ಕಾಲೇಜಿಗೆ ಹೋಗು ಎಂದು ಬುದ್ದಿ ಹೇಳಿದ್ದಕ್ಕೆ ಯುವತಿ ಬಾವಿಗೆ ಹಾರಿ ಸಾವನ್ನಪ್ಪಿದ್ದು, ಅಕೆಯನ್ನು ಕಾಪಾಡಲು ಹೋದ ಅಣ್ಣನೂ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆಸಿದ್ದು, ತಂಗಿ ನಂದಿನಿ(18), ಅಣ್ಣ ಸಂದೀಪ್(21) ಸಾವನ್ನಪ್ಪಿದ್ದಾರೆ.
ನಂದಿನಿ ಕಾಲೇಜಿಗೆ ಹೋಗಿರಲಿಲ್ಲ. ಹೀಗಾಗಿ, ಕಾಲೇಜಿಗೆ ಹೋಗುವಂತೆ ಆಕೆಗೆ ಅಣ್ಣ ಸಂದೀಪ್ ಬುದ್ದಿ ಹೇಳಿದ್ದಾನೆ. ಇದರಿಂದ ನೊಂದ ನಂದಿನಿ, ಮನೆ ಬಳಿಯಿದ್ದ ಬಾವಿಗೆ ಹಾರಿದ್ದಾಳೆ. ಆಕೆಯನ್ನು ರಕ್ಷಿಸಲು ಸಂದೀಪ್ ಕೂಡ ಬಾವಿಗೆ ಇಳಿದಿದ್ದು, ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಚಿಂಚೋಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.