ಉದಯ್ ಭಾನು ಚಿಬ್ ಬಂಧನಕ್ಕೆ ಯುವ ಕಾಂಗ್ರೆಸ್ ಖಂಡನೆ

Date:

ಕೋಲಾರ: ಕಳೆದ ವಾರ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಭಾರತ್ ಮಂಟಪದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಅರೆನಗ್ನ ಪ್ರತಿಭಟನೆಗೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಬಂಧನವನ್ನು ಯುವ ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಸೈಯದ್ ಆಫ್ರೀದ್ ತೀವ್ರವಾಗಿ ಖಂಡಿಸಿ ಕೂಡಲೇ ಬಿಡುಗಡೆಗೆ ಒತ್ತಾಯಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು ದೇಶದಲ್ಲಿ ನರೇಂದ್ರ ಮೋದಿಯವರ ಅಣತೆಯಂತೆ ದೆಹಲಿ ಪೊಲೀಸರು ನಡೆದುಕೊಂಡಿದ್ದಾರೆ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನದ ಕ್ರಮದ ವಿರುದ್ಧವಾಗಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ ಕೂಡಲೇ ಯುವ ಕಾಂಗ್ರೆಸ್ ಮುಖಂಡರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಭಾರತ ದೇಶದ ಸಂವಿಧಾನದ ಪ್ರಕಾರ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿದಂತೆ ಇತರರು ಪ್ರತಿಭಟನೆ ನಡೆಸಿದ್ದಾರೆ ಅದನ್ನೇ ನೆಪ ಮಾಡಿಕೊಂಡು ಬಂಧಿಸಿದ್ದು ಸಂವಿಧಾನ ಬಾಹಿರವಾಗಿದ್ದು ಪ್ರತಿಭಟಿಸುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಅದನ್ನು ದಮನ ಮಾಡಲು ಮೋದಿ ಸರ್ಕಾರವು ಮುಂದಾಗಿದೆ ಸಾಮಾನ್ಯ ಜನರರ ಪರ ಧ್ವನಿ ಎತ್ತುವುದನ್ನು ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ಸಾಧ್ಯವಾಗಿದೆ ಎಂದರು.

ಇದನ್ನು ಓದಿದ್ದೀರಾ..?ಕುಂಬಾರ ಮಹಾಸಭಾ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾಗಿ ಡಾ.ಕೆ.ನಾಗರಾಜ್ ನೇಮಕ

ದೇಶದಲ್ಲಿ ಯುವಕರ ಉದ್ಯೋಗ ಪರಿಸ್ಥಿತಿ ಗಂಭೀರವಾಗಿದೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಂದು ಹೇಳಿದ ಮೋದಿ ಸರ್ಕಾರವು ಕಳೆದ 11 ವರ್ಷದಲ್ಲಿ ಎಷ್ಟು ಉದ್ಯೋಗ ಸೃಷಿಸಿದೆ ಮಾಹಿತಿ ಕೊಡಲಿ ಅಮೆರಿಕದೊಂದಿಗಿನ ಒಪ್ಪಂದವು ರೈತರು ಹಾಗೂ ಕಾರ್ಮಿಕರು ಸೇರಿದಂತೆ ಸಾಮಾನ್ಯ ವರ್ಗದ ಹಿತಾಸಕ್ತಿಗಳಿಗೆ ಹಾನಿ ತಂದಿದೆ ಇದರ ವಿರುದ್ದ ಧ್ವನಿ ಎತ್ತಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ ಎಂದು ಸೈಯದ್ ಆಫ್ರೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...