ಯಲ್ಲಾಪುರ | ಆರತಿಬೈಲ್ ಬಳಿ ಭೀಕರ ರಸ್ತೆ ಅಪಘಾತ: ಘಟನಾ ಸ್ಥಳಕ್ಕೆ ಡಿಸಿ–ಎಸ್ಪಿ ಆಗಮನ, ಸ್ಥಳ ಪರಿಶೀಲನೆ

Date:

ಯಲ್ಲಾಪುರ: ತಾಲೂಕಿನ ಅರತಿಬೈಲ್ ಬಳಗಾರ ಕ್ರಾಸ್ ಬಳಿ ಇಂದು ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸ್ಥಳಕ್ಕೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಪ್ರವಾಸಕ್ಕೆ ಹೊರಟಿದ್ದ ಒಂಬತ್ತು ಮಂದಿ ಕ್ರೂಸರ್ ವಾಹನದಲ್ಲಿ ಯಲ್ಲಾಪುರದ ಅರಬೈಲ್ ಘಾಟ್ ಮೂಲಕ ಸಾಗುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿಯೊಂದಿಗೆ ಭೀಕರವಾಗಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಒಂಬತ್ತು ಮಂದಿಯಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಆರತಿಬೈಲು ಬಳಿ ಭೀಕರ ಅಪಘಾತ; ಪ್ರವಾಸಕ್ಕೆ ಹೊರಟಿದ್ದ ಧಾರವಾಡದ ಆರು ಮಂದಿ ದುರ್ಮರಣ

ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಸ್ಥಳದ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ದೊರೆಯುವಂತೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಮೃತರ ಕುಟುಂಬಗಳಿಗೆ ಅಗತ್ಯ ನೆರವು ಹಾಗೂ ಎಲ್ಲಾ ರೀತಿಯ ಸಹಕಾರ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಪಘಾತದ ಬಳಿಕ ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ವಾಹನಗಳ ಸಂಚಾರವನ್ನು ನಿಯಂತ್ರಿಸಿ ಸುಗಮಗೊಳಿಸಿದರು. ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಈ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...