ಝೀರೊ ಟ್ರಾಫಿಕ್ ಸೌಲಭ್ಯ : ಮಹತ್ವದ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Date:

 • ಟ್ವೀಟ್ ಮೂಲಕ ಮಾಹಿತಿ ನೀಡಿದ ಸಿದ್ದರಾಮಯ್ಯ
 • ಝೀರೊ ಟ್ರಾಫಿಕ್‌ನಿಂದ ಸಾರ್ವಜನಿಕರಿಗೆ ಅನಾನುಕೂಲ ಹಿನ್ನೆಲೆ

  ಬೆಂಗಳೂರು : ಶನಿವಾರವಷ್ಟೇ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಸಿದ್ದರಾಮಯ್ಯನವರು, ಭಾನುವಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿ, ಸಾರ್ವಜನಿಕರಿಂದ ಮೆಚ್ಚುಗೆ ಗಳಿಸಿದ್ದಾರೆ.

  ಮುಖ್ಯಮಂತ್ರಿಗಳ ಸಂಚಾರಕ್ಕಾಗಿ ಈವರೆಗೆ ನೀಡಲಾಗುತ್ತಿದ್ದ ಝೀರೊ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ.

  ಈ ಬಗ್ಗೆ ಟ್ವಿಟರ್‌ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಝೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಝೀರೊ ಟ್ರಾಫಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

  ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

  ಮುಖ್ಯಮಂತ್ರಿಗಳ ಈ ನಿರ್ಧಾರಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮ್ಮ ತುರ್ತು ಅಗತ್ಯದ ಸಂದರ್ಭಗಳಲ್ಲಿ ಝೀರೋ ಟ್ರಾಫಿಕ್ ಸೌಲಭ್ಯ ಬಳಸಿಕೊಳ್ಳಿ ಎಂದು ಕೆಲವರು ಸಲಹೆ ನೀಡಿದ್ದಾರೆ.

  ಈ ಹಿಂದೆ ಗೃಹಮಂತ್ರಿಯಾಗಿದ್ದ ರಾಮಲಿಂಗಾರೆಡ್ಡಿಯವರು, ‘ಝೀರೋ ಟ್ರಾಫಿಕ್ ಬೇಡ’ ಎನ್ನುವ ಮೂಲಕ, ಶಿಷ್ಟಾಚಾರಕ್ಕೆ ಅಗ್ರಪಂಕ್ತಿ ಹಾಕಿದ್ದರು.

  ವಿಶ್ವದ ನಿಧಾನಗತಿಯ ನಗರಗಳ ಪಟ್ಟಿಯಲ್ಲಿ ಸಿಲಿಕಾನ್‌ ಸಿಟಿ ಎರಡನೇ ಸ್ಥಾನದಲ್ಲಿದೆ. ಬೆಂಗಳೂರು ನಗರದಲ್ಲಿ 10 ಕಿ.ಮೀ ದೂರ ಕ್ರಮಿಸಲು ಸರಾಸರಿ 29 ನಿಮಿಷ ಹಾಗೂ 10 ಸೆಕೆಂಡುಗಳಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಇತ್ತೀಚೆಗಿನ ಅಧ್ಯಯನವೊಂದು ತನ್ನ ವರದಿಯಲ್ಲಿ ತಿಳಿಸಿತ್ತು. ಈ ವರದಿಯ ಪ್ರಕಾರ, ಲಂಡನ್ ನಗರ ಮೊದಲ ಸ್ಥಾನದಲ್ಲಿದೆ.

  ಈ ದಿನ ಡೆಸ್ಕ್‌
  Website | + posts

  ಪೋಸ್ಟ್ ಹಂಚಿಕೊಳ್ಳಿ:

  LEAVE A REPLY

  Please enter your comment!
  Please enter your name here

  ಪೋಸ್ಟ್ ಹಂಚಿಕೊಳ್ಳಿ:

  ನಮ್ಮನ್ನು ಬೆಂಬಲಿಸಿ

  ಹೆಚ್ಚು ಓದಿಸಿಕೊಂಡ ಲೇಖನಗಳು

  ವಿಡಿಯೋ

  ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
  Related

  ಇದೇ ರೀತಿಯ ಇನ್ನಷ್ಟು ಲೇಖನಗಳು
  Related

  ರೇಣುಕಾಸ್ವಾಮಿ ಕೊಲೆ ಪ್ರಕರಣ | ಎ1 ಆರೋಪಿ ಪವಿತ್ರಾ ಗೌಡ ಜೈಲಿಗೆ; ನಟ ದರ್ಶನ್ ಪೊಲೀಸ್ ಕಸ್ಟಡಿಗೆ

  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜೂನ್ 20) ಪೊಲೀಸ್ ಕಸ್ಟಡಿ...

  ಬೆಳಗಾವಿ | ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜುಲೈ 1ರಿಂದ ಅಹೋರಾತ್ರಿ ಧರಣಿ 

  ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ಪಂಚಾಯತಿ ಹಾಗೂ ಮುದೆನೂರ ಮತ್ತು ಓಬಳಾಪೂರ...