ಯಲ್ಲಾಪುರ | ಅಪರೂಪದ ಬಿಳಿ ಕಾಗೆ ಪ್ರತ್ಯಕ್ಷ: ಶಾಲಾ ಮಕ್ಕಳಲ್ಲಿ ಮೂಡಿದ ಕುತೂಹಲ

Date:

ಯಲ್ಲಾಪುರ: ತಾಲೂಕಿನ ಕೊಂಡೆಮನೆ ಶಾಲೆಯ ಆವರಣದಲ್ಲಿ ಅಪರೂಪದ ಬಿಳಿ ಕಾಗೆಯೊಂದು ಕಾಣಿಸಿಕೊಂಡು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅಚ್ಚರಿ ಮತ್ತು ಕುತೂಹಲ ಮೂಡಿಸಿದೆ. ಶಾಲಾ ಆವರಣದಲ್ಲಿ ಸಾಮಾನ್ಯ ಕಪ್ಪು ಕಾಗೆಗಳ ನಡುವೆ ಬಿಳಿ ಬಣ್ಣದ ಕಾಗೆ ಕಾಣಿಸಿಕೊಂಡಿದ್ದು, ಶಾಲಾ ಮಕ್ಕಳ ಗಮನ ಸೆಳೆದಿದೆ.

- Advertisement -

ಈ ಅಪರೂಪದ ದೃಶ್ಯವನ್ನು ಶಿಕ್ಷಕರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಶಿಕ್ಷಕರ ಮಾಹಿತಿಯಂತೆ, ಇದೇ ಕಾಗೆ ಸುಮಾರು ಒಂದು ವರ್ಷದ ಹಿಂದೆಯೂ ಇದೇ ಪ್ರದೇಶದಲ್ಲಿ ಒಮ್ಮೆ ಕಾಣಿಸಿಕೊಂಡಿತ್ತು. ಇದೀಗ ಮತ್ತೊಮ್ಮೆ ಪ್ರತ್ಯಕ್ಷವಾಗಿರುವುದು ಸ್ಥಳೀಯರಲ್ಲಿ ಕುತೂಹಲ ಹೆಚ್ಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ಕಾನಸೂರ ವಸತಿ ಶಾಲೆ ವಿದ್ಯಾರ್ಥಿ ಸಾವು ಪ್ರಕರಣ: ಶಿಕ್ಷಕನ ವಿರುದ್ಧ ಗಂಭೀರ ಆರೋಪ, FIR ದಾಖಲು!

ಪಕ್ಷಿ ತಜ್ಞರ ಪ್ರಕಾರ, ಈ ರೀತಿಯ ಬಿಳಿ ಕಾಗೆಗಳು ‘ಲ್ಯೂಸಿಸಂ’ (Leucism) ಅಥವಾ ‘ಅಲ್ಬಿನಿಸಂ’ (Albinism) ಎಂಬ ಅಪರೂಪದ ಜನ್ಯ ವೈಶಿಷ್ಟ್ಯಗಳಿಂದ ಉಂಟಾಗುತ್ತವೆ. ದೇಹದಲ್ಲಿ ಮೆಲನಿನ್ (Melanin) ಎಂಬ ವರ್ಣದ್ರವ್ಯದ ಪ್ರಮಾಣ ಕಡಿಮೆಯಾಗುವುದು ಅಥವಾ ಅದರ ಉತ್ಪಾದನೆಯಲ್ಲಿ ಉಂಟಾಗುವ ವ್ಯತ್ಯಾಸದಿಂದ ಪಕ್ಷಿಗಳ ಪುಕ್ಕಗಳು ಸಂಪೂರ್ಣ ಅಥವಾ ಭಾಗಶಃ ಬಿಳಿ ಬಣ್ಣದಲ್ಲಿ ಕಾಣಿಸಿಕೊಳ್ಳುತ್ತವೆ.

ಪ್ರಕೃತಿಯಲ್ಲಿ ಅತ್ಯಂತ ಅಪರೂಪವಾಗಿ ಕಂಡುಬರುವ ಇಂತಹ ಬಿಳಿ ಕಾಗೆಯ ದರ್ಶನ ಸ್ಥಳೀಯರಿಗೆ ವಿಶೇಷ ಅನುಭವವಾಗಿದ್ದು, ಶಾಲಾ ಮಕ್ಕಳಲ್ಲಿ ಪ್ರಕೃತಿ, ಜೀವ ವೈವಿಧ್ಯತೆ ಹಾಗೂ ಪಕ್ಷಿಗಳ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಚಿಕ್ಕಮಗಳೂರು | ‘ಮಳಲೂರು ಏತ ನೀರಾವರಿ ಯೋಜನೆ’: ಹೆಸರಿಗಷ್ಟೇ ಈ ಯೋಜನೆ ಆಗಿದೆಯೇ?

ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ...