ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ: ಆರಗ ವಿರುದ್ಧ ಪ್ರಿಯಾಂಕ್‌ ಕಿಡಿ

Date:

ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

- Advertisement -

‘ಕಲ್ಯಾಣ ಕರ್ನಾಟಕದ ಜನರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೆ ಗೊತ್ತಾಗುತ್ತೆ’ ಎಂದಿದ್ದ ಆರಗ ಜ್ಞಾನೇಂದ್ರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್‌ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಆರಗ ಜ್ಞಾನೇಂದ್ರ ಅವರೇ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು” ಎಂದು ಹೇಳಿದ್ದಾರೆ.

“ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ. ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ” ಎಂದಿದ್ದಾರೆ.

“ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ. ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ. ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...