ಯಲ್ಲಾಪುರ | ತಾಲ್ಲೂಕಿಗೆ ಮುಂದಿನ ಬಜೆಟ್‍ನಲ್ಲಿ ಹೊಸ ಎಸ್‍ಟಿ ಹಾಸ್ಟೆಲ್ ಮಂಜೂರು: ಸಿಎಂ ಸಿದ್ದರಾಮಯ್ಯ ಘೋಷಣೆ

Date:

ಮುಂಬರಲಿರುವ ಬಜೆಟ್‍ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣಕ್ಕೆ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು.

- Advertisement -

ಪರಿಷತ್ತಿನಲ್ಲಿ ಸದಸ್ಯರಾದ ಶಾಂತಾರಾಮ ಬುಡ್ನ ಸಿದ್ಧಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಮೆಟ್ರಿಕ್ ನಂತರದ ವಸತಿ ನಿಲಯಗಳನ್ನು ಯಾವುದೇ ಒಂದು ಸ್ಥಳದಲ್ಲಿ ಪ್ರಾರಂಭಿಸಲು ಸುತ್ತಮುತ್ತಲಿನ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಅವರಿಂದ ವಸತಿ ನಿಲಯ ಪ್ರವೇಶಾತಿಗೆ ಬೇಡಿಕೆಯು ಪ್ರಮುಖ ಮಾನದಂಡಗಳಾಗಿರುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಜಿಲ್ಲೆಗಳಿಂದ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ನಿಲಯಗಳ ಮಂಜೂರಾತಿ ಕುರಿತು ಸೂಕ್ತ ಪ್ರಸ್ತಾವನೆ ಸ್ವೀಕೃತವಾದಲ್ಲಿ ಮತ್ತು ಅತ್ಯಾವಶ್ಯಕ ಎಂದು ಕಂಡುಬಂದಲ್ಲಿ, ಆದ್ಯತೆಯ ಮೇರೆಗೆ ಪರಿಶೀಲಿಸಿ, ಅನುದಾನದ ಲಭ್ಯತೆಗೆ ಅನುಸಾರ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲು ಪರಿಶೀಲಿಸಲಾಗುವುದು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಬೆಂಗಳೂರು ತ್ಯಜಿಸಿ ಬಂದ ಸುಭಾಸ್‌ಚಂದ್ರ ನಾಯ್ಕ್‌ಗೆ ನರೇಗಾ ಕೈ ಹಿಡಿತು: ಕುರಿ ಸಾಕಾಣಿಕೆಯಲ್ಲಿ ಲಕ್ಷಗಳ ಆದಾಯ!

2024-25 ಮತ್ತು 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅತ್ಯಾವಶ್ಯಕವಾಗಿ ಬೇಕಾಗಿರುವ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಒಟ್ಟು 34 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗಿದ್ದು, ಈ ಪೈಕಿ ಉತ್ತರಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರದಲ್ಲಿ 02 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗಿರುತ್ತದೆ ಎಂದು ಅವರು ವಿವರಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...