ಅಂಡರ್‌ಪಾಸ್‌ಗೆ ಯುವತಿ ಬಲಿ; ಸಂತ್ರಸ್ತ ಕುಟುಂಬಕ್ಕೆ ಸಿಎಂ ಸಾಂತ್ವನ

Date:

ಬೆಂಗಳೂರಿನ ಕೆ.ಆರ್ ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನುರೇಖಾ ಅವರ ಕುಟುಂಬವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ತಕ್ಷಣ ದಾಖಲಿಸಿಕೊಳ್ಳದೆ ವಿಳಂಬ ಮಾಡಿದರು ಎಂದು ಆರೋಪಿಸಲಾಗಿದ್ದು, ಆ ಕುರಿತು ತನಿಖೆಗೆ ಸಿದ್ದರಾಮಯ್ಯ ಆದೇಶಿದ್ದಾರೆ.

ಮಳೆ ಅನಾಹುತದ ಮಾಹಿತಿ ದೊರೆಯುತ್ತಿದ್ದಂತೆ ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರು ಮತ್ತು ಬಿಬಿಎಂಪಿ ಆಯುಕ್ತರ ಜತೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಮಳೆಯಿಂದ ಉರುಳಿ ಬಿದ್ದಿರುವ ಮರಗಳನ್ನು ತಕ್ಷಣ ತೆರವುಗೊಳಿಸಬೇಕು, ಮಳೆ ಅನಾಹುತದಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರಿ ಸಾರ್ವಜನಿಕರಿಗೆ ತೊಂದರೆ ಆದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ...

ಶಾಲೆ ಆರಂಭದ ದಿನ | ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ಸಿಹಿ ತಿನಿಸು ಕಡ್ಡಾಯ

ಹೊಸ ಶೈಕ್ಷಣಿಕ ವರ್ಷದಲ್ಲಿ 224 ದಿನ ಕಾರ್ಯನಿರ್ವಹಿಸಲಿರುವ ಶಾಲೆಗಳು ಜೂನ್ 1ರಿಂದ ಶಿಕ್ಷಕರು...

ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ 'ಪನಿಶ್ಮೆಂಟ್ ಮಾಡೋದು ದೊಡ್ಡ...

ಟಿ.ನರಸೀಪುರ ಬಳಿ ಭೀಕರ ಅಪಘಾತ | 10 ಮಂದಿ ಸಾವು; ಹಲವರಿಗೆ ಗಂಭೀರ ಗಾಯ

ಮೈಸೂರು ಜಿಲ್ಲೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ- ಟಿ.ನರಸೀಪುರ...