ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ: ಆರಗ ವಿರುದ್ಧ ಪ್ರಿಯಾಂಕ್‌ ಕಿಡಿ

Date:

ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

- Advertisement -

‘ಕಲ್ಯಾಣ ಕರ್ನಾಟಕದ ಜನರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೆ ಗೊತ್ತಾಗುತ್ತೆ’ ಎಂದಿದ್ದ ಆರಗ ಜ್ಞಾನೇಂದ್ರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್‌ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

“ಆರಗ ಜ್ಞಾನೇಂದ್ರ ಅವರೇ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು” ಎಂದು ಹೇಳಿದ್ದಾರೆ.

“ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ. ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ” ಎಂದಿದ್ದಾರೆ.

“ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ. ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ. ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲ” ಎಂದಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ ಹಳೆಯ ಕಾರ್ಮಿಕ ಕಾಯ್ದೆಗಳನ್ನು ಮರುಸ್ಥಾಪಿಸಲು ಆಗ್ರಹ

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ರದ್ದಾಗಿರುವ...

ಕೋಲಾರ | ಎಷ್ಟೇ ಖರ್ಚಾದರೂ ಪರವಾಗಿಲ್ಲ; ನಾನೇ ನಗರ ಸ್ವಚ್ಛಗೊಳಿಸುತ್ತೇನೆ : ಶಾಸಕ ಕೊತ್ತೂರು ಮಂಜುನಾಥ್ ಗರಂ

ನಗರದಲ್ಲಿ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿದ್ದು, ನಗರಸಭೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ....

ಶಿವಮೊಗ್ಗ | ಇಂದಿನಿಂದ ಭದ್ರಾ ಜಲಾಶಯದ ಎರಡೂ ನಾಲೆಗೆ ನೀರು ಬಿಡಲು ತೀರ್ಮಾನ

ಭದ್ರಾ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...