ಯಲ್ಲಾಪುರ | ವನ್ಯಜೀವಿಗಳ ಅಂಗಾಂಗ ವಶ ಪ್ರಕರಣ: ಸಮಗ್ರ ತನಿಖೆಗೆ ಸೋಮೇಶ್ವರ ನಾಯ್ಕ ಆಗ್ರಹ

Date:

ಯಲ್ಲಾಪುರ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಅಂಗಾಂಗಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿದ್ದು, ಪ್ರಕರಣದ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು ಎಂದು ಸೋಮೇಶ್ವರ ಮಾದೇವ ನಾಯ್ಕ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಇಂದು ಯಲ್ಲಾಪುರದಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು, 2026ರ ಸೆಪ್ಟೆಂಬರ್ ತಿಂಗಳಲ್ಲಿ ಯಲ್ಲಾಪುರ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಅರಣ್ಯ ಸಂಚಾರಿ ಜಾಗೃತ ದಳದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವನ್ಯಜೀವಿಗಳ ಅಂಗಾಂಗಗಳು ಹಾಗೂ ಅವುಗಳ ಸಾಗಾಟಕ್ಕೆ ಬಳಸಲಾಗಿದೆ ಎನ್ನಲಾದ ವಾಹನಗಳನ್ನು ವಶಪಡಿಸಿಕೊಂಡಿರುವ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಕಾರ್ಯಾಚರಣೆಯಲ್ಲಿ 15.748 ಕೆ.ಜಿ. ತೂಕದ ವನ್ಯಜೀವಿ ಸಂಬಂಧಿತ ವಸ್ತುಗಳು, ಎರಡು ಭಾರತೀಯ ಕಾಡೆಮ್ಮೆಗಳ ಕೊಂಬುಗಳು, ಹುಲಿಯ ಉಗುರುಗಳು ಮತ್ತು ಹಲ್ಲುಗಳು, ಚಿರತೆಯ ಉಗುರುಗಳು ಹಾಗೂ ಹಲ್ಲುಗಳು, ಕಾಡುಹಂದಿಯ ಅಂಗಾಂಗಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ವನ್ಯಜೀವಿಗಳ ಅಂಗಾಂಗಗಳ ಸಾಗಾಟಕ್ಕೆ ಬಳಸಲಾಗಿದೆ ಎನ್ನಲಾದ ದ್ವಿಚಕ್ರ ವಾಹನ ಹಾಗೂ ಸ್ಕೂಟರ್‌ನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಅರಣ್ಯ ಇಲಾಖೆ ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾಗಿ ಗಣೇಶ ಮೊಗೇರ ನೇಮಕ

ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇಬ್ಬರು ವ್ಯಕ್ತಿಗಳನ್ನು ಯಲ್ಲಾಪುರದಲ್ಲಿ ಬಂಧಿಸಲಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಆದರೆ, ಇಷ್ಟೊಂದು ಪ್ರಮಾಣದ ವನ್ಯಜೀವಿಗಳ ಅಂಗಾಂಗಗಳು ಎಲ್ಲಿಂದ ಬಂದವು ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆದಿದೆಯೇ ಎಂಬ ಪ್ರಶ್ನೆಯನ್ನು ಅವರು ಎತ್ತಿದ್ದಾರೆ.

ಹುಲಿ, ಕಾಡೆಮ್ಮೆ, ಚಿರತೆ ಹಾಗೂ ಕಾಡುಹಂದಿಗಳ ಅಂಗಾಂಗಗಳು ಸ್ಥಳೀಯ ಅರಣ್ಯ ಪ್ರದೇಶಗಳಿಂದಲೇ ಸಂಗ್ರಹವಾಗಿವೆಯೇ ಅಥವಾ ಬೇರೆ ರಾಜ್ಯಗಳಿಂದ ಸಾಗಾಟ ಮಾಡಲಾಗಿದೆಯೇ ಎಂಬುದನ್ನು ಪತ್ತೆಹಚ್ಚಬೇಕಿದೆ. ವನ್ಯಜೀವಿಗಳ ಹತ್ಯೆ ನಡೆದಿದ್ದರೆ ಅದರ ಹಿಂದಿರುವ ವ್ಯಕ್ತಿಗಳು ಯಾರು? ಅಂಗಾಂಗಗಳ ಸಂಗ್ರಹ ಮತ್ತು ಸಾಗಾಟದ ಹಿಂದೆ ದೊಡ್ಡ ಜಾಲವೇನಾದರೂ ಕಾರ್ಯನಿರ್ವಹಿಸುತ್ತಿದೆಯೇ ಎಂಬ ಬಗ್ಗೆಯೂ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಯಲ್ಲಾಪುರ ಮತ್ತು ಇಡಗುಂದಿ ವಲಯ ವ್ಯಾಪ್ತಿಯಲ್ಲಿ ಸತತ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೂ ಅವುಗಳನ್ನು ತಡೆಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದಾರೆಯೇ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟದ ಕ್ರಮಕ್ಕೆ ಸೀಮಿತವಾಗದೆ, ವನ್ಯಜೀವಿಗಳ ಅಂಗಾಂಗಗಳ ಮೂಲ, ಅವುಗಳ ಸಂಗ್ರಹ, ಸಾಗಾಟ ಮತ್ತು ಮಾರಾಟದ ಹಿಂದಿರುವ ಜಾಲದ ಬಗ್ಗೆ ತನಿಖೆ ನಡೆಸಬೇಕು. ಅಧಿಕಾರಿಗಳ ಕರ್ತವ್ಯ ನಿರ್ವಹಣೆಯ ಬಗ್ಗೆಯೂ ಪರಿಶೀಲನೆ ನಡೆಸಿ, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಮೂಲಕ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು. ತನಿಖೆಯಲ್ಲಿ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಸೋಮೇಶ್ವರ ಮಾದೇವ ನಾಯ್ಕ ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನಗರ ಮಹಾಶಕ್ತಿ ಕೇಂದ್ರದ ಬಿಜೆಪಿ ಅಧ್ಯಕ್ಷ ಸೋಮೇಶ್ವರ ನಾಯ್ಕ್, ರವೀಂದ್ರ ನಗರ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್ ನಾಯ್ಕ್, ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಹೆಗಡೆ, ರವೀಂದ್ರ ನಗರದ ಬಿಜೆಪಿ ಬೂತ್ ಅಧ್ಯಕ್ಷ ಗಿರೀಶ್ ಬೋವಿ ಹಾಗೂ ಬಿಜೆಪಿ ಬೂತ್ ಕಾರ್ಯದರ್ಶಿ ಕಾರ್ತಿಕ್ ನಾಯ್ಕ್ ಉಪಸ್ಥಿತರಿದ್ದರು.

+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಡಿಸಿ ಶಿವಪ್ಪ ಭಜಂತ್ರಿ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

ರಾಯಚೂರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ, ಗ್ರೇಡ್-1 ತಹಶೀಲ್ದಾರ್ ಸುರೇಶ್ ವರ್ಮಾ,...

ಚಿಕ್ಕಮಗಳೂರು | ತಮ್ಮದೇ ಸಮುದಾಯದರಿಂದ ಬಹಿಷ್ಕಾರಗೊಂಡ ಐದು ಕುಟುಂಬ! 

ಗ್ರಾಮಗಳಲ್ಲಿ ಎಲ್ಲಾ ಗ್ರಾಮಸ್ಥರು ಅಣ್ಣ ತಮ್ಮಂದಿರು ಹಾಗೂ ಅಕ್ಕ ತಂಗಿಯರ ಹಾಗಿರುತ್ತಾರೆ....

ಹಾವೇರಿ | ಹೆಣ್ಣು ಬೋಗದ ವಸ್ತುವಲ್ಲ, ಸ್ತ್ರೀ ಶೋಷಣೆ ಕೊನೆಗೊಳ್ಳಲಿ: ಸಂಕಮ್ಮ ಸಂಕಣ್ಣನವರ

"ಮಹಿಳೆಯರ ಮೇಲಿನ ಶೋಷಣೆ, ದೌರ್ಜನ್ಯ, ತಾರತಮ್ಯ ಹಾಗೂ ಲಿಂಗಾಧಾರಿತ ಅಸಮಾನತೆಗಳನ್ನು ಕೊನೆಗೊಳಿಸಿ,...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...