ಚಾಮರಾಜನಗರ | ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿದ ಯುವಕ ಸೆರೆ; ಮಸಣಾಪುರದಲ್ಲಿ ಉದ್ವಿಗ್ನತೆ

Date:

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಬಳಿದು ಅವಮಾನಿಸಲು ಯತ್ನಿಸುತ್ತಿದ್ದ ಯುವಕನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಮಸಣಾಪುರ ಗ್ರಾಮದಲ್ಲಿ ಭಾನುವಾರ ಮುಂಜಾನೆ ನಡೆದಿದೆ.

- Advertisement -

ತಾಲೂಕಿನ ಮಸಣಾಪುರ ಗ್ರಾಮದ ಅನ್ಯಕೋಮಿನ ಚಂದ್ರು ಎಂಬಾತ ಬೆಳಿಗ್ಗೆ ಸುಮಾರು 4.30ರ ವೇಳೆಗೆ ಗ್ರಾಮದಲ್ಲಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಬಳಿಯುತ್ತಿರುವ ವೇಳೆ ಸ್ಥಳೀಯರ ಗಮನಕ್ಕೆ ಬಂದಿದ್ದಾನೆ. ಕೂಡಲೇ ಗ್ರಾಮಸ್ಥರು ಆತನನ್ನು ಹಿಡಿದು ಸಮೀಪದ ವಿದ್ಯುತ್ ಕಂಬಕ್ಕೆ ಕಟ್ಟಿ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಘಟನೆಯ ಸುದ್ದಿ ಹರಡುತ್ತಿದ್ದಂತೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಸಮಾಜ ವಿರೋಧಿ ಕೃತ್ಯಗಳು ಮರುಕಳಿಸದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಕಾರ್ಯ ಕೈಗೊಂಡರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಘಟನೆಯ ಕುರಿತು ಮಾಹಿತಿ ಸಂಗ್ರಹಿಸಿದರು. ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಘಟನೆಯನ್ನು ದಲಿತ ಸಮುದಾಯದ ಯುವಕರು ಹಾಗೂ ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದು, ಆರೋಪಿಯ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಂಡು ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವಿಶೇಷ ಸುದ್ದಿ ಓದಿದ್ದೀರಾ?ಎಸ್‌ಐಆರ್ ಪ್ರಕ್ರಿಯೆ ಪ್ರಜಾಪ್ರಭುತ್ವಕ್ಕೆ ಸವಾಲು: ಲಕ್ಷಾಂತರ ಮತದಾರರ ಹಕ್ಕು ಕಸಿಯುವ ಹುನ್ನಾರ

ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದು, ಘಟನೆಯ ನಿಖರ ಕಾರಣ ಹಾಗೂ ಹಿನ್ನೆಲೆಯನ್ನು ಪರಿಶೀಲಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...