮತ್ತು ಸುಸ್ತಿನ ಲಕ್ಷಣಗಳು ಹೆಚ್ಚಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಬಳಿಕ ವೈದ್ಯರ ಸಲಹೆಯಂತೆ ಜೂನ್ 17ರಂದು ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಇನ್‌ಫ್ಲುಯೆಂಜಾ-ಎ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಆದರೆ ಚಿಕಿತ್ಸೆ ಮುಂದುವರಿದಿದ್ದರೂ ಆರೋಗ್ಯ ಸ್ಥಿತಿ ಗಂಭೀರಗೊಂಡು ಭಾನುವಾರ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

ಈ ಸುದ್ದಿ ಓದಿದ್ದೀರಾ? ಭಟ್ಕಳ | ಕಾರು ಹೊಂಡಕ್ಕೆ ಸಿಲುಕಿದ ಘಟನೆಗೆ ಹೊಸ ತಿರುವು; ಮೂರು ಪ್ರಕರಣ ದಾಖಲು

ಇನ್‌ಫ್ಲುಯೆಂಜಾ-ಎ ವೈರಸ್ ಉಸಿರಾಟದ ವ್ಯವಸ್ಥೆಯನ್ನು ಬಾಧಿಸುವ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಜ್ವರ, ಕೆಮ್ಮು, ನೆಗಡಿ, ಗಂಟಲು ನೋವು, ತಲೆನೋವು, ಮೈಕೈ ನೋವು ಹಾಗೂ ಸುಸ್ತು ಮೊದಲಾದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಸೋಂಕಿತ ವ್ಯಕ್ತಿ ಕೆಮ್ಮುವಾಗ ಅಥವಾ ಸೀನುವಾಗ ವೈರಸ್ ಇತರರಿಗೆ ಹರಡುವ ಸಾಧ್ಯತೆ ಇರುತ್ತದೆ.

ಘಟನೆಯ ಹಿನ್ನೆಲೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದು, ಜ್ವರ, ಕೆಮ್ಮು, ಉಸಿರಾಟದ ತೊಂದರೆ ಸೇರಿದಂತೆ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವಂತೆ ಸೂಚಿಸಿದೆ. ತೀವ್ರ ಆರೋಗ್ಯ ಸಮಸ್ಯೆಗಳು ಕಂಡುಬಂದರೆ ವಿಳಂಬ ಮಾಡದೆ ಆಸ್ಪತ್ರೆಗೆ ಭೇಟಿ ನೀಡುವುದು ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...