ಯಲ್ಲಾಪುರ | ಅಡಿಕೆ ಬೆಳೆಗಾರರ ಬದುಕಿನೊಂದಿಗೆ ಚೆಲ್ಲಾಟ ಬೇಡ: ಶಾಸಕ ಶಿವರಾಮ ಹೆಬ್ಬಾರ್

Date:

ಯಲ್ಲಾಪುರ: ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಸೇರಿದಂತೆ ವಿವಿಧ ಭಾಗಗಳಲ್ಲಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಾನೂನುಬದ್ಧವಾಗಿ ಸಾಗಾಟ ಮಾಡಲಾಗುತ್ತಿದ್ದ ಅಡಿಕೆ ತುಂಬಿದ ಲಾರಿಗಳನ್ನು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಎಂಬ ನೆಪದಲ್ಲಿ ವಶಪಡಿಸಿಕೊಳ್ಳುತ್ತಿರುವುದು ಅತ್ಯಂತ ಖಂಡನೀಯ ಹಾಗೂ ರೈತ ವಿರೋಧಿ ಕ್ರಮವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸಾವಿರಾರು ಅಡಿಕೆ ಬೆಳೆಗಾರರು ಕಳೆದ ಎರಡು ವರ್ಷಗಳಿಂದ ಎಲ್ಲೆಚುಕ್ಕೆ ರೋಗದ ಹಾವಳಿಯಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬೆಳೆ ನಷ್ಟ, ಉತ್ಪಾದನೆ ಕುಸಿತ ಹಾಗೂ ಆರ್ಥಿಕ ಸಂಕಷ್ಟದಿಂದ ರೈತರು ಈಗಾಗಲೇ ಕಂಗೆಟ್ಟಿರುವ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರದ ಈ ಕ್ರಮ ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಈ ಸುದ್ದಿ ಓದಿದ್ದೀರಾ? ದಾಖಲೆ ಮೀನು ಉತ್ಪಾದನೆಯಾದರೂ… ಸುಧಾರಿಸದ ಮೀನುಗಾರರ ಬದುಕು

ಅಡಿಕೆ ಬೆಳೆಗಾರರು ಹಾಗೂ ವ್ಯಾಪಾರಸ್ಥರು ಎಲ್ಲಾ ಕಾನೂನುಬದ್ಧ ದಾಖಲೆಗಳನ್ನು ಹೊಂದಿದ್ದರೂ ಲಾರಿಗಳನ್ನು ವಶಪಡಿಸಿಕೊಳ್ಳುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದರಿಂದ ರೈತರಿಗೆ ತಮ್ಮ ಉತ್ಪನ್ನಕ್ಕೆ ನ್ಯಾಯಯುತ ಬೆಲೆ ದೊರೆಯದ ಪರಿಸ್ಥಿತಿ ಉಂಟಾಗಿದ್ದು, ಆರ್ಥಿಕ ಸಂಕಷ್ಟ ಮತ್ತಷ್ಟು ಉಲ್ಬಣಗೊಳ್ಳುವ ಭೀತಿ ಎದುರಾಗಿದೆ. ಅಡಿಕೆ ಬೆಳೆಗಾರರ ಜೀವನಾಧಾರಕ್ಕೆ ಧಕ್ಕೆ ತರುವ ಇಂತಹ ದಮನಕಾರಿ ಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕು.

ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರಗಳು ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಬೇಕು. ರೈತರ ಬದುಕು ಮತ್ತು ಅವರ ಶ್ರಮದೊಂದಿಗೆ ಚೆಲ್ಲಾಟ ನಡೆಸುವ ಯಾವುದೇ ಕ್ರಮವನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೆಬ್ಬಾರ್ ಅವರು ಎಚ್ಚರಿಸಿದ್ದಾರೆ.

ರಾಜ್ಯದ ಲಕ್ಷಾಂತರ ಅಡಿಕೆ ಬೆಳೆಗಾರರ ಹಿತಾಸಕ್ತಿಗೆ ಧಕ್ಕೆ ಉಂಟುಮಾಡುತ್ತಿರುವ ಈ ಗಂಭೀರ ವಿಚಾರದಲ್ಲಿ ಸಂಬಂಧಿತ ಸರ್ಕಾರಗಳು ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಅಡಿಕೆ ಬೆಳೆಗಾರರು ಹಾಗೂ ರೈತರ ಪರವಾಗಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದರ ಜೊತೆಗೆ ಪ್ರಜಾಸತ್ತಾತ್ಮಕ ಹೋರಾಟದ ಎಲ್ಲಾ ಮಾರ್ಗಗಳನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಶಿವರಾಮ ಹೆಬ್ಬಾರ್ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಅಂಗನವಾಡಿ, ಶಾಲೆ, ಆಸ್ಪತ್ರೆಗಳಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು: ಸಿಇಒ ಡಾ. ದಿಲೀಷ್ ಶಶಿ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ...

ಉತ್ತರ ಕನ್ನಡ | ಸೆ.24ರಂದು ಯೆಲ್ಲೋ ಅಲರ್ಟ್‌: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...