ಯಲ್ಲಾಪುರ | ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ: ಸ್ಪಿರಿಟ್ ಟ್ಯಾಂಕರ್ ಬೆಂಕಿಗೆ ಆಹುತಿ, ಲಾರಿ ಸಂಪೂರ್ಣ ಭಸ್ಮ

Date:

ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಿಕ್ಕೋಡಿಯಿಂದ ಕೇರಳ ಕಡೆಗೆ ಸ್ಪಿರಿಟ್‌ (ಎಥನಾಲ್) ತುಂಬಿಕೊಂಡು ಸಾಗುತ್ತಿದ್ದ ಟ್ಯಾಂಕರ್ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಾರುತಿ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ನಿಯಂತ್ರಣ ತಪ್ಪಿದ ಟ್ಯಾಂಕರ್‌ ರಸ್ತೆಬದಿಯ ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

- Advertisement -

ಟ್ಯಾಂಕರ್‌ನಲ್ಲಿ ಸ್ಪಿರಿಟ್ ತುಂಬಿದ್ದರಿಂದ, ಡಿಕ್ಕಿ ಹೊಡೆದ ಕೆಲವೇ ಕ್ಷಣಗಳಲ್ಲಿ ವಾಹನಕ್ಕೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ ಮತ್ತು ಬೆಂಕಿಯ ತೀವ್ರತೆ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತ ಹೋಗಿದೆ. ಭಾರಿ ಜ್ವಾಲೆಗಳು ಆವರಿಸಿದ ಪರಿಣಾಮ ಲಾರಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್, ಲಾರಿಯ ಚಾಲಕ ತಕ್ಷಣವೇ ವಾಹನದಿಂದ ಹೊರಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಘಟನೆ ಸಂದರ್ಭದಲ್ಲಿ ಚಾಲಕನ ಚುರುಕುತನದಿಂದ ಜೀವ ಹಾನಿ ತಪ್ಪಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಸಮಯೋಚಿತ ಕಾರ್ಯಾಚರಣೆಯಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ನಿಷೇಧವಿದ್ದರೂ ನಿಲ್ಲದ ಮರಳು ದಂಧೆ; ಎನ್‌ಜಿಟಿ ಆದೇಶಕ್ಕೂ ಕಿಮ್ಮತ್ತಿಲ್ಲ

ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬಳಿಕ ಸಂಚಾರವನ್ನು ಪುನರಾರಂಭಿಸಲಾಗಿದೆ. ಘಟನೆ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...