ವಿಜಯಪುರ | ಎಕ್ಸಿಬಿಷನ್‌ನಲ್ಲಿ ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು; ಐವರ ಬಂಧನ

Date:

ವಿಜಯಪುರದಲ್ಲಿ ದಸರಾ ಹಬ್ಬದ ಪ್ರಯುಕ್ತ ಎಕ್ಸಿಬಿಷನ್ ನಡೆಸಲಾಗುತ್ತಿದೆ. ಎಕ್ಸಿಬಿಷನ್‌ನಲ್ಲಿ ಆಟವಾಡಲು ತೆರಳಿದ್ದ ಯುವತಿಯೊಬ್ಬರು ರೇಂಜರ್ ಸ್ವಿಂಗ್‌ನಿಂದ ಬಿದ್ದ ಸಾವನ್ನಪ್ಪಿದ್ದಾರೆ. ಆಕೆಯ ಸಾವಿನ ಪ್ರಕರಣದಲ್ಲಿ ಎಕ್ಸಿಬಿಷನ್‌ ನಡೆಸುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ವಿಜಯಪುರದ ಫಿಶ್ ಟನಲ್ ಎಕ್ಪೋದಲ್ಲಿ ಎಕ್ಸಿಬಿಷನ್ ನಡೆಯುತ್ತಿದೆ. 21 ವರ್ಷದ ನಿಖಿತಾ ಬಿರಾದರ್ ತಮ್ಮ ಕುಟುಂಬದೊಂದಿಗೆ ಎಕ್ಸಿಬಿಷನ್ ನೋಡಲು ತೆರಳಿದ್ದವು. ಈ ವೇಳೆ, ನಿಖಿತಾ ಮತ್ತು ಆಕೆಯ ಸ್ನೇಹಿತೆ ತಲೆ ಕೆಳಗಾಗಿ ತಿರುಗಿಸುವ ರೇಂಜರ್ ಸ್ವಿಂಗ್‌ನಲ್ಲಿ ಆಟವಾಡಲು ಹೋಗಿದ್ದರು. ರೇಂಜರ್ ಸ್ಟಿಂಗ್ ತಿರುಗಲು ಆರಂಭಿಸುತ್ತಿದ್ದಂತೆ ನಿಖಿತಾ ಸೇರಿ ಹಲವರು ಕಿರುಚಾಡಿದ್ದಾರೆ. ಮಿಷನ್‌ಅನ್ನು ನಿಲ್ಲಿಸುವಂತೆ ಕೂಗಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಆದರೂ, ರೇಂಜರ್ ಸ್ವಿಂಗ್ ಆಪರೇಟರ್‌ಗಳು ಅವರ ಮಾತನ್ನು ನಿರ್ಲಕ್ಷಿಸಿದ್ದಾರೆ. ಆದೇ ಸಮಯದಲ್ಲಿ, ನಿಖಿತಾಗೆ ಹಾಕಲಾಗಿದ್ದ ಸೇಫ್ಟಿ ಬೆಲ್ಟ್‌ ಸಡಿಲಗೊಂಡು, ಕಳಚಿಕೊಂಡಿದೆ. ಪರಿಣಾಮ ಆಕೆ ಸ್ವಿಂಗ್‌ನಿಂದ ಕೆಳಗೆ ಬಿದ್ದಿದ್ದು, ತಲೆ ಹಾಗೂ ಕಾಲುಗಳಿಗೆ ಗಂಭೀರ ಗಾಯವಾಗಿದೆ. ಆಕೆಯನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಸಾವನ್ನಪ್ಪಿದ್ದಾರೆ.

ದುರ್ಘಟನೆಗೆ ಫೀಶ್ ಟನಲ್ ಎಕ್ಪೋ ಮ್ಯಾನೇಜ್ಮೆಂಟ್‌ನ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಲಾಗಿದೆ. ವಿಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಕ್ಸ್ಪೋ ಮ್ಯಾನೇಜರ್, ಆಪರೇಟರ್, ಕ್ಯಾಷಿಯರ್ ಸೇರಿದಂತೆ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ‘ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ’

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಸಮರ್ಪಕವಾಗಿ ಅನುಷ್ಠಾನಗೊಳ್ಳುವುದರ ಜತೆಗೆ ಕಲ್ಯಾಣ ಕರ್ನಾಟಕದಲ್ಲಿನ...

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...