ಗದಗ | ನೀರಿನ ಅರವಟಿಗೆ ಸೇವೆ ಆರಂಭಿಸಿದ ಡಿವೈಎಫ್ಐ

Date:

Advertisements
  • ಅಂಬೇಡ್ಕರ್ ಅವರ 132ನೇ ಜಯಂತೋತ್ಸವದ ಅಂಗವಾಗಿ ಸೇವೆ ಆರಂಭ
  • ನಗರದ ಹಲವು ಸಾರ್ವಜನಿಕ ಸ್ಥಳಗಳಲ್ಲಿ ನೀರಿನ ಅರವಟಿಗೆ ಇಟ್ಟ ಯುವಕರು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ತೀವ್ರವಾಗಿ ಬೇಸಿಗೆಯ ಬಿರು ಬಿಸಿಲು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಸಂಘಟನೆ ಯುವಜನರು ನೀರಿನ ಅರವಟಿಗೆಗಳ ಸೇವೆ ಆರಂಭಿಸಿದ್ದಾರೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕೆ ಗ್ರಾಮದಲ್ಲಿ ಮಂಗಳವಾರ ನೀರಿನ ಅರವಟಿಗೆ ಸೇವೆಗೆ ಚಾಲನೆ ನೀಡಿದ್ದಾರೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಕ್ಷಕ ಪ್ರಕಾಶ್ ಕರಕೀಕಟ್ಟಿ, “ಪ್ರಸ್ತುತ ದಿನಮಾನಗಳಲ್ಲಿ ಬೇಸಿಗೆ ಹವೆಯಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ಅಂಗವಿಕಲರು ಹಾಗೂ ವೃದ್ಧರು ನೀರಿನ ದಾಹ ಇಂಗಿಸಿಕೂಳ್ಳಲು ಕುಡಿಯುವ ನೀರಿನ ಅರವಟಿಗೆ ಅವಶ್ಯಕವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ಚಾಮರಾಜನಗರ | ವಿಚಿತ್ರ ಘಟನೆ; ಎರಡೆರಡು ಬಾರಿ ಮೃತಪಟ್ಟ ಚುನಾವಣಾ ಸಿಬ್ಬಂದಿ!

Advertisements

“ಅರವಟಿಗೆ ಸೇವೆಯನ್ನು ಬೆಳವಣಿಕೆ ಗ್ರಾಮದ ಡಿವೈಎಫ್ಐ ಸಂಘಟನೆ ಯುವಕರು ಬಸ್ ನಿಲ್ದಾಣ ಸೇರಿದಂತೆ ಗ್ರಾಮದ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಮಾಡುತ್ತಿರುವ ಒಳ್ಳೆಯ ಕಾರ್ಯ” ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಡಿವೈಎಫ್ಐ ಮುಖಂಡ ಸಲ್ಮಾನ್ ಹುಲ್ಲೂರು, ಹನಮಂತ ಮಾದರ, ಹಾಲಭಾವಿ ವಕೀಲರು, ಸಿಐಟಿಯು ಜಿಲ್ಲಾ ಅಧ್ಯಕ್ಷ ಮಹೇಶ್ ಹೀರೆಮಠ, ಸಂಕಪ್ಪ ಕುರಹಟ್ಟಿ, ಮೈಲಾರಪ್ಪ ಮಾದರ, ಹನಮಂತ ತಾಳಿ, ರಾಮಣ್ಣ ಮಲ್ಲಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X