ದಕ್ಷಿಣ ಕನ್ನಡ | 24 ಪುಟಗಳ ಡೆತ್‌ನೋಟ್ ಬರೆದು ಯುವತಿ ಆತ್ಮಹತ್ಯೆ

Date:

ಯುವತಿಯೊಬ್ಬರು 24 ಪುಟಗಳ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.

- Advertisement -

ಅಶ್ವಿನಿ ಬಂಗೇರ (25) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಮೂಲತಃ ಬಂಟ್ವಾಳ ತಾಲೂಕಿನ ಫರಂಗಿಪೇಟೆಯವರಾದ ಅಶ್ವಿನಿ, ಕುಂಪಲ ಚಿತ್ರಾಂಜಲಿ ನಗರದಲ್ಲಿ ಇತ್ತೀಚೆಗೆ ಮನೆ ಖರೀದಿಸಿದ್ದರು. ಐದು ದಿನಗಳ ಹಿಂದೆಯಷ್ಟೇ ಗೃಹಪ್ರವೇಶ ಕಾರ್ಯಕ್ರಮ ಕೂಡ ಮಾಡಿದ್ದರು. ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರು. ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬುಧವಾರ ರಾತ್ರಿ ತನ್ನ ಸ್ನೇಹಿತೆಯೊಂದಿಗೆ ಅಶ್ವಿನಿ ಚಾಟ್‌ ಮಾಡಿದ್ದರು ಎಂದು ತಿಳಿದುಬಂದಿದೆ. ಸ್ನೇಹಿತೆ ಬೆಳಗ್ಗೆ ಬಂದು ಬಾಗಿಲು ಹೊಡೆದು ನೋಡಿದಾಗ, ಅಶ್ವಿನಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅಶ್ವಿನಿ 24 ಪುಟಗಳ ಡೆತ್‌ನೋಟ್‌ ಬರೆದಿಟ್ಟಿದ್ದು, ತಾನು ಮನೆ ಖರೀದಿಯಲ್ಲಿ ಮೋಸಹೋಗಿದ್ದೇನೆ. ಬ್ಯಾಂಕ್‌ ಅಧಿಕಾರಿಗಳು ಬಂದು ಪೀಡಿಸುತ್ತಾರೆ ಎಂದು ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದ ಅಶ್ವಿನಿ‌ ಖಿನ್ನತೆಗೆ ಒಳಗಾಗಿದ್ದರು. ಹಾಗಾಗಿಯೇ, ಆತ್ಮಹತ್ಯೆಗೆ ಬಲಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತ ದೇಹವನ್ನು ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...