ಚಿಕ್ಕಮಗಳೂರು | ಶಾಸಕರ ಅಭಿನಂದನಾ ಕಾರ್ಯಕ್ರಮದಲ್ಲಿ ಗಲಾಟೆ, ಯುವಕನ ಹತ್ಯೆ

Date:

  • ತರೀಕೆರೆ ಕಾಂಗ್ರೆಸ್ ಶಾಸಕ ಜಿ ಎಚ್‌ ಶ್ರೀನಿವಾಸ್ ಅವರಿಗೆ ಅಭಿನಂದನೆ ಸಮಾರಂಭ
  • ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆರಂಭ

ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮದ ವೇಳೆ ಉಂಟಾದ ಗಲಾಟೆಯಲ್ಲಿ ಓರ್ವ ಯುವಕ ಹತ್ಯೆಯಾಗಿರುವ ಘಟನೆ ತರೀಕೆರೆ ಪಟ್ಟಣದಲ್ಲಿ ಶನಿವಾರ ರಾತ್ರಿ 11.30ರ ಸುಮಾರಿಗೆ ನಡೆದಿದೆ.

ಮೃತರನ್ನು ವರುಣ್ (28) ಎಂದು ಗುರುತಿಸಲಾಗಿದೆ. ಕಬಾಬ್ ಮೂರ್ತಿ ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಕಾಂಗ್ರೆಸ್ ಶಾಸಕ ಜಿ ಎಚ್‌ ಶ್ರೀನಿವಾಸ್ ರಿಗೆ ಅವರ ಅಭಿಮಾನಿಗಳು ಶನಿವಾರ ತರೀಕೆರೆಯಲ್ಲಿ ಅಭಿನಂದನೆ ಸಮಾರಂಭವನ್ನು ಏರ್ಪಡಿಸಿದ್ದರು. ಶಾಸಕರಿಗೆ ಅಭಿನಂದನೆ ಮುಗಿದ ಬಳಿಕ ಆರ್ಕೆಸ್ಟ್ರಾ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಹಾಡು ಬದಲಿಸುವ ವಿಚಾರದಲ್ಲಿ ವರುಣ್ ಮತ್ತು ಕಬಾಬ್ ಮೂರ್ತಿ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.

ಚಿಕ್ಕಮಗಳೂರು 01
ಹತ್ಯೆಯಾದ ಯುವಕ ವರುಣ್‌

ಕ್ಷುಲ್ಲಕ ವಿಚಾರದಲ್ಲಿ ಇವರಿಬ್ಬರ ನಡುವಿನ ವಾಗ್ವಾದ ತಾರಕಕ್ಕೇರಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ಉಂಟಾಗಿದೆ. ಆ ಬಳಿಕ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ವರುಣ್‌ನ ಹೊಟ್ಟೆ ಮತ್ತು ಪಕ್ಕೆಲುಬಿಗೆ ಆರೋಪಿ ಕಬಾಬ್ ಮೂರ್ತಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಗೃಹಲಕ್ಷ್ಮಿ ಯೋಜನೆ | ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರತಾಪ್ ಸಿಂಹ

ತೀವ್ರವಾಗಿ ಗಾಯಗೊಂಡಿದ್ದ ವರುಣ್ ನನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಇದೇವೇಳೆ ಮಂಜು ಹಾಗೂ ಸಂಜು ಎಂಬವರಿಗೂ ಚೂರಿ ಇರಿತದಿಂದ ಗಾಯಗಳಾಗಿವೆ.

ಈ ಬಗ್ಗೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು...

ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು,...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ...