ಜೊಯಿಡಾ | ರಾಮನಗರ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ದಾಳಿ: 90 ಲಕ್ಷ ಮೌಲ್ಯದ ENA(ಸ್ಪಿರಿಟ್) ಜಪ್ತಿ, ಇಬ್ಬರ ಬಂಧನ

Date:

ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರ ಚೆಕ್‌ಪೋಸ್ಟ್ ಬಳಿ ಅಬಕಾರಿ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಗೋವಾಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 90 ಲಕ್ಷ ರೂಪಾಯಿ ಮೌಲ್ಯದ ಮದ್ಯಸಾರ (Extra Neutral Alcohol) ಹಾಗೂ ಎರಡು ಟ್ಯಾಂಕರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಘಟನೆಯ ವಿವರ: ಧಾರವಾಡ-ಗೋವಾ ರಾಷ್ಟ್ರೀಯ ಹೆದ್ದಾರಿಯ ಟೋಲ್ ಗೇಟ್ ಬಳಿ ಫೆಬ್ರವರಿ 21ರಂದು ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ತಪಾಸಣೆ ನಡೆಸಿದರು. ಈ ವೇಳೆ ದಾವಣಗೆರೆಯಿಂದ ಗೋವಾಕ್ಕೆ ಸಾಗುತ್ತಿದ್ದ ಎರಡು ಟ್ಯಾಂಕರ್‌ಗಳನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಬಯಲಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮೊದಲ ಟ್ಯಾಂಕರ್ (MP-09 HH-1908) ನಲ್ಲಿ 30,000 ಲೀಟರ್ ‘Denatured rectified spirit’ ಎಂದು ನಕಲಿ ದಾಖಲೆ ಸೃಷ್ಟಿಸಲಾಗಿತ್ತು. ಎರಡನೇ ಟ್ಯಾಂಕರ್ (KA-48 A-2218) ನಲ್ಲಿ 20,000 ಲೀಟರ್ ‘Ethanol’ ಸಾಗಿಸಲಾಗುತ್ತಿದೆ ಎಂದು ನಕಲಿ ದಾಖಲೆಗಳನ್ನು ತೋರಿಸಲಾಗಿತ್ತು.

ಆದರೆ, ಸಂಶಯಗೊಂಡ ಅಧಿಕಾರಿಗಳು ಪ್ರೈಮರಿ ಡಿಸ್ಟಿಲರಿಯ ಕೆಮಿಸ್ಟ್‌ರನ್ನು ಸ್ಥಳಕ್ಕೆ ಕರೆಸಿ ಆಲ್ಕೋ ಮೀಟರ್ ಮೂಲಕ ಪರೀಕ್ಷಿಸಿದಾಗ, ಅದು ಮದ್ಯ ತಯಾರಿಕೆಗೆ ಬಳಸುವ ‘Extra Neutral Alcohol’ (ENA) ಎಂಬುದು ದೃಢಪಟ್ಟಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೋರ್ ಮೂಲದ ಮಗ್ನರ್ ಸಿಂಗ್ ಹಾಗೂ ಗದಗ ಜಿಲ್ಲೆಯ ರೋಣ ತಾಲೂಕಿನ ಧರ್ಮಪ್ಪ ಕಳಕಪ್ಪ ಕಟ್ಟಿಮನಿ ಎಂಬ ಇಬ್ಬರು ಚಾಲಕರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಲೋಕಾಯುಕ್ತ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ; ಶಾಸಕರ ಬಹಿರಂಗ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಗರಂ

ಜಪ್ತುಪಡಿಸಲಾದ 50,000 ಲೀಟರ್ ಮದ್ಯಸಾರದ ಅಂದಾಜು ಬೆಲೆ 40 ಲಕ್ಷ ರೂಪಾಯಿ ಹಾಗೂ ಎರಡು ಟ್ಯಾಂಕರ್‌ಗಳ ಬೆಲೆ 50 ಲಕ್ಷ ರೂಪಾಯಿ ಸೇರಿ ಒಟ್ಟು 90 ಲಕ್ಷ ರೂಪಾಯಿ ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಬಕಾರಿ ಇಲಾಖೆಯ ಮಂಗಳೂರು ವಿಭಾಗದ ಜಂಟಿ ಆಯುಕ್ತರಾದ ಎ.ಎಲ್. ನಾಗೇಶ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಅಮಾನುಲ್ಲಾ ಖಾನ್ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ. ಯಲ್ಲಾಪುರ ಅಬಕಾರಿ ಉಪ ಅಧೀಕ್ಷಕರು ಹಾಗೂ ದಾಂಡೇಲಿ ವಲಯದ ಅಬಕಾರಿ ನಿರೀಕ್ಷಕರು ಈ ಕುರಿತು ಪ್ರತ್ಯೇಕ ಮೊಕದ್ದಮೆಗಳನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...