ಯಲ್ಲಾಪುರ | ಆಸ್ತಿ ವಿಚಾರಕ್ಕೆ ನಡೆದ ಕಲಹದಲ್ಲಿ ತಂದೆಯನ್ನೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಮಗ

Date:

ಯಲ್ಲಾಪುರ: ಆಸ್ತಿ ವಿವಾದ ಹಾಗೂ ಕುಟುಂಬ ಕಲಹದ ಹಿನ್ನೆಲೆಯಲ್ಲಿನ ಜಗಳ ತಂದೆಯ ಸಾವಿನಲ್ಲಿ ದಾರುಣ ಅಂತ್ಯ ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಬೆಳ್ಳುಂಬಿ ಸಮೀಪದ ಮಾವಿನಕಟ್ಟಾದಲ್ಲಿ ನಡೆದಿದೆ. ಸ್ವಂತ ಮಗನೇ ಕೊಡಲಿಯಿಂದ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಸ್ಥಳೀಯರಲ್ಲಿ ಬೆಚ್ಚಿಬೀಳುವಂತಾಗಿದೆ.

- Advertisement -

ಮೃತ ದುರ್ದೈವಿಯನ್ನು ನಾರಾಯಣ ಪರಶು ಮರಾಠಿ (51) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಪುತ್ರ ಹರೀಶ ಮರಾಠಿ (29) ಕೃತ್ಯದ ನಂತರ ಸ್ಥಳದಿಂದ ಪರಾರಿಯಾದರೂ ಬಳಿಕ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ತಂದೆ, ಪುತ್ರ ಹಾಗೂ ಪುತ್ರಿ ತಾರಾ ಮರಾಠಿ ಒಂದೇ ಮನೆಯಲ್ಲಿ ವಾಸವಾಗಿದ್ದು, ಆರೋಪಿ ಹರೀಶ ತೋಟದ ಕೆಲಸ ಮಾಡುತ್ತ ಜೀವನ ನಿರ್ವಹಿಸುತ್ತಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪತ್ನಿ ಸವಿತಾ ಮತ್ತು ಮಗಳು ಸುರಕ್ಷಾ ಜೊತೆಗೆ ವಾಸವಿದ್ದರೂ ಅಡುಗೆ ಪ್ರತ್ಯೇಕವಾಗಿತ್ತು. ಕುಟುಂಬದೊಳಗೆ ಆಗಾಗ ಕಲಹಗಳು ನಡೆಯುತ್ತಿದ್ದವು. ಘಟನೆಯ ದಿನ ಬೆಳಿಗ್ಗೆ ಸಹೋದರಿ ತಾರಾ ಹಾಗೂ ಪತ್ನಿ ಸವಿತಾ ನಡುವೆ ಜಗಳ ನಡೆದದ್ದು, ಆ ವೇಳೆಯಲ್ಲಿ ಹರೀಶ ಸಹೋದರಿಯ ಮೇಲೆ ಹಲ್ಲೆ ನಡೆಸಿದ್ದಾನೆಂದು ತಿಳಿದುಬಂದಿದೆ. ಇದರಿಂದ ಕೋಪಗೊಂಡ ತಂದೆ ನಾರಾಯಣ ಮಗನಿಗೆ ತರಾಟೆ ತೆಗೆದುಕೊಂಡು, “ನಿನ್ನ ವಿರುದ್ಧ ಪೊಲೀಸರಿಗೆ ದೂರು ಕೊಡುತ್ತೇನೆ” ಎಂದು ಎಚ್ಚರಿಸಿದ್ದಂತೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಸಣ್ಣವರ ಬಂಧನ, ದೊಡ್ಡವರಿಗೆ ರಕ್ಷಣೆ: ಮಟ್ಕಾ, ಇಸ್ಪಿಟ್ ದಂಧೆಯ ಹಿಂದಿರುವ ಕಾಣದ ಕೈ ಯಾವುದು?

ಹರೀಶ ಮನೆ, ಸಾಲ ಮತ್ತು ಮದುವೆಯ ಹೊಣೆಗಾರಿಕೆ ತಾನೇ ತೀರಿಸಿದ್ರೂ ಆಸ್ತಿ ಕೊಡಲಿಲ್ಲ ಎಂಬ ಆಕ್ರೋಶದಲ್ಲಿ ಕೊಡಲಿಯಿಂದ ಹಲ್ಲೆ ನಡೆಸಿದ. ಈ ವೇಳೆ ಎಡ ಕಿವಿ ಭಾಗಕ್ಕೆ ಕೊಡಲಿಯೇಟು ಬಿದ್ದ ಪರಿಣಾಮ ನಾರಾಯಣ ಮರಾಠಿ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ತಾರಾ ಮರಾಠಿ ತಕ್ಷಣ ತಂದೆಯನ್ನು ಯಲ್ಲಾಪುರ ಆಸ್ಪತ್ರೆಗೆ ಕರೆದೊಯ್ದರೂ ಆಗಲೇ ನಾರಾಯಣ ಮೃತಪಟ್ಟಿದ್ದರು. ಕೊಲೆ ಬಳಿಕ ಪರಾರಿಯಾಗಿದ್ದ ಹರೀಶನನ್ನು ಪೊಲೀಸರು ಸಂಜೆ ಬಂಧಿಸಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...