ಉಡುಪಿ | ಜ 20ರವರೆಗೆ ಯುವನಿಧಿ: ವಿಶೇಷ ನೋಂದಣಿ ಅಭಿಯಾನ

Date:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ 20 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಬಿ ಬ್ಲಾಕ್, ರೂ.ನಂ. 201 ರ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಇಲ್ಲಿ ಅಯೋಜಿಸಲಾಗಿದೆ.

- Advertisement -

ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳು ಹಾಗೂ ಡಿಪ್ಲೋಮಾ ಕಾಲೇಜುಗಳಲ್ಲಿಯೂ ವಿಶೇಷ ನೋಂದಣಿ ಅಭಿಯಾನವನ್ನು ಆಯೋಜಿಸಲಾಗಿದ್ದು, ಆಯಾ ತಾಲೂಕಿನ ಅಭ್ಯರ್ಥಿಗಳು ಇದರ ಉಪಯೋಗವನ್ನು ಪಡೆದುಕೊಳ್ಳಬಹುದು. ಪ್ರತಿ ತಿಂಗಳು ಪದವಿಧರರಿಗೆ 3,000 ರೂ. ಹಾಗೂ ಡಿಪ್ಲೋಮಾದಾರರಿಗೆ 1,500 ರೂ. ಗಳನ್ನು ನಿರುದ್ಯೋಗ ಭತ್ಯೆಯ ಮೂಲಕ ನೀಡಲಾಗುವುದು. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೊರೈಸಿದ ಅಭ್ಯರ್ಥಿಗಳು ಕೂಡ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು: 2024-25 ರಲ್ಲಿ ಪದವಿ/ಡಿಪ್ಲೋಮಾ ಹಾಗೂ ಸ್ನಾತಕೋತರ ಉತ್ತಿರ್ಣರಾದ ವಿಧ್ಯಾರ್ಥಿಗಳು, ಪದವಿ/ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯೊಳಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿಧ್ಯಾಭ್ಯಾಸ ಮುಂದುವರೆಸದೆ ಇರುವವರು ಹಾಗೂ ಕರ್ನಾಟಕದಲ್ಲಿ ವಾಸವಿರುವರು (ಕನಿಷ್ಠ 6 ವರ್ಷಗಳ ವರೆಗೆ ಪದವಿ/ಡಿಪ್ಲೋಮಾ ದವರೆಗೆ ಅಧ್ಯಯನ ಮಾಡಿದವರು) ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಪ್ರತಿ ತಿಂಗಳು ಈ ಪ್ರಯೋಜನ ಪಡೆಯಬೇಕಿದ್ದರೆ, ಪ್ರತಿ ತಿಂಗಳಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆAದು ಹಾಗೂ ಸ್ವಯಂ ಉದ್ಯೋಗಿಯಲ್ಲ ವೆಂದು ಸ್ವಯಂ ಘೋಷಣೆ ಮಾಡಬೇಕಾಗಿರುತ್ತದೆ. ಪ್ರಸಕ್ತ ಪ್ರತೀ ಗ್ರಾಮದಲ್ಲಿ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರ ಲಭ್ಯವಿದ್ದು, ಅಭ್ಯರ್ಥಿಗಳು ನೋಂದಣಿಯನ್ನು ಮಾಡಿಕೊಳ್ಳಬಹುದು ಹಾಗೂ ಸ್ವಯಂ ಘೋಷಣೆಯನ್ನು ಪ್ರತೀ ತಿಂಗಳು 25ನೇ ತಾರೀಕಿನ ಒಳಗಾಗಿ ಸಲ್ಲಿಸಬೇಕು. ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ. ಪ್ರತೀ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್.ಎಂ.ಎಸ್ ಸಂದೇಶ ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಅಥವಾ ಯುವನಿಧಿ ಯೋಜನೆಯ ಟೋಲ್ ಪ್ರೀ ಸಹಾಯವಾಣಿ ಸಂಖ್ಯೆ 18005999918 ಅಥವಾ 18005997154 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಮೊ.ನಂ: 9945856670, 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...