ಚನ್ನಪಟ್ಟಣ | ಬಾಡೂಟದ ಆಸೆಯಲ್ಲಿದ್ದ ಯೋಗೇಶ್ವರ್ ಬೆಂಬಲಿಗರಿಗೆ ನಿರಾಸೆ; ತಯಾರಾಗಿದ್ದ ಊಟ ವಶಕ್ಕೆ!

Date:

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇತ್ತೀಚೆಗಷ್ಟೇ ಘೋಷಣೆ ಮಾಡಿದೆ. ಅದರಂತೆ ಹೈವೋಲ್ಟೇಜ್ ಕ್ಷೇತ್ರ ಅಂತಲೇ ಬಿಂಬಿತವಾಗಿರುವ ಚನ್ನಪಟ್ಟಣ ಉಪಚುನಾವಣಾ ಅಖಾಡದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದಿದೆ. ಜನರಿಗೆ ಹಂಚಲು ತಯಾರು ಮಾಡಿಟ್ಟಿದ್ದ ಬಿರಿಯಾನಿಯನ್ನು ಚುನಾವಣಾ ಅಧಿಕಾರಿಗಳು ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವಶಪಡಿಸಿಕೊಂಡಿದ್ದಾರೆ.

- Advertisement -

ನೀತಿ ಸಂಹಿತೆ ಜಾರಿಯಾದ ಬಳಿಕ ರಾಜಕೀಯ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಸಿ ಪಿ ಯೋಗೇಶ್ವರ್ ಟಿಕೆಟ್ ವಿಚಾರವಾಗಿ ಈ ಒಂದು ಸಭೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಖಚಿತ ಮಾಹಿತಿಯ ಮೇರೆಗೆ ಚನ್ನಪಟ್ಟಣದ ರೆಸಾರ್ಟ್ ಮೇಲೆ ರಾಮನಗರ ರಾಮನಗರ ಚುನಾವಣಾ ಅಧಿಕಾರಿ ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
ಊಟ 1

ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನೇತೃತ್ವದಲ್ಲಿ ಚನ್ನಪಟ್ಟಣದ ರೆಸಾರ್ಟ್‌ನಲ್ಲಿ ಕರೆಯಲಾಗಿದ್ದ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ 3 ಸಾವಿರಕ್ಕೂ ಹೆಚ್ಚು ಮಂದಿಗೆ ಸಿದ್ಧವಾಗಿದ್ದ ಬಿರಿಯಾನಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚುನಾವಣಾ ಅಧಿಕಾರಿಯಾದ ಉಪವಿಭಾಗಾಧಿಕಾರಿ ಬಿನೋಯ್ ನೇತೃತ್ವದಲ್ಲಿ ದಾಳಿಮಾಡಿದ ಅಧಿಕಾರಿಗಳು ಬಿರಿಯಾನಿ ವಶಕ್ಕೆ ಪಡೆದುಕೊಂಡಿದ್ದಾರೆ.

ಅಧಿಕಾರಿಗಳು ಅಡುಗೆ ಕೋಣೆಗೆ ತೆರಳಿ ಬಾಗಿಲು ಬಂದ್ ಮಾಡಿದ್ದು ಅಡುಗೆ ಸಿದ್ಧತೆಯನ್ನು ತಡೆದಿದ್ದಾರೆ. ನಂತರ ಊಟದ ಕೋಣೆಯತ್ತ ಹೋಗುತ್ತಿದ್ದ ಕಾರ್ಯಕರ್ತರನ್ನು ತಡೆದು, ಚುನಾವಣೆ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಊಟವನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದರು. ಊಟದ ವ್ಯವಸ್ಥೆ ನಡೆಸಿದ್ದರಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ನಿರಾಸೆಗೊಂಡರು.

ಊಟ1

ಸುಮಾರು 500 ಜನರಿಗಾಗಿ ರೆಡಿಯಾಗುತ್ತಿದ್ದ ಬಾಡೂಟ ಸಂಪೂರ್ಣವಾಗಿ ವಶಕ್ಕೆ ಪಡೆಯಲಾಗಿದೆ. ಬಿಜೆಪಿ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟಕ್ಕೆ ಮುದ್ದೆ ಅನ್ನ ಸಾಂಬರ್ ರೆಡಿ ಮಾಡುತ್ತಿದ್ದು ಬೆಳಕಿಗೆ ಬಂದಿದೆ. ಅಲ್ಲದೆ, ಮಟನ್ ಬೋಟಿ, ಮಟನ್ ಸುಕ್ಕ, ಚಿಕನ್ ಬಿರಿಯಾನಿ ಚಿಕನ್ ಕಬಾಬ್, ಘೀ ರೈಸ್ ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುವುದು ಖಚಿತ: ಸಿ.ಪಿ. ಯೋಗೇಶ್ವರ್

“ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುವುದು ಖಚಿತ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಟಿಕೆಟ್ ನೀಡುವುದು ನನ್ನ ಮೇಲೆ ನಿರ್ಧಾರವಾಗಲಿದ್ದು, ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಘೋಷಿಸಲಾಗುವುದು” ಎಂದು ಸಿ.ಪಿ. ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...