ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದು, ಇದೀಗ ಪ್ರಧಾನಿ ನರೇಂದ್ರ ಮೋದಿಯವರೂ ಕೂಡಾ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ₹2 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ.
ರಾಜ್ಯ ಸರ್ಕಾರದ ಆದೇಶದ ಮೇರೆಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ಮೃತರ ಕುಟುಂಬ ಸದಸ್ಯರಿಗೆ ಪರಿಹಾರ ಮೊತ್ತ ಬಿಡುಗಡೆಯ ಆದೇಶ ಪ್ರತಿ ನೀಡಿದರು. ಶಾಸಕ ಶಿವರಾಮ ಹೆಬ್ಬಾರ, ಸವಣೂರು ಶಾಸಕ ಯಾಸಿರ್ ಖಾನ್ ಪಠಾಣ ಆದೇಶ ಪ್ರತಿಯನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದರು.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.
— CM of Karnataka (@CMofKarnataka) January 22, 2025
ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು.
ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ…
ದುರ್ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ 12 ಜನರಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಯಲ್ಲಾಪುರ ಆಸ್ಪತ್ರೆ ಹಾಗೂ ಹುಬ್ಬಳ್ಳಿ ಕಿಮ್ಸ್‌ನಲ್ಲಿ ಮೃತದೇಹಗಳು ಇವೆ. ಅವುಗಳನ್ನು ಸವಣೂರಿಗೆ ತರುವ ಕೆಲಸ ನಡೆಯುತ್ತಿದ್ದು, ಮೃತರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಯುತ್ತಿದೆ.
ಈ ಸುದ್ದಿ ಓದಿದ್ದೀರಾ? ಯಲ್ಲಾಪುರ ಅಪಘಾತ | ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕಿಮ್ಸ್ ಆಸ್ಪತ್ರೆ ವೈದ್ಯರು ಹಿಂದೇಟು; ಮೃತ ವ್ಯಕ್ತಿಯ ಸಂಬಂಧಿಕರ ಆರೋಪ
ಹಾವೇರಿ ಪೊಲೀಸ್ ಹೆಚ್ಚುವರಿ ಎಸ್‌ಪಿ ಲಕ್ಷ್ಮಣ ಶಿರಕೋಳ, ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ ಅವರು ಯಲ್ಲಾಪುರ ಆಸ್ಪತ್ರೆಯಲ್ಲಿಯೇ ಬೀಡು ಬಿಟ್ಟಿದ್ದಾರೆ.