ಚಾರಣಕ್ಕೆಂದು ತೆರಳಿದ್ದ ಹರಿಯಾಣ ಮೂಲದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಬಳಿ ನಡೆದಿದೆ.
ಹರಿಯಾಣ ಮೂಲದ ಜತಿನ್ ಕುಮಾರ್ (25) ಮೃತ ದುರ್ದೈವಿ. ಆತ ತನ್ನ ಸ್ನೇಹಿತರೊಂದಿಗೆ ನಾಪೋಕ್ಲು ಬಳಿಯ ಕಕ್ಕಬ್ಬೆ ತಡಿಯಂಡಮೋಳು ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದರು. ಈ ವೇಳೆ, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಜತಿನ್ ಉದ್ಯೋಗಿಯಾಗಿದ್ದರು. ವಾರಾತ್ಯದ ರಜೆ ಇದ್ದ ಕಾರಣ ಭಾನುವಾರ ತನ್ನ ಐವರು ಸಹೋದ್ಯೋಗಿಗಳೊಂದಿಗೆ ಮಡಿಕೇರಿ ಬಂದಿದ್ದರು.
ಕ್ಕಬ್ಬೆ ತಡಿಯಂಡಮೋಳು ಬೆಟ್ಟ ಹತ್ತಿದ ಬಳಿಕ ಆತನಿಗೆ ಎದೆನೋವು ಕಾಣಿಸಿಕೊಂಡಿದೆ. ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಅರಣ್ಯ ಇಲಾಖೆಯ ಅಧಿಕಾರಿ ಸುರೇಶ್ ಹಾಗೂ ಸಿಬ್ಬಂದಿಗಳು ತೆರಳಿ ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.