ಯಲ್ಲಾಪುರ ಮೂಲದ ಕ್ಯಾಸಿನೊ ಉದ್ಯಮಿ ಶ್ರೀನಿವಾಸ್ ನಾಯಕ್ ಮೇಲೆ ಗೋವಾದಲ್ಲಿ ಗುಂಡಿನ ದಾಳಿ

Date:

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ಹಾಗೂ ಗೋವಾದ ಕ್ಯಾಸಿನೊ ಉದ್ಯಮದಲ್ಲಿ ಗುರುತಿಸಿಕೊಂಡಿರುವ ಶ್ರೀನಿವಾಸ್ ನಾಯಕ್ ಅವರ ಮೇಲೆ ಶುಕ್ರವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ. ಪಣಜಿ ಸಮೀಪದ ಪೊರ್ವೊರಿಮ್‌ನಲ್ಲಿರುವ ಮ್ಯಾಜೆಸ್ಟಿಕ್ ಹೋಟೆಲ್ ಆವರಣದಲ್ಲಿ ಘಟನೆ ನಡೆದಿದ್ದು, ನಾಯಕ್ ಹಾಗೂ ಅವರ ಭದ್ರತಾ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ಮ್ಯಾಜೆಸ್ಟಿಕ್ ಪ್ರೈಡ್ ಗ್ರೂಪ್‌ನ ನಿರ್ದೇಶಕರಾಗಿರುವ ಶ್ರೀನಿವಾಸ್ ನಾಯಕ್ ಶುಕ್ರವಾರ ರಾತ್ರಿ ಸುಮಾರು 8.45ರ ವೇಳೆಗೆ ಕಚೇರಿ ಕೆಲಸ ಮುಗಿಸಿ ಕಾರಿನತ್ತ ತೆರಳುತ್ತಿದ್ದ ವೇಳೆ ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಏಕಾಏಕಿ ಅವರತ್ತ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ದಾಳಿಕೋರರು ಹೋಟೆಲ್‌ನ ಪಾರ್ಕಿಂಗ್ ಪ್ರದೇಶದಲ್ಲಿ ನಿಂತಿದ್ದ ವಾಹನಗಳ ನಡುವೆ ಕೆಲಕಾಲ ಅಡಗಿ ಕುಳಿತು ನಾಯಕ್ ಅವರ ಚಲನವಲನ ಗಮನಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನಾಯಕ್ ಅವರತ್ತ ಮೂರು ಸುತ್ತು ಗುಂಡು ಹಾರಿಸಿದ ಬಳಿಕ, ಅವರ ಭದ್ರತಾ ಸಿಬ್ಬಂದಿ ಪ್ರತಿಯಾಗಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಈ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಯಲ್ಲಿ ಶ್ರೀನಿವಾಸ್ ನಾಯಕ್ ಅವರಿಗೆ ಯಾವುದೇ ಗಾಯವಾಗಿಲ್ಲ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಹೊನ್ನಾವರ | ಅನುಮಾನಾಸ್ಪದ ಸಾವು ಪ್ರಕರಣಕ್ಕೆ ತಿರುವು; ಪತ್ನಿ ಹತ್ಯೆ ಆರೋಪದಲ್ಲಿ ಪತಿ ಬಂಧನ

ದಾಳಿಕೋರರು ಬೈಕ್‌ನಲ್ಲಿ ಸ್ಥಳಕ್ಕೆ ಬಂದಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಗುಂಡಿನ ದಾಳಿ ಬಳಿಕ ಹೆದ್ದಾರಿ ದಾಟಿ ಪರಾರಿಯಾಗಿರುವ ಸಾಧ್ಯತೆ ಇದೆ. ಘಟನೆ ನಡೆದ ತಕ್ಷಣ ಗೋವಾ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡವೂ ತೆರಳಿ ಸಾಕ್ಷ್ಯ ಸಂಗ್ರಹಿಸಿದೆ.

ಹೋಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ದಾಳಿಕೋರರ ಗುರುತು ಹಾಗೂ ಅವರು ಬಂದ ಮತ್ತು ಪರಾರಿಯಾದ ಮಾರ್ಗದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ. ಪ್ರಾಥಮಿಕವಾಗಿ ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಇಬ್ಬರು ಶಂಕಿತರನ್ನು ಗುರುತಿಸಲಾಗಿದೆ ಎನ್ನಲಾಗಿದೆ.

ಘಟನೆಯ ಹಿನ್ನೆಲೆಯಲ್ಲಿ ಗೋವಾದ ವಿವಿಧೆಡೆ ಪೊಲೀಸ್ ತಪಾಸಣೆ ಬಿಗಿಗೊಳಿಸಲಾಗಿದ್ದು, ಪ್ರಮುಖ ರಸ್ತೆ, ಚೆಕ್‌ಪೋಸ್ಟ್‌ಗಳು, ರೈಲು ನಿಲ್ದಾಣ, ಬಸ್ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ಉತ್ತರ ಗೋವಾ ಪೊಲೀಸರು ಹಾಗೂ ಅಪರಾಧ ವಿಭಾಗದ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ವ್ಯವಹಾರಿಕ ವೈಷಮ್ಯ, ಹಣಕಾಸಿನ ವ್ಯವಹಾರ ಅಥವಾ ಇತರ ಕಾರಣಗಳ ಸಾಧ್ಯತೆಗಳ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಕುರಿತು ಪೊರ್ವೊರಿಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ಶ್ರೀನಿವಾಸ್ ನಾಯಕ್ ಅವರು ಗೋವಾದಲ್ಲಿ ಕ್ಯಾಸಿನೊ ಸೇರಿದಂತೆ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಗೋವಾದಲ್ಲಿ ನಡೆದ ಈ ಗುಂಡಿನ ದಾಳಿ ಇದೀಗ ಅವರ ಸ್ವಗ್ರಾಮದ ಜಿಲ್ಲೆಯಲ್ಲೂ ಗಮನ ಸೆಳೆದಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಪೊಲೀಸ್ ತನಿಖೆಯ ಬಳಿಕ ಹೊರಬರಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...