ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯುವತಿ ಸಾವು: ಬಸವರಾಜ ಬೊಮ್ಮಾಯಿ

Date:

ಬೆಂಗಳೂರು ನಗರದಲ್ಲಿ ಕೆಲವೇ ಗಂಟೆಗಳ ಕಾಲ ಸುರಿದ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದೆ. ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿ ಅಧಿಕಾರಿಗಳು ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಘಟನೆ ನಡೆದ ಕೂಡಲೇ ಸ್ಥಾಳಕ್ಕೆ ಧಾವಿಸಿ ರಕ್ಷಣೆ ಮಾಡುವ ಕೆಲಸ ಬಿಬಿಎಂಪಿ ಮಾಡಲಿಲ್ಲ” ಎಂದು ಆರೋಪ ಮಾಡಿದರು.

“ನಾವು ಬೆಂಗಳೂರಿನಲ್ಲಿ ಎಸ್‌ಡಿಆರ್‌ಎಫ್ ತಂಡಗಳನ್ನು ರಚಿಸಿದ್ದೇವೆ. ಈ ತಂಡಗಳಿಗೆ ಚಾಲನೆ ಕೊಟ್ಟು ಕೆಲಸಕ್ಕೆ ಹಚ್ಚುವ ಕೆಲಸ ಆಗಬೇಕು. ಇನ್ನೂ ಐದು ದಿನ ಮಳೆ ಆಗಲಿದೆ ಎಂಬ ಮುನ್ಸೂಚನೆ ಇದೆ. ವ್ಯವಸ್ಥಿತವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಸರ್ಕಾರದ ಮೇಲಿನ 40% ಕಮಿಷನ್ ಆರೋಪ, ಪಿಎಸ್ಐ ಪ್ರಕರಣ ತನಿಖೆ ಮಾಡಲಿ: ಸಿಎಂ ಬೊಮ್ಮಾಯಿ‌ ಆಗ್ರಹ

“ಬೆಂಗಳೂರು ನಗರದಲ್ಲಿ ಸಿಕ್ಕಾಪಟ್ಟೆ ಮರಗಳು ಬಿದ್ದಿವೆ. ಬಿದ್ದ ಮರಗಳನ್ನು ತೆರವುಗೊಳಿಸುವ ಕೆಲಸ ಆಗಿಲ್ಲ. ಮುಂದಿನ ಐದು ದಿನ ಹೀಗೇ ಬಿಟ್ಟರೆ ಬೆಂಗಳೂರು ಬಹಳ ಅಸ್ತವ್ಯಸ್ತ ಆಗಲಿದೆ. ಪರಿಹಾರ ಕ್ರಮಗಳನ್ನು ಆಧ್ಯತೆಯಿಂದ ಸಿಎಂ ಮಾಡಬೇಕಿದೆ. ಬಿಬಿಎಂಪಿ ಅಧಿಕಾರಿಗಳು‌ ಕೆಲಸ ಮಾಡೋರು ಮಾಡ್ತಾರೆ, ಮಾಡದಿರೋರು ಮಾಡಲ್ಲ. ಪ್ಲಾನ್ ಪ್ರಕಾರ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ” ಎಂದು ಹೇಳಿದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್...

ಲೋಕಸಭೆ ಹಣಾಹಣಿ -2024 | 5 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90 ಮತದಾನ

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ...

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...