ಯಲ್ಲಾಪುರ | ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ: ಲಾರಿಗಳ ನಡುವೆ ಸಿಲುಕಿ ತಾಯಿ-ಮಗಳು ದುರ್ಮರಣ

Date:

ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕಾರೊಂದು ಎರಡು ಲಾರಿಗಳ ನಡುವೆ ಸಿಲುಕಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮಹಾರಾಷ್ಟ್ರದ ಪುಣೆ ಮೂಲದ ತಾಯಿ ಹಾಗೂ ಮಗಳು ಮೃತಪಟ್ಟಿದ್ದಾರೆ.

- Advertisement -

ಮೃತರನ್ನು ಪುಣೆಯ ಹಡಪ್ಸರ್‌ನ ತ್ರಿವೇಣಿನಗರ ನಿವಾಸಿಗಳಾದ 59 ವರ್ಷದ ಶರ್ಮಿಳಾ ರಾಜನ್ ಕುಲ್ತೆ ಮತ್ತು ಅವರ 32 ವರ್ಷದ ಮಗಳು ಮೃಣ್ಮಯಿ ರಾಜನ್ ಕುಲ್ತೆ ಎಂದು ಗುರುತಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಹೊಸಪೇಟೆ ಮೂಲದ 55 ವರ್ಷದ ಆಲಂಬಾಷಾ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಘಟನೆಯ ವಿವರ: ಶರ್ಮಿಳಾ ಹಾಗೂ ಮೃಣ್ಮಯಿ ಪ್ರವಾಸದ ಹಿನ್ನೆಲೆಯಲ್ಲಿ ಹೊಸಪೇಟೆಯಿಂದ KA-35/D-8298 ನೋಂದಣಿ ಸಂಖ್ಯೆಯ ಕಾರನ್ನು ಬಾಡಿಗೆಗೆ ಪಡೆದಿದ್ದರು. ಬಾದಾಮಿಯ ಪ್ರವಾಸಿ ತಾಣಗಳನ್ನು ವೀಕ್ಷಿಸಿದ ಬಳಿಕ ಗೋಕರ್ಣದತ್ತ ಪ್ರಯಾಣ ಮುಂದುವರಿಸಿದ್ದರು.

ಭಾನುವಾರ ಸೆಪ್ಟೆಂಬರ್ 6ರಂದು ಸಂಜೆ ಸುಮಾರು 7ರಿಂದ 7.30ರ ವೇಳೆಗೆ ಅರಬೈಲ್ ಘಟ್ಟದ ಬಳಿ ಕಾರು ಸಾಗುತ್ತಿದ್ದಾಗ, ಯಲ್ಲಾಪುರ ಕಡೆಯಿಂದ ಅಂಕೋಲಾ ದಿಕ್ಕಿನಲ್ಲಿ ತೆರಳುತ್ತಿದ್ದ KA-01/AN-1281 ಸಂಖ್ಯೆಯ ಲಾರಿಯೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಹಿಂಬದಿಯಿಂದ ಬಲವಾದ ಹೊಡೆತ ಬಿದ್ದ ಪರಿಣಾಮ ಕಾರು ಮುಂದಕ್ಕೆ ಚಲಿಸಿ, ಎದುರು ಭಾಗದಲ್ಲಿ ಸಾಗುತ್ತಿದ್ದ MH-09/FL-8699 ಸಂಖ್ಯೆಯ ಮತ್ತೊಂದು ಲಾರಿಗೆ ಡಿಕ್ಕಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಪ್ರಜಾ ಸೇವಾ ಆಂದೋಲನಕ್ಕೆ ಉತ್ತಮ ಸ್ಪಂದನೆ: ವಿವಿಧ ಇಲಾಖೆಗಳಿಗೆ 1,383 ಅರ್ಜಿಗಳ ಸಲ್ಲಿಕೆ

ಪರಿಣಾಮ ಕಾರು ಎರಡೂ ಬೃಹತ್ ವಾಹನಗಳ ಮಧ್ಯೆ ಸಿಲುಕಿಕೊಂಡು ತೀವ್ರವಾಗಿ ನಜ್ಜುಗುಜ್ಜಾಗಿದೆ. ಘಟನೆಯ ವೇಳೆ ಸಮೀಪದಲ್ಲಿದ್ದ ಮತ್ತೊಂದು ಕಾರಿಗೂ ಹಾನಿಯಾಗಿರುವುದಾಗಿ ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ತಾಯಿ-ಮಗಳು ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ, ಗಾಯಗೊಂಡ ಚಾಲಕ ಹಾಗೂ ಇಬ್ಬರು ಪ್ರಯಾಣಿಕರನ್ನು ಆಂಬ್ಯುಲೆನ್ಸ್ ಮೂಲಕ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು.

ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಪರಿಶೀಲನೆ ನಡೆಸಿದಾಗ ತಾಯಿ ಮಗಳು ಮಾರ್ಗ ಮಧ್ಯದಲ್ಲಿ ಮೃತಪಟ್ಟಿರುವುದು ದೃಢಪಟ್ಟಿದೆ.

ಅಪಘಾತಕ್ಕೆ ಕಾರಣವಾದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಗಾಯಗೊಂಡ ಕಾರು ಚಾಲಕ ಆಲಂಬಾಷಾ ನೀಡಿದ ದೂರಿನ ಆಧಾರದ ಮೇಲೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ BNS-2023ರ ಕಲಂ 281, 125(2) ಹಾಗೂ 106(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪಘಾತದ ಬಳಿಕ ಸ್ಥಳದಿಂದ ತೆರಳಿರುವ ಲಾರಿ ಚಾಲಕನ ಪತ್ತೆಗೆ ಯಲ್ಲಾಪುರ ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...