ಯಲ್ಲಾಪುರ | ನವೆಂಬರ್ 29ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ: 50ಕ್ಕೂ ಹೆಚ್ಚು ಕಂಪನಿಗಳು ಭಾಗಿ

Date:

ಯಲ್ಲಾಪುರದಲ್ಲಿ 2025–26ನೇ ಸಾಲಿನ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಸಂಜೀವಿನಿ (ಎನ್‌ಆರ್‌ಎಲ್‌ಎಂ) – ಕೆಎಸ್‌ಆರ್‌ಎಲ್‌ಪಿಎಸ್‌ನ ದೀನ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDU-GKY) ಅಡಿಯಲ್ಲಿ ನವೆಂಬರ್ 29ರಂದು ಆಯೋಜಿಸಲಾಗಿದೆ. ಉದ್ಯೋಗ ಮೇಳವು ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ, ಕಾಳಮ್ಮ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆಯಲಿದೆ.

- Advertisement -

ಜಿಲ್ಲಾ ಪಂಚಾಯತ, ಉತ್ತರ ಕನ್ನಡ, ತಾಲೂಕು ಪಂಚಾಯತ, ಯಲ್ಲಾಪುರ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯಲ್ಲಾಪುರ ಸಹಯೋಗದಲ್ಲಿ ಈ ಮೇಳ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ವಿದ್ಯಾವಂತ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ʼನಮ್ಮದೇ ಜಮೀನಿಗೆ ಕಾಲಿಟ್ಟರೆ ಕಳ್ಳತನದ ಕೇಸ್ ಹಾಕ್ತಾರೆʼ: ದಲಿತ ಮಹಿಳೆಯರ ಆರೋಪ

ಉದ್ಯೋಗ ಮೇಳವು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ, ಬಿ.ಕಾಂ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮುಕ್ತವಾಗಿರಲಿದೆ. ಮೇಳದಲ್ಲಿ 50ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಕಂಪನಿಗಳು ಹಾಗೂ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳು ಪಾಲ್ಗೊಳ್ಳಲಿವೆ. ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್, ಆಧಾರ್ ಕಾರ್ಡ್, ಇತ್ತೀಚಿನ ಭಾವಚಿತ್ರ ಪ್ರತಿಯೊಂದಿಗೆ ಮೇಳದಲ್ಲಿ ನೇರವಾಗಿ ಭಾಗವಹಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳು ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ ಮನವಿ ಮಾಡಿದೆ.

ಹೆಚ್ಚಿನ ಮಾಹಿತಿಗಾಗಿ 8431936810, 8050340180, 9449960528, 9483807972 ಮತ್ತು 9380248676ಗೆ ಸಂಪರ್ಕಿಸಬಹುದು. ಈ ಕುರಿತು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...