ಯಲ್ಲಾಪುರ | ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ ತೆರವಿಗೆ ಬಿಜೆಪಿ ಆಗ್ರಹ; ಇಲ್ಲವಾದರೆ ಪ್ರತಿಭಟನೆ ಎಚ್ಚರಿಕೆ

Date:

ಯಲ್ಲಾಪುರ: ತಾಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ವಿಧಿಸಿರುವ ಪ್ರವೇಶ ನಿರ್ಬಂಧವನ್ನು ತೆರವುಗೊಳಿಸುವಂತೆ ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ. ನಿರ್ಬಂಧ ಮುಂದುವರಿಸಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -

ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮಂಡಲ ಉಪಾಧ್ಯಕ್ಷ ಗಣೇಶ ಹೆಗಡೆ, ಯಲ್ಲಾಪುರ ತಾಲೂಕಿನಲ್ಲಿ ಹಲವು ಜಲಪಾತಗಳು, ದೇವಸ್ಥಾನಗಳು ಸೇರಿದಂತೆ ಪ್ರವಾಸಿಗರನ್ನು ಆಕರ್ಷಿಸುವ ಸ್ಥಳಗಳಿವೆ. ಮಳೆಗಾಲದಲ್ಲಿ ಈ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ...

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ ಪಡೆದುಕೊಂಡಿದೆ. ಮಳೆಗಾಗಿ ಎದುರು ನೋಡುತ್ತಿರುವ ರೈತರಿಗೆ ಬಿಸಿಲು ಮತ್ತಷ್ಟು ಆತಂಕ ಮೂಡಿಸಿದ್ದು, ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ತಾಪಮಾನ...

‘SIR ಪ್ರಕ್ರಿಯೆ ಕುರಿತು ನಮಗೆ ಏನನ್ನೂ ತಿಳಿಸದೇ ತೀರ್ಮಾನ’:...

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಗಂಭೀರ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision - SIR /...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಆದರೆ ಅಪಾಯದ ಕಾರಣ ನೀಡಿ ಹಲವು ಪ್ರವಾಸಿ ತಾಣಗಳಿಗೆ 3ರಿಂದ 4 ತಿಂಗಳ ಅವಧಿಗೆ ಪ್ರವೇಶ ನಿರ್ಬಂಧಿಸುತ್ತಿರುವುದು ಪ್ರವಾಸೋದ್ಯಮಕ್ಕೆ ಹಿನ್ನಡೆಯಾಗುತ್ತಿದೆ ಎಂದು ಹೇಳಿದರು. ತಾಲೂಕಿನಲ್ಲಿ ಪ್ರವಾಸೋದ್ಯಮವನ್ನು ಅವಲಂಬಿಸಿ ಹಲವರು ಜೀವನ ನಡೆಸುತ್ತಿದ್ದಾರೆ. ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಿರುವುದರಿಂದ ಸ್ಥಳೀಯ ವ್ಯಾಪಾರಸ್ಥರು ಸೇರಿದಂತೆ ಪ್ರವಾಸೋದ್ಯಮಕ್ಕೆ ಸಂಬಂಧಿಸಿದವರ ಆದಾಯದ ಮೇಲೆ ಪರಿಣಾಮ ಬೀರುತ್ತಿದೆ.

ಈ ಸುದ್ದಿ ಓದಿದ್ದೀರಾ ? ಶಿರಸಿ | ಗೌಡಳ್ಳಿ ದಲಿತರ ಮನೆ ಧ್ವಂಸ ಪ್ರಕರಣ; ಶಾಸಕ-ಸಂಸದರ ವಿರುದ್ಧ ಭೀಮಗರ್ಜನೆಯಿಂದ ಪ್ರತಿಭಟನೆ

ಹೀಗಾಗಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿ ಮುಖಂಡ ಬಾಲಕೃಷ್ಣ ನಾಯಕ ಮಾತನಾಡಿ, ಪ್ರವಾಸಿ ತಾಣಗಳ ನಿರ್ಬಂಧದಿಂದ ಪ್ರವಾಸಿಗರ ಜೊತೆಗೆ ಸ್ಥಳೀಯ ವ್ಯಾಪಾರಸ್ಥರೂ ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದರು.

ಎಲ್‌ಎಸ್‌ಎಂಪಿ ಸೊಸೈಟಿ ಅಧ್ಯಕ್ಷ ನಾಗರಾಜ ಕವಡಿಕೆರೆ, ಜಿಲ್ಲೆಯ ಪ್ರಮುಖ ಆದಾಯದ ಮೂಲವಾಗಿರುವ ಪ್ರವಾಸೋದ್ಯಮಕ್ಕೆ ನಿರ್ಬಂಧಗಳಿಂದ ಹೊಡೆತ ಬೀಳುತ್ತಿದೆ. ಒಂದು ವಾರದೊಳಗೆ ಪ್ರವಾಸಿ ತಾಣಗಳ ಮೇಲಿನ ಪ್ರವೇಶ ನಿರ್ಬಂಧ ತೆರವುಗೊಳಿಸಿ ಪ್ರವಾಸಿಗರಿಗೆ ಅವಕಾಶ ನೀಡಬೇಕು. ಇಲ್ಲವಾದರೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಗಣೇಶ ಹೆಗಡೆ ಹೇಳಿದರು.

ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸೋಮೇಶ್ವರ ನಾಯ್ಕ, ಶ್ರೀನಿವಾಸ ಗಾಂವ್ಕರ,‌ ಮಾಲತೇಶ ಜಲಧಿ ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಯುಪಿಐ ವಹಿವಾಟಿಗೆ ತೆರಿಗೆ: ಬಿಜೆಪಿ–ಮೋದಿ ಆಡಳಿತದ ಡೋಂಗಿ ಬಣ್ಣ ಬಯಲು : ಸುರೇಶ್ ಶೆಟ್ಟಿ ಬನ್ನಂಜೆ

ಕಳೆದ ಹನ್ನೆರಡು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ...

ಹಾವೇರಿ | ಸಹಕಾರಿ ಆಂದೋಲನದಲ್ಲಿ ವಿಶ್ವಾಸವೇ ಮುಖ್ಯ: ಗಾಜೀಗೌಡ್ರ

"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ...

ಧಾರವಾಡ | ಮೆಕ್ಕೆಜೋಳ ಮೇವು ರಕ್ಷಣೆಗೆ ಸಲಹೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರು...

ಹಾವೇರಿ | ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು: ಎಂ.ಎಂ.ಮೈದೂರ

"ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದೈಹಿಕ ಹಾಗೂ ಮಾನಸಿಕ...