ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ತಂದೆ ಮತ್ತು ಮಗನನ್ನು ಬಂಧಿಸಿರುವ ಘಟನೆ ಯಲ್ಲಾಪುರ ಅರಣ್ಯ ವಲಯದ ಹಳಬೈಲ್ ಶಾಖಾ ವ್ಯಾಪ್ತಿಯಲ್ಲಿ ನಡೆದಿದೆ.
ಕಣ್ಣಿಗೇರಿ ಗ್ರಾಮದ ಹಳಿಯಾಳ ಕ್ರಾಸ್ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಿರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ, ಇನಾಸ್ ಬಸ್ಥ್ಯಾಂವ್ ಸಿದ್ದಿ (55) ಮತ್ತು ಅವರ ಪುತ್ರ ಪ್ರಕಾಶ್ ಇನಾಸ್ ಸಿದ್ದಿ (27) ಅವರ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ
ಈ ವೇಳೆ ಬೇಟೆಯಾಡಲಾಗಿದ್ದ ಎರಡು ಗಂಡು ಉಡಗಳ ಮೃತದೇಹಗಳು ಪತ್ತೆಯಾಗಿದ್ದು, ಬೇಟೆಗೆ ಬಳಸಿದ್ದ ಎರಡು ಕತ್ತಿಗಳು ಹಾಗೂ ಒಂದು ಕೊಡಲಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ.
ಈ ಸಂಬಂಧ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ಸೆಕ್ಷನ್ 2(16), 9, 39(ಎ) ಮತ್ತು 50ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಳಿಕ ಇಬ್ಬರನ್ನೂ ನ್ಯಾಯಾಲಯದ ಮೂಲಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀಜ್ ಶೇಖ್ ಅವರ ನೇತೃತ್ವದಲ್ಲಿ ಹಾಗೂ ವಲಯ ಅರಣ್ಯಾಧಿಕಾರಿ ಮಂಜುನಾಥ್ ಎಚ್. ನಾಯ್ಕ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.




