ಬೀದರ್‌ | ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಸಾವು

Date:

ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಹುಮನಾಬಾದ್‌ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

- Advertisement -

ಕಲಬುರಗಿ ನಗರದ ಬಸವನಗರ ನಿವಾಸಿ ವಿಜಯಾನಂದ ರವಿಕುಮಾರ್‌ ಅಂಬುಲಗೆ (28) ಮೃತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಲಬುರಗಿ-ಬೀದರ್‌ ಡೆಮೊ ರೈಲಿನಲ್ಲಿ ಭಾಲ್ಕಿ ತಾಲ್ಲೂಕಿನ ಮೈಲಾರ ಮಲ್ಲಣ್ಣಾ ದೇವಸ್ಥಾನಕ್ಕೆ ಬರುವ ವೇಳೆ ಈ ದುರ್ಘಟನೆ ನಡೆದಿದೆ ಎಂದು ರೈಲ್ವೆ ಪೊಲೀಸರು ʼಈದಿನʼಕ್ಕೆ ತಿಳಿಸಿದ್ದಾರೆ.

ರೈಲು ಹುಮನಾಬಾದ್‌ ನಿಲ್ದಾಣದಲ್ಲಿ ನಿಲುಗಡೆಯಾಗಿತ್ತು. ಈ ವೇಳೆ ವಿಜಯಾನಂದ ಕುಡಿಯಲು ನೀರು ತರಲು ರೈಲಿನಿಂದ ಕೆಳಗಿಳಿದಿದ್ದರು. ರೈಲು ಚಲಿಸುತ್ತಿರುವುದನ್ನು ಕಂಡ ವಿಜಯಾನಂದ ಅವಸರದಲ್ಲಿ ರೈಲು ಹತ್ತುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ರೈಲು ಹಳಿ ಮೇಲೆ ಬಿದ್ದರು. ಈ ವೇಳೆ ರೈಲು ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಮನಾಬಾದ್‌ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಯಿತು.

ಈ ಸಂಬಂಧ ಬೀದರ್ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಯುಡಿಆರ್‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೀದರ್‌ | ಶನಿವಾರದ ಶಾಲಾ ಸಮಯ ಬದಲಾವಣೆಗೆ ಪ್ರೌಢ ಶಾಲಾ ಶಿಕ್ಷಕರ ಸಂಘ ಮನವಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...